Tuesday, September 15, 2026

2026-27 ನೇ ಸಾಲಿನ ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕುಂದಾಪುರ : ನಾಡಾದಲ್ಲಿನ ರೇ.ಫಾ.ರೋಬರ್ಟ್ ಕೈಗಾರಿಕಾ ತರಬೇತಿ ಸಂಸ್ಥೆ ( ಐಟಿಐ) ಗೆ 2026-27ನೇ ಸಾಲಿನ ಪ್ರವೇಶಾವಕಾಶ ಬಯಸುವ ಆರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಕೆಲವೇ ಸೀಟುಗಳು ಬಾಕಿ ಉಳಿದಿದ್ದು, ಆಸಕ್ತ ವಿದ್ಯಾರ್ಥಿಗಳು ಕೂಡಲೇ ಅರ್ಜಿ ಸಲ್ಲಿಸುವಂತೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ಪ್ರಾಚಾರ್ಯರ ಜಂಟಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಂಸ್ಥೆಯಲ್ಲಿ ದೆಹಲಿಯ ರಾಷ್ಟ್ರೀಯ ವೃತ್ತಿ ಶಿಕ್ಷಣ ಮಂಡಳಿಯಿಂದ ( ಎನ್ಸಿವಿಟಿ ) ಶಾಶ್ವತ ಸಂಯೋಜನೆ ಪಡೆದುಕೊಂಡಿರುವ ಎರಡು ವರ್ಷ ಅವಧಿಯ ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಎಲೆಕ್ಟ್ರೀಷಿಯನ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್ (ಎಂಎಂವಿ) ಹ ಹಾಗೂ ಒಂದು ವರ್ಷ ಅವಧಿಯ ಮೆಕ್ಯಾನಿಕ್ ಡಿಸೇಲ್ ಕೋರ್ಸುಗಳಿಗೆ ಎಸ್ಎಸ್ಎಲ್ಸಿ ಪಾಸಾಗಿರುವ ಅರ್ಹ ಅಭ್ಯರ್ಥಿಗಳಿಗೆ ಪ್ರವೇಶಕ್ಕೆ ಅವಕಾಶವಿದ್ದು, ಪ್ರವೇಶಾವಕಾಶ ಅಪೇಕ್ಷಿಸುವವರು ಸರ್ಕಾರದ ನಿಯಮಾವಳಿಗಳಂತೆ ದಾಖಲೆಗಳೊಂದಿಗೆ ಜು.25 ರ ಒಳಗೆ ಸಂಸ್ಥೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಸರ್ಕಾರದ ಮೀಸಲಾತಿಯಂತೆ ಅಭ್ಯರ್ಥಿಗಳಿಗೆ ಪ್ರವೇಶಾವಕಾಶ ನೀಡಲಾಗುವುದು. ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿರುವ ಅಭ್ಯರ್ಥಿಗಳ ಉದ್ಯೋಗಾವಕಾಶಕ್ಕಾಗಿ ರಾಷ್ಟ್ರೀಯ ಹಾಗೂ ಬಹು ರಾಷ್ಟ್ರೀಯ ಪ್ರಸಿದ್ಧ ಕಂಪೆನಿಗಳ ಒಡಂಬಡಿಕೆಯೊಂದಿಗೆ ಕ್ಯಾಂಪಸ್ ಸಂದರ್ಶನಕ್ಕೂ ಅವಕಾಶ ಕಲ್ಪಿಸಲಾಗುವುದು. ಆಸಕ್ತರು ಖುದ್ದಾಗಿ ಸಂಸ್ಥೆಗೆ ಬಂದು ಮಾಹಿತಿ ಪಡೆದುಕೊಳ್ಳಬಹುದು ಅಥವಾ ದೂರವಾಣಿ ಸಂಖ್ಯೆ 9113234392 ನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.

More like this
Related

 ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರ ಪಾಣಿಯಾಗಿ ಜನಾರ್ದನ್ ಕೊಡವೂರು ನೇಮಕ

ಉಡುಪಿ: ಇತಿಹಾಸ ಪ್ರಸಿದ್ಧ ಮಹತೊಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ...

ಇತರರಿಗೆ ಸಹಾಯ ಮಾಡುವ ಪ್ರತಿಯೊಬ್ಬರಲ್ಲಿ ದೇವರನ್ನು ಕಾಣಬಹುದು : ಬಿಷಪ್ ಲೆಸ್ಲಿ ಸಿ ಡಿಸೋಜಾ

ಉಡುಪಿ: ನಾವು ಕಣ್ಣಿನಿಂದ ದೇವರನ್ನು ನೋಡದೇ ಇದ್ದರೂ, ಕಷ್ಟಕಾಲದಲ್ಲಿ ನಮಗೆ ಸಹಾಯ...

ಬಿಜೆಪಿ ಅಭ್ಯರ್ಥಿಗೆ ಕೇವಲ 1 ಮತ, ಆಘಾತಕಾರಿ ಫಲಿತಾಂಶ: ಹೆಂಡತಿ, ಅಪ್ಪ, ಅಮ್ಮನ ವೋಟ್ ಯಾರಿಗೆ?

ಜೈಪುರ: ರಾಜಸ್ಥಾನ ನಾಗರಿಕ ಚುನಾವಣೆಯ ಫಲಿತಾಂಶದ ನಡುವೆ ಆಘಾತಕಾರಿ ಮತ್ತು ಆಸಕ್ತಿದಾಯಕ...

Copying is disabled on Udupi Digital News.