Tuesday, September 15, 2026

ಜೂ. 29: ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ, ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಕಾರ್ಕಳ : ಉಡುಪಿ ಜಿಲ್ಲಾ ಪೊಲೀಸ್ ಮತ್ತು ಕಾರ್ಕಳ ಪೊಲೀಸ್ ಇಲಾಖೆ ಆಶ್ರಯದಲ್ಲಿ ಕಾರ್ಕಳ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಇದ ರ ಸಹಯೋಗದೊಂದಿಗೆ , ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರವು ಜೂ.29ರ ಸಂಜೆ 4 ಗಂಟೆಗೆ ಕಾರ್ಕಳದ ಮಂಜುನಾಥ ಪೈ ಸಭಾಭವನ ನಡೆಯಲಿದೆ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪೊಲೀಸ್ ಕನ್ಸ್ಟೇಬಲ್ ಗಳ ನೇರ ನೇಮಕಾತಿ ಮೂಲಕ 3395 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು , ಅರ್ಜಿ ಸಲ್ಲಿಸಲು 2026 ರ ಜುಲೈ 3 ಕೊನೆಯ ದಿನಾಂಕವಾಗಿದ್ದು, ಪೊಲೀಸ್ ಇಲಾಖೆ ಹುದ್ದೆಗೆ ಈ ಭಾಗದ ಹೆಚ್ಚಿನ ಯುವಕ ಯುವತಿಯರು ಪೊಲೀಸ್ ಇಲಾಖೆಯಲ್ಲಿ ಆಯ್ಕೆ ಗೊಳ್ಳಲೆoಬ ಉದ್ದೇಶದಿಂದ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಪೊಲೀಸ್ ಇಲಾಖೆಯ ಹಿರಿಯ, ಅನುಭವಿ ಅಧಿಕಾರಿಗಳಿಂದ ಮಾಹಿತಿ ನೀಡಲಾಗುವುದು ಯುವಕ, ಯುವತಿಯರು ವಿದ್ಯಾರ್ಥಿಗಳು ಹಾಗೂ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿ ಹರಿರಾಮ್ ಶಂಕರ್ ಐ ಪಿ ಎಸ್ ಮತ್ತು ಕಾರ್ಕಳ ಡಿ ವೈ ಎಸ್ ಪಿ ವಿಜಯ ಪ್ರಸಾದ್ ಕಾರ್ಕಳ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಮೊಹಮ್ಮದ್ ಶರೀಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More like this
Related

 ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರ ಪಾಣಿಯಾಗಿ ಜನಾರ್ದನ್ ಕೊಡವೂರು ನೇಮಕ

ಉಡುಪಿ: ಇತಿಹಾಸ ಪ್ರಸಿದ್ಧ ಮಹತೊಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ...

ಇತರರಿಗೆ ಸಹಾಯ ಮಾಡುವ ಪ್ರತಿಯೊಬ್ಬರಲ್ಲಿ ದೇವರನ್ನು ಕಾಣಬಹುದು : ಬಿಷಪ್ ಲೆಸ್ಲಿ ಸಿ ಡಿಸೋಜಾ

ಉಡುಪಿ: ನಾವು ಕಣ್ಣಿನಿಂದ ದೇವರನ್ನು ನೋಡದೇ ಇದ್ದರೂ, ಕಷ್ಟಕಾಲದಲ್ಲಿ ನಮಗೆ ಸಹಾಯ...

ಬಿಜೆಪಿ ಅಭ್ಯರ್ಥಿಗೆ ಕೇವಲ 1 ಮತ, ಆಘಾತಕಾರಿ ಫಲಿತಾಂಶ: ಹೆಂಡತಿ, ಅಪ್ಪ, ಅಮ್ಮನ ವೋಟ್ ಯಾರಿಗೆ?

ಜೈಪುರ: ರಾಜಸ್ಥಾನ ನಾಗರಿಕ ಚುನಾವಣೆಯ ಫಲಿತಾಂಶದ ನಡುವೆ ಆಘಾತಕಾರಿ ಮತ್ತು ಆಸಕ್ತಿದಾಯಕ...

Copying is disabled on Udupi Digital News.