Sunday, September 13, 2026

ಶ್ರೀಕೃಷ್ಣಮಠದಲ್ಲಿ ಸಂಭ್ರಮದ ಮೂರುತೇರು ಉತ್ಸವ

ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ಶ್ರೀಕೃಷ್ಣ ಮಠದಲ್ಲಿ ಮಕರಸಂಕ್ರಾಂತಿ ನಿಮಿತ್ತ ಬುಧವಾರ ಸಂಜೆ ಸಂಭ್ರಮದ ಬ್ರಹ್ಮರಥ ಸಹಿತ ಮೂರುತೇರು ಉತ್ಸವ ನಡೆಯಿತು.
ಆಚಾರ‍್ಯ ಮಧ್ವರು ಮಕರ ಸಂಕ್ರಮಣದಂದು ಶ್ರೀಕೃಷ್ಣನ ಪ್ರತಿಷ್ಠಾಪನೆ ನಡೆಸಿದರು ಎಂಬ ಐತಿಹ್ಯದ ಹಿನ್ನೆಲೆಯಲ್ಲಿ ಬೆಳಗ್ಗಿನಿಂದಲೇ ಮಹಾಭಿಷೇಕ ಸಹಿತ ವಿಶೇಷ ಪೂಜೆ ಪರ‍್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ನೆರವೇರಿಸಿದರು. ಏಕಾದಶಿ ಹಿನ್ನೆಲೆಯಲ್ಲಿ ಪ್ರಸಾದ ಭೋಜನ ವ್ಯವಸ್ಥೆ ಇರಲಿಲ್ಲ.
ಸಂಜೆ ಪರ‍್ಯಾಯ ಪುತ್ತಿಗೆ ಶ್ರೀಪಾದರ ನೇತೃತ್ವದಲ್ಲಿ ಮುಹೂರ್ತ ನಡೆದಿದ್ದು, ಅದಮಾರು ಹಿರಿಯ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಮತ್ತು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಭಾಗವಹಿಸಿದ್ದರು. ಭಾವಿ ಪರ್ಯಾಯ ಶೀರೂರು ಶ್ರೀ ವೇದವರ್ಧನತೀರ್ಥ ಶ್ರೀಪಾದರು ಮುಹೂರ್ತ ಸಂದರ್ಭದಲ್ಲಿ ಉಪಸ್ಥಿತರಿದ್ದರು.

More like this
Related

ಠಾಣೆಗೆ ನುಗ್ಗಿದರೆ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆ ಉಚಿತ : ಪ್ರತಾಪ್ ಸಿಂಹ ಹೆಸರು ಹೇಳದೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬೆಂಗಳೂರು: ಮೈಸೂರಿನ ಕಡೆಯ ‘ಪೇಟೆ ರೌಡಿ’ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ. ಕಾನೂನು...

ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವಕ್ಕೆ ವಜ್ರ ಮಹೋತ್ಸವದ ಸಂಭ್ರಮ

ವಜ್ರ ಮಹೋತ್ಸವದ ಅಂಗವಾಗಿ ‘ರಾಜ ದರ್ಬಾರ್’ ವೇದಿಕೆ ನಿರ್ಮಾಣ ಉಡುಪಿ: ಕಡಿಯಾಳಿ ಸಾರ್ವಜನಿಕ...

ಕರಾವಳಿ ಸಚಿವ ಸಂಪುಟ ಸಭೆ: ₹5,000 ಕೋಟಿ ವಿಶೇಷ ಪ್ಯಾಕೇಜ್ ಸೇರಿ ಪ್ರಮುಖ ಬೇಡಿಕೆಗಳಿಗೆ ಶಾಸಕ ಮಂಜುನಾಥ್ ಭಂಡಾರಿ ಮನವಿ

ಮಂಗಳೂರು: ಕರಾವಳಿ ಭಾಗದ ಸುದೀರ್ಘ ಬೇಡಿಕೆಗಳು ಹಾಗೂ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ...

ಉಡುಪಿ ಕಥೊಲಿಕ್ ಶಿಕ್ಷಣ ಸೊಸೈಟಿ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ

ಶಿಕ್ಷಕರು ವಿದ್ಯಾರ್ಥಿಗಳನ್ನು ಮಾನವರನ್ನಾಗಿ ರೂಪಿಸುವ ಸಮಾಜದ ಶಿಲ್ಪಿಗಳು : ವಂ. ಫ್ರಾನ್ಸಿಸ್...

Copying is disabled on Udupi Digital News.