Saturday, May 30, 2026

ಆಸ್ಕರ್ ಪ್ರಶಸ್ತಿ: ಅತ್ಯುತ್ತಮ ಚಿತ್ರ ಸ್ಪರ್ಧೆಯ ರೇಸ್ ಗೆ ಕಾಂತಾರ ಚಾಪ್ಟರ್-1 ಪ್ರವೇಶ

ಉಡುಪಿ ಡಿಜಿಟಲ್ ನ್ಯೂಸ್ ಡಾಟ್ ಕಾಮ್
ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ಆಸ್ಕರ್ ರೇಸ್ ನಲ್ಲಿ ಸ್ಥಾನ ಪಡೆದಿದೆ. ಭಾರತದಿಂದ ಅಧಿಕೃತ ಆಯ್ಕೆಯಲ್ಲದಿದ್ದರೂ, ಪ್ರತ್ಯೇಕ ಅರ್ಜಿ ಮೂಲಕ ‘ಅತ್ಯುತ್ತಮ ಚಿತ್ರ’ ವಿಭಾಗದಲ್ಲಿ ಸ್ಪರ್ಧಿಸುತ್ತಿದೆ. 850 ಕೋಟಿಗೂ ಹೆಚ್ಚು ಗಳಿಸಿ ಒಟಿಟಿಯಲ್ಲೂ ಮೆಚ್ಚುಗೆ ಪಡೆದ ಈ ಚಿತ್ರ ಹಾಲಿವುಡ್ ಸಿನಿಮಾಗಳ ಜೊತೆ ಸ್ಪರ್ಧಿಸಲಿದೆ.

ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಆ ಬಳಿಕ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ನಿರ್ದೇಶನ ಮಾಡಿದರು. ಈ ಚಿತ್ರವನ್ನು ಜನರು ಇಷ್ಟಪಟ್ಟಿದ್ದು, ಬಾಕ್ಸ್ ಆಫೀಸ್ ನಲ್ಲಿ 850 ಕೋಟಿ ರೂಪಾಯಿಗೂ ಹೆಚ್ಚಿನ ವಹಿವಾಟು ಮಾಡಿದೆ. ಈ ಸಿನಿಮಾ ಒಟಿಟಿಯಲ್ಲೂ ಪ್ರಸಾರ ಕಂಡಿದೆ. ಹೀಗಿರುವಾಗಲೇ ಸಿನಿಮಾ ಆಸ್ಕರ್ ರೇಸ್ ನಲ್ಲಿ ಸ್ಥಾನ ಪಡೆದುಕೊಂಡಿದೆ.

‘ಕಾಂತಾರ: ಚಾಪ್ಟರ್ 1’ ಚಿತ್ರವನ್ನು ನಿರ್ಮಾಣ ಮಾಡಿದ್ದು ವಿಜಯ್ ಕಿರಗಂದೂರು ಅವರು ‘ಹೊಂಬಾಳೆ ಫಿಲ್ಮ್ಸ್’. ಈ ಸಂಸ್ಥೆ ಪ್ರಸ್ತುತಪಡಿಸಿದ ‘ಮಹಾವತಾರ ನರಸಿಂಹ’ ಕೂಡ ಸಾಮಾನ್ಯ ಪ್ರವೇಶ ಪಟ್ಟಿ ಮೂಲಕ ರೇಸ್ ನಲ್ಲಿ ಸ್ಥಾನ ಪಡೆದಿದೆ. ಹಲವು ಹಂತಗಳಲ್ಲಿ ಸ್ಪರ್ಧೆ ನಡೆಯಲಿದ್ದು, ಈ ಎರಡು ಸಿನಿಮಾಗಳ ಪೈಕಿ ಯಾವುದಾದರೂ ಚಿತ್ರಕ್ಕೆ ಗೆಲುವು ಸಿಗುತ್ತದೆಯೇ ಎಂಬ ಕುತೂಹಲ ಮೂಡಿದೆ.

ಈವರೆಗೆ ಭಾರತದಲ್ಲಿ ನಿರ್ಮಾಣವಾದ ಯಾವುದೇ ಚಿತ್ರಕ್ಕೆ ಆಸ್ಕರ್ ಸಿಕ್ಕಿಲ್ಲ. ಈ ಮೊದಲು ‘ಆರ್ಆರ್ಆರ್’ಚಿತ್ರದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದು ದಾಖಲೆ ಬರೆದಿತ್ತು. ಪ್ರತ್ಯೇಕವಾಗಿ ಅರ್ಜಿ ಸಲ್ಲಿಕೆ ಮಾಡಿ ರೇಸ್ ನಲ್ಲಿ ಈ ಹಾಡು ಸ್ಥಾನ ಪಡೆದುಕೊಂಡಿತ್ತು. ‘ಕಾಂತಾರ: ಚಾಪ್ಟರ್ 1’ ಚಿತ್ರವನ್ನು ರಿಷಬ್  ನಿರ್ದೇಶನ ಮಾಡಿ, ನಟಿಸಿದ್ದಾರೆ. ರುಕ್ಮಿಣಿ ವಸಂತ್, ಜಯರಾಮ್, ಗುಲ್ಶನ್ ದೇವಯ್ಯ ಸೇರಿದಂತೆ ಅನೇಕರು ಚಿತ್ರದಲ್ಲಿ ನಟಿಸಿದ್ದಾರೆ.

More like this
Related

ಧಾರ್ಮಿಕ ಕಾರ್ಯಕ್ರಮಗಳು ಸಮಾಜ ಸುಧಾರಣೆಗೆ ಸಹಕಾರಿಯಾಗಲಿ- ಪ್ರಸಾದ್ ರಾಜ್ ಕಾಂಚನ್

ಮಹಾರುದ್ರಯಾಗದ ಯಶಸ್ಸಿಗೆ ಶ್ರಮಿಸಿದವರಿಗೆ ಕೃತಜ್ಞತೆ ಸಲ್ಲಿಸುವ ಸಭೆ ಉಡುಪಿ: ಕೊಡವೂರು ಶ್ರೀ ಮಹತೋಭಾರ...

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಆಯ್ಕೆ

ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ...

ಐಪಿಎಲ್ 2026 ಫೈನಲ್: ಗುಜರಾತ್ ಟೈಟನ್ಸ್ ವಿರುದ್ಧ ಆರ್‌ಸಿಬಿ ಕಾದಾಟ ಇಂದು;

ಹಾಲಿ ಚಾಂಪಿಯನ್ ಆರ್‌ಸಿಬಿ ಮತ್ತು 2022ರ ಚಾಂಪಿಯನ್ ಗುಜರಾತ್ ಟೈಟನ್ಸ್ ನಡುವೆ...

ಕೇರಳದಲ್ಲಿ ಭಾರೀ ಡ್ರಗ್ಸ್ ಜಾಲ ಭೇದನೆ; ₹70 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು ವಶ

ಆಪರೇಷನ್ ಚಕ್ರವ್ಯೂಹ’ ಅಡಿಯಲ್ಲಿ ಡಿಆರ್‌ಐ ಕಾರ್ಯಾಚರಣೆ; 24 ಕೆ.ಜಿ.ಗಿಂತ ಹೆಚ್ಚು ಮಾದಕ...

Copying is disabled on Udupi Digital News.