Tuesday, September 15, 2026

ಬೈಕ್- ಟಾಟಾ ಏಸ್ ನಡುವೆ ಅಪಘಾತ: ಬೈಕ್ ಸವಾರ ಮೃತ್ಯು, ಸಹ ಸವಾರ ಗಂಭೀರ

ಕುಂದಾಪುರ: ಬೈಕ್ ಹಾಗೂ ಟಾಟಾ ಏಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತವೊಂದರಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಖಂಬದಕೋಣೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಅಪಘಾತದಲ್ಲಿ ಸಾವನ್ನಪ್ಪಿದ ಬೈಕ್ ಸವಾರನನ್ನು ಉಪ್ಪುಂದ ಶಾಲೆಬಾಗಿಲು ಸಮೀಪದ ಫಿಶರೀಸ್ ಕಾಲನಿ ನಿವಾಸಿ ಪರಮೇಶ್ವರ ಖಾರ್ವಿ ಎಂಬುವರ ಪುತ್ರ ಭುವನ್ (19) ಎಂದು ಗುರುತಿಸಲಾಗಿದೆ. ಅಲ್ಲಿಯ ನಿವಾಸಿ ಗಿರಿಜಾ ಖಾರ್ವಿ ಅವರ ಪುತ್ರ ಮಧು (20) ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾನೆ.

ಭುವನ್ ಹಾಗೂ ಮಧು ಅವರು ಬೈಕಿನಲ್ಲಿ ಕುದಾಪುರ ಕಡೆಯಿಂದ ಉಪ್ಪುಂದಕ್ಕೆ ಬರುತ್ತಿದ್ದರು. ಬೈಕ್‌ ಖಂಬದಕೋಣೆ ಸಮೀಪಿಸುತ್ತಿದ್ದಂತೆಯೇ ಟಾಟಾ ಏಸ್ ವಾಹನವೊಂದು ಹೆದ್ದಾರಿಯಲ್ಲಿ ಹಠಾತ್ತನೆ ಯೂ ಟರ್ನ್ ತೆಗೆದುಕೊಂಡ ವೇಳೆ ಈ ಅವಘಡ ಸಂಭವಿಸಿದೆ.

ಟಾಟಾ ಏಸ್ ಗೆ ಢಿಕ್ಕಿ ಹೊಡೆದ ಬೈಕ್ ನಿಯಂತ್ರಣ ತಪ್ಪಿ ರಸ್ತೆಗಪ್ಪಳಿಸಿದ ಪರಿಣಾಮ ಬೈಕ್ ಸವಾರ ಭುವನ್ ತಲೆಗೆ ಗಂಭೀರ ಗಾಯಗಳಾಗಿ ತೀವ್ರ ರಕ್ತಸ್ರಾವದೊಂದಿಗೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಹಿಂಬದಿ ಸವಾರ ಮಧು ಅವರನ್ನು ತಲೆ, ಎದೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More like this
Related

 ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರ ಪಾಣಿಯಾಗಿ ಜನಾರ್ದನ್ ಕೊಡವೂರು ನೇಮಕ

ಉಡುಪಿ: ಇತಿಹಾಸ ಪ್ರಸಿದ್ಧ ಮಹತೊಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ...

ಇತರರಿಗೆ ಸಹಾಯ ಮಾಡುವ ಪ್ರತಿಯೊಬ್ಬರಲ್ಲಿ ದೇವರನ್ನು ಕಾಣಬಹುದು : ಬಿಷಪ್ ಲೆಸ್ಲಿ ಸಿ ಡಿಸೋಜಾ

ಉಡುಪಿ: ನಾವು ಕಣ್ಣಿನಿಂದ ದೇವರನ್ನು ನೋಡದೇ ಇದ್ದರೂ, ಕಷ್ಟಕಾಲದಲ್ಲಿ ನಮಗೆ ಸಹಾಯ...

ಬಿಜೆಪಿ ಅಭ್ಯರ್ಥಿಗೆ ಕೇವಲ 1 ಮತ, ಆಘಾತಕಾರಿ ಫಲಿತಾಂಶ: ಹೆಂಡತಿ, ಅಪ್ಪ, ಅಮ್ಮನ ವೋಟ್ ಯಾರಿಗೆ?

ಜೈಪುರ: ರಾಜಸ್ಥಾನ ನಾಗರಿಕ ಚುನಾವಣೆಯ ಫಲಿತಾಂಶದ ನಡುವೆ ಆಘಾತಕಾರಿ ಮತ್ತು ಆಸಕ್ತಿದಾಯಕ...

Copying is disabled on Udupi Digital News.