Saturday, May 30, 2026

ಕೊಲ್ಲೂರು ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ; ಆರೋಪಿ ಬಂಧನ

ಬೈಂದೂರು: ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳಾ ಯಾತ್ರಾರ್ಥಿಯ ಮೈಮೇಲಿದ್ದ ಚಿನ್ನಾಭರಣ ಕಳವು ಮಾಡಿದ ಪ್ರಕರಣವನ್ನು ಕೊಲ್ಲೂರು ಪೊಲೀಸರು ಕೇವಲ 24 ಗಂಟೆಯೊಳಗೆ ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಮೇ 17, 2026ರಂದು ಉಡುಪಿ ಜಿಲ್ಲೆ ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ದಳಿ ಎಂಬಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ಮಹಿಳಾ ಯಾತ್ರಾರ್ಥಿಗಳು ಮೃತಪಟ್ಟಿದ್ದರು. ಈ ಸಂಬಂಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ   ಪ್ರಕರಣ ದಾಖಲಾಗಿತ್ತು.

ಘಟನೆಯ ಬಳಿಕ ಮೃತಪಟ್ಟ ಮಹಿಳೆಯೊಬ್ಬರ ಮೈಮೇಲಿದ್ದ ಚಿನ್ನಾಭರಣಗಳು ಕಳುವಾಗಿರುವ ಕುರಿತು ಶ್ರೀಕುಮಾರ ಅವರು ನೀಡಿದ ದೂರಿನ ಮೇರೆಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ   ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಯಿತು.

ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಹೆಚ್‌.ಡಿ. ಕುಲಕರ್ಣಿ ಹಾಗೂ ಬೈಂದೂರು ವೃತ್ತ ನಿರೀಕ್ಷಕರಾದ ಶಿವಕುಮಾರ ಅವರ ಮಾರ್ಗದರ್ಶನದಲ್ಲಿ ಕೊಲ್ಲೂರು ಠಾಣೆ ಉಪನಿರೀಕ್ಷಕರಾದ ವಿನಯ ಎಂ. ಕೊರ್ಲಹಳ್ಳಿ ಹಾಗೂ ಸಿಬ್ಬಂದಿಗಳ ತಂಡ ತನಿಖೆ ಕೈಗೊಂಡಿತು.

ಸಿಸಿಟಿವಿ ದೃಶ್ಯಾವಳಿ, ಸಾರ್ವಜನಿಕರು ತೆಗೆದ ಛಾಯಾಚಿತ್ರಗಳು ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಕೊಲ್ಲೂರು ಗ್ರಾಮದ ಕಲ್ಯಾಣಿಗುಡ್ಡೆ ನಿವಾಸಿ ಹೇಮಂತ್ (40) ಎಂಬ ಆರೋಪಿಯನ್ನು ಪ್ರಕರಣ ದಾಖಲಾದ 24 ಗಂಟೆಯೊಳಗೆ ಪತ್ತೆಹಚ್ಚಿ ಬಂಧಿಸಲಾಗಿದೆ.

ಬಂಧಿತ ಆರೋಪಿಯಿಂದ 3.910 ಗ್ರಾಂ ತೂಕದ ಚಿನ್ನದ ಉಂಗುರ (ಅಂದಾಜು ಮೌಲ್ಯ ₹57,000), 3.450 ಗ್ರಾಂ ತೂಕದ ಚಿನ್ನದ ಬಳೆ (ಅಂದಾಜು ಮೌಲ್ಯ ₹50,000) ಹಾಗೂ 7.160 ಗ್ರಾಂ ತೂಕದ ಚಿನ್ನದ ಸರ (ಅಂದಾಜು ಮೌಲ್ಯ ₹1 ಲಕ್ಷ) ಸೇರಿದಂತೆ ಒಟ್ಟು ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

More like this
Related

ಕೇರಳದಲ್ಲಿ ಭಾರೀ ಡ್ರಗ್ಸ್ ಜಾಲ ಭೇದನೆ; ₹70 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು ವಶ

ಆಪರೇಷನ್ ಚಕ್ರವ್ಯೂಹ’ ಅಡಿಯಲ್ಲಿ ಡಿಆರ್‌ಐ ಕಾರ್ಯಾಚರಣೆ; 24 ಕೆ.ಜಿ.ಗಿಂತ ಹೆಚ್ಚು ಮಾದಕ...

ಪತ್ನಿಯನ್ನು ಗಂಟೆಗಳ ಕಾಲ ‘ಕೋಳಿ’ ಭಂಗಿಯಲ್ಲಿ ನಿಲ್ಲಿಸಿ ಹಿಂಸೆ; ತಪ್ಪಿಸಿಕೊಂಡ ಬಳಿಕ ಚಾಕುವಿನಿಂದ ಇರಿದ ಪತಿ ಬಂಧನ

ಮುಂಬೈನಲ್ಲಿ ಅಮಾನುಷ ಘಟನೆ; ಪತ್ನಿಗೆ ಕತ್ತಿಯಿಂದ ಬೆದರಿಕೆ, ಆಸಿಡ್ ದಾಳಿ ಮಾಡುವುದಾಗಿ...

ಸುಮನಸಾ ರಜತ ಮಹೋತ್ಸವಕ್ಕೆ ಮೇ 31ರಂದು ಚಾಲನೆ

ಉಡುಪಿ: ಸಾಮಾಜಿಕ ಸೇವೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಕಳೆದ 25...

ವರಾಹಿ ಮೂಲ ಯೋಜನೆ ಹಳ್ಳ ಹಿಡಿಯಲು ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯೇ ಕಾರಣ : ಕೆ ವಿಕಾಸ್ ಹೆಗ್ಡೆ

ವಾರಾಹಿ ಯೋಜನೆ ವಿಳಂಬದ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ ಎನ್ನುವ...

Copying is disabled on Udupi Digital News.