Wednesday, November 4, 2026

ಭೂಗತಪಾತಕಿ ಹೇಮಂತ್ ಪೂಜಾರಿಗೆ ಉದ್ದಿಮೆದಾರರ ಮೊಬೈಲ್ ಸಂಖ್ಯೆ ನೀಡಿದ ಆರೋಪ: ಓರ್ವನ ಬಂಧನ

ಉಡುಪಿ: ಹಣ ನೀಡುವಂತೆ ಬೆದರಿಕೆ ಕರೆ ಮಾಡಲು ಭೂಗತ ಪಾತಕಿ ಹೇಮಂತ್ ಪೂಜಾರಿಗೆ ಉದ್ದಿಮೆದಾರರ ಮೊಬೈಲ್ ಸಂಖ್ಯೆ ನೀಡಿರುವ ಆರೋಪದಲ್ಲಿ ಓರ್ವ ಆರೋಪಿಯನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ.

ಸಾಂತೂರು ಗ್ರಾಮದ ಹರೀಶ್ ಪೂಜಾರಿ (45) ಬಂಧಿತ ಆರೋಪಿ. ಮುದರಂಗಡಿ ಉದ್ಯಮಿ ಡೇವಿಡ್ ಡಿಸೋಜ ಕೊಲೆ ಪ್ರಕರಣದ ಬಳಿಕ ಭೂಗತ ಪಾತಕಿ ಹೇಮಂತ್ ಪೂಜಾರಿ ಪಡುಬಿದ್ರೆ, ಮಣಿಪಾಲ, ಕಾಪು ಮತ್ತು ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಉದ್ದಿಮೆದಾರರನ್ನು ಗುರಿಯಾಗಿಸಿಕೊಂಡು ಅಂತಾರಾಷ್ಟ್ರೀಯ ಸಂಖ್ಯೆಗಳಿಂದ ಕರೆ ಮಾಡಿ ಕೊಟ್ಯಾಂತರ ರೂ.ಗಳಿಗೆ ಬೇಡಿಕೆ ಇಡುತ್ತಿದ್ದು, ಹಣ ಕೊಡದೇ ಇದ್ದಲ್ಲಿ ಡೇವಿಡ್ ಡಿಸೋಜ ರೀತಿಯಲ್ಲಿ ಕೊಲೆ ಮಾಡುವುದಾಗಿ ಜೀವ ಬೆದರಿಕೆಯೊಡ್ಡಿರುವುದಾಗಿ ದೂರಲಾಗಿದೆ. ಈ ಸಂಬಂಧ ಪಡುಬಿದ್ರೆ, ಮಣಿಪಾಲ, ಕಾಪು ಮತ್ತು ಶಿರ್ವ ಠಾಣೆಗಳಲ್ಲಿ ಒಟ್ಟು 8 ಪ್ರಕರಣಗಳು ದಾಖಲಾಗಿವೆ.

ಶಿರ್ವ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು, ಹೇಮಂತ ಪೂಜಾರಿಗೆ ಉದ್ದಿಮೆದಾರರ ಮೊಬೈಲ್ ಸಂಖ್ಯೆಗಳನ್ನು ನೀಡಿ ಕೃತ್ಯದಲ್ಲಿ ಭಾಗಿಯಾದ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಆತನನ್ನು ವಿಚಾರಣೆಗೆ ಒಳಪಡಿಸಿದಾಗ ತಾನು ಹೇಮಂತ್ ಪೂಜಾರಿಗೆ ಉದ್ದಿಮೆದಾರರ ಮೊಬೈಲ್ ಸಂಖ್ಯೆ ನೀಡಿ ಕೃತ್ಯಕ್ಕೆ ಸಹಕರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಅದರಂತೆ ಆರೋಪಿಯನ್ನು ನ.2ರಂದು ಪೊಲೀಸರು ಬಂಧಿಸಿ, ಕೃತ್ಯಕ್ಕೆ ಬಳಸಿದ 2 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಬಳಿಕ ಆರೋಪಿ ಹರೀಶ್ ಪೂಜಾರಿಯನ್ನು ನ್ಯಾಯಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

More like this
Related

ನ. 6 ಮತ್ತು 7ರಂದು ನಿಟ್ಟೆ ವಿಶ್ವವಿದ್ಯಾಲಯದ 16ನೇ ವಾರ್ಷಿಕ ಘಟಿಕೋತ್ಸವ

ಉಡುಪಿ: ನಿಟ್ಟೆ ವಿಶ್ವವಿದ್ಯಾಲಯದ 16ನೇ ವಾರ್ಷಿಕ ಘಟಿಕೋತ್ಸವವು ನವೆಂಬರ್ 6 ಮತ್ತು...

ಡೇವಿಡ್ ಡಿಸೋಜಾ ಕೊಲೆ ಪ್ರಕರಣ:  ಕೋಕಾ ಕಾಯ್ದೆಯಡಿ 10 ಆರೋಪಿಗಳ ತನಿಖೆಗೆ ಅನುಮತಿ

ಉಡುಪಿ: ಕಾಪು ತಾಲೂಕಿನ ಮುದರಂಗಡಿಯ ಸೇಂಟ್ ಕ್ಸೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ಉದ್ಯಮಿ...

‘ಮಿಷನ್ ಲೈಫ್’ ಅಡಿಯಲ್ಲಿ ಉತ್ತರ ಪ್ರದೇಶದ 1.32 ಲಕ್ಷ ಶಾಲೆಗಳಲ್ಲಿ ಪರಿಸರ ಜಾಗೃತಿ ಸಪ್ತಾಹ

ಲಖನೌ: ವಿದ್ಯಾರ್ಥಿಗಳಿಗೆ ಪಠ್ಯ ಶಿಕ್ಷಣದ ಜತೆಗೆ ಪರಿಸರ ಸಂರಕ್ಷಣೆ ಮತ್ತು ಸಾಮಾಜಿಕ...

Copying is disabled on Udupi Digital News.