ಕುಂದಾಪುರ: ಸರಕಾರಿ ವೈದ್ಯರೋರ್ವರು ಇತ್ತೀಚೆಗೆ ಕುಂದಾಪುರದಲ್ಲಿ ಪತ್ರಕರ್ತರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ ಇಷ್ಟವಾಗದ ಸುದ್ದಿ ಪ್ರಕಟಿಸಿದ ಕಾರಣಕ್ಕೆ ಪತ್ರಕರ್ತರ ಮೇಲೆ ದಬ್ಬಾಳಿಕೆ ನಡೆಸುವುದು ಸರಿಯಲ್ಲ ಎಂದು ಕೆಪಿಸಿಸಿ ರಾಜ್ಯ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ ಹೇಳಿದರು.
ಅವರು ಕುಂದಾಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗುರುವಾರ ಮಧ್ಯಾಹ್ನ ನಗರದ ಶಾಸ್ತ್ರಿ ಸರ್ಕಲ್ನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಘಟನೆಯನ್ನು ಉಲ್ಲೇಖಿಸಿ ಖಂಡಿಸಿ ಪತ್ರಕರ್ತರು ಪ್ರಕಟಿಸುವ ಸುದ್ದಿಯ ಬಗ್ಗೆ ಅಸಮಾಧಾನವಿದ್ದರೆ ಕಾನೂನುಬದ್ಧ ಹಾಗೂ ಪ್ರಜಾಪ್ರಭುತ್ವದ ಮಾರ್ಗದಲ್ಲಿ ಪ್ರತಿಕ್ರಿಯಿಸಬೇಕು. ಪತ್ರಕರ್ತರ ಮೇಲೆ ಹಲ್ಲೆ, ಬೆದರಿಕೆ ಅಥವಾ ದಬ್ಬಾಳಿಕೆ ನಡೆಸುವುದನ್ನು ಯಾವುದೇ ಕಾರಣಕ್ಕೂ ಸಮರ್ಥಿಸಲಾಗದು. ಇತ್ತೀಚೆಗೆ ಪತ್ರಕರ್ತರ ಮೇಲೆ ನಡೆದ ಹಲ್ಲೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ಪತ್ರಿಕಾ ಸ್ವಾತಂತ್ರ್ಯ ಉಳಿಯಬೇಕು ಮತ್ತು ಪ್ರಜಾಪ್ರಭುತ್ವ ಜೀವಂತವಾಗಿರಬೇಕು. ಇಷ್ಟವಾಗದ ಸುದ್ದಿ ಪ್ರಕಟಿಸಿದ ಕಾರಣಕ್ಕೆ ಪತ್ರಕರ್ತರ ಮೇಲೆ ದಬ್ಬಾಳಿಕೆ ನಡೆಸುವುದು ಸರಿಯಲ್ಲ ಎಂದು ಸುಧೀರ್ ಕುಮಾರ್ ಮುರೊಳ್ಳಿ ಹೇಳಿದರು.




