Sunday, September 13, 2026

ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಸಭೆ: ರೂ. 15.09 ಕೋಟಿ ನಿವ್ವಳ ಲಾಭ – ಶೇ.15 ಡಿವಿಡೆಂಡ್ ಘೋಷಣೆ

ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ 2025-26ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸೆ.13 ರಂದು ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಸೊಸಾಟಿಯ ಅಧ್ಯಕ್ಷರಾದ ಸಹಕಾರ ರತ್ನ ಜಯಕರ ಶೆಟ್ಟಿ ಇಂದ್ರಾಳಿ ಅವರ ಅಧ್ಯಕ್ಷತೆಯಲ್ಲಿ ಜರಗಿತು.

ಸಂಘದ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ. ಶೇರಿಗಾರ್ ಅವರು ವಾರ್ಷಿಕ ವರದಿ ಹಾಗೂ ಲೆಕ್ಕಪತ್ರಗಳನ್ನು ಮಂಡಿಸಿದರು. ವರದಿ ಸಾಲಿನ ಅಂತ್ಯಕ್ಕೆ ಸಂಘವು 22,869 ಸದಸ್ಯರು, ರೂ.4.89 ಕೋಟಿ ಪಾಲು ಬಂಡವಾಳ ಹಾಗೂ ರೂ.658.80 ಕೋಟಿ ಠೇವಣಿ ಹೊಂದಿದ್ದು, ರೂ.533.96 ಕೋಟಿ ಹೊರಬಾಕಿ ಸಾಲ ಹೊಂದಿದೆ. 2025-26ನೇ ಸಾಲಿನಲ್ಲಿ ಸುಮಾರು ರೂ.4,089 ಕೋಟಿ ವಾರ್ಷಿಕ ವಹಿವಾಟು ನಡೆಸಿದ್ದು, ಸದಸ್ಯರ ಸಹಕಾರದಿಂದ ರೂ.15.09 ಕೋಟಿ ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಿಸಲಾಯಿತು.

ಸತತ 2 ಬಾರಿ ರಾಷ್ಟ್ರಮಟ್ಟದ ಪ್ರಶಸ್ತಿ ಹಾಗೂ 9 ಬಾರಿ ರಾಜ್ಯಮಟ್ಟದ ಪ್ರಶಸಿ್ತಗಳನ್ನು ಪಡೆದಿರುವ ಸಂಘಕ್ಕೆ, 2025-26ನೇ ಸಾಲಿನ ಸರ್ವತೋಮುಖ ಅಭಿವೃದ್ಧಿಗಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸಾಧನಾ ಪ್ರಶಸ್ತಿ ಲಭಿಸಿದೆ. ಇದು ಸಂಘಕ್ಕೆ ಸತತ 20ನೇ ಜಿಲ್ಲಾ ಪ್ರಶಸ್ತಿಯಾಗಿದೆ.

ಅದೇ ರೀತಿ, 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಸಂಘಕ್ಕೆ ಸಹಕಾರ ಮಾಣಿಕ್ಯ ಪ್ರಶಸ್ತಿ ಲಭಿಸಿದ್ದು, ನಗದು ಬಹುಮಾನ ಹಾಗೂ 5 ಗ್ರಾಂ ಬಂಗಾರದ ಪದಕವನ್ನು ಪಡೆದುಕೊಂಡಿದೆ. ಉಡುಪಿ ಜಿಲ್ಲೆಯ ಮೊದಲ ಕ್ರೆಡಿಟ್ ಸಹಕಾರ ಸಂಘವಾಗಿ ಈ ಪ್ರಶಸ್ತಿಗೆ ಪಾತ್ರವಾಗಿರುವುದು ಸಂಘದ ಹೆಗ್ಗಳಿಕೆಯಾಗಿದೆ.

ಸಾಧಕರಿಗೆ ಸನ್ಮಾನ
ಸಭೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಐವರು ಸಾಧಕರನ್ನು ಸನ್ಮಾನಿಸಲಾಯಿತು. ಫ್ಯಾಷನ್ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಮಟ್ಟದ ಸಾಧನೆ ಮಾಡಿರುವ ಬಾಲಪ್ರತಿಭೆ ಸಚಿತ ರಾವ್, ಮಿಸ್ ಯೂನಿವರ್ಸ್ ಇಂಡಿಯಾ ಸ್ಪರ್ಧೆಯ ರಾಷ್ಟ್ರೀಯ ವೇದಿಕೆಯಲ್ಲಿ ಉಡುಪಿಯನ್ನು ಪ್ರತಿನಿಧಿಸಿದ ಮೊದಲ ಯುವತಿ ಸ್ಫೂರ್ತಿ ಡಿ. ಶೆಟ್ಟಿ, ಸತತ 25 ಗಂಟೆಗಳ ಕಾಲ 200ಕ್ಕೂ ಅಧಿಕ ದಾಸರ ಪದಗಳನ್ನು ಪ್ರಸ್ತುತಪಡಿಸಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ವಿಶ್ವದಾಖಲೆ ಮಾಡಿದ ವಿದುಷಿ ಸಂಗೀತ ಬಾಲಚಂದ್ರ, ಸ್ವಾವಲಂಬನೆಯ ಮೂಲಕ ಆಹಾರ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವ ಶ್ರೀಮತಿ ಸುಗುಣಾ ಪೈ ಟಿ., ಹಾಗೂ ಪವರ್‌ಲಿಫ್ಟಿಂಗ್ ಮತ್ತು ಬೆಂಚ್ ಪ್ರೆಸ್‌ನಲ್ಲಿ ಜಿಲ್ಲಾ, ರಾಜ್ಯ, ವಿಶ್ವವಿದ್ಯಾಲಯ ಹಾಗೂ ದಕ್ಷಿಣ ಭಾರತ ಮಟ್ಟದಲ್ಲಿ ಸಾಧನೆ ಮಾಡಿದ ಆ್ಯನ್ನಿ ಲಿಸಾ ಅಮ್ಮನ್ನ ಅವರನ್ನು ಗೌರವಿಸಲಾಯಿತು.

ಸಂಘದ ಮಲ್ಪೆ ಶಾಖೆಯಲ್ಲಿ ಸುಮಾರು 11 ವರ್ಷಗಳ ಕಾಲ ದೈನಿಕ ಠೇವಣಿ ಸಂಗ್ರಾಹಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಶ್ರೀ ಗೋವಿಂದಾಸ್ ಕೆ. ಸುವರ್ಣ ಹಾಗೂ ಅಂಬಾಗಿಲು ಶಾಖೆಯಲ್ಲಿ ಸುಮಾರು 20 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಶ್ರೀ ವೆಂಕಟರಮಣ ಭಟ್ ಅವರನ್ನು ಬೀಳ್ಕೊಡಲಾಯಿತು.

ಸಂಘದ ಡಿಜಿಟಲೀಕರಣದ ಭಾಗವಾಗಿ ಚೇತನಾ ಮೊಬೈಲ್ ಆ್ಯಪ್‌ಅನ್ನು ಸುರಕ್ಷಿತ ಮೊಬೈಲ್ ಬ್ಯಾಂಕಿಂಗ್ ಸೇವೆ ಒದಗಿಸುವ ಉದ್ದೇಶದಿಂದ ಅಗತ್ಯ ಭದ್ರತಾ ಕ್ರಮಗಳೊಂದಿಗೆ ಅಭಿವೃದ್ಧಿಪಡಿಸಲಾಗಿದೆ. ಸದಸ್ಯರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು. ದೈನಿಕ ಠೇವಣಿ ಸಂಗ್ರಹಣೆಯನ್ನೂ ಪಿಗ್ಮಿ ಮೊಬೈಲ್ ಆ್ಯಪ್ ಮೂಲಕ ನಡೆಸಲಾಗುತ್ತಿದೆ ಎಂದು ಜಯಕರ ಶೆಟ್ಟಿ ಇಂದ್ರಾಳಿ ಎಂದರು.

ಸಂಘವು ಬ್ಯಾಂಕಿಂಗ್ ವ್ಯವಹಾರಕ್ಕೆ ಸೀಮಿತವಾಗದೆ ಸಮಾಜಮುಖಿ ಕಾರ್ಯಗಳಿಗೂ ಆದ್ಯತೆ ನೀಡುತ್ತಿದ್ದು, ವಾರ್ಷಿಕವಾಗಿ ಸುಮಾರು ರೂ.30 ಲಕ್ಷವನ್ನು ಶಿಕ್ಷಣ, ಆರೋಗ್ಯ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳಿಗೆ ವಿನಿಯೋಗಿಸುತ್ತಿದೆ ಎಂದು ತಿಳಿಸಿದರು.

ಸದಸ್ಯರ ಅನುಕೂಲಕ್ಕಾಗಿ QR Code ಸೌಲಭ್ಯ, ಉಚಿತ ಮಿಸ್ಡ್ ಕಾಲ್ ಸೇವೆ, ಉಚಿತ ಎಸ್‌ಎಂಎಸ್ ಸೇವೆ, ಸೇಫ್ ಲಾಕರ್, ಇ-ಸ್ಟಾಂಪಿಂಗ್, ಪಾನ್ ಕಾರ್ಡ್, ವೆಸ್ಟರ್ನ್ ಯೂನಿಯನ್ ಮನಿ ಟ್ರಾನ್ಸ್‌ಫರ್, ಲಂಬಾರ್ಡ್ ಆರೋಗ್ಯ ಕಾರ್ಡ್, ಮಣಿಪಾಲ ಆರೋಗ್ಯ ಕಾರ್ಡ್ ಹಾಗೂ ಎಲ್ಲಾ ರೀತಿಯ ವಿಮಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದರು.

ಸಂಘದ ಆಡಳಿತ ಮಂಡಳಿ ಸದಸ್ಯರಾದ ಸಂಜೀವ ಕಾಂಚನ್, ಎಲ್. ಉಮಾನಾಥ, ಪುರುಷೋತ್ತಮ ಪಿ. ಶೆಟ್ಟಿ. ಹಾಜಿ ಸಯ್ಯದ್ ಅಬ್ದುಲ್ ರಜಾಕ್, ವಿನಯ ಕುಮಾರ್ ಟಿ.ಎ., ಪದ್ಮನಾಭ ಕೆ ನಾಯಕ್, ಸದಾಶಿವ ನಾಯ್ಕ್, ಮನೋಹರ್ ಎಸ್ ಶೆಟ್ಟಿ, ಸಾಧು ಸಾಲ್ಯಾನ್, ಜಯಾ ಶೆಟ್ಟಿ, ಗಾಯತ್ರ್ರಿ ಎಸ್. ಭಟ್ ಸಭೆಯಲ್ಲಿ ಉಪಸ್ಥಿತರಿದ್ದರು.

ಸಂಘದ ಮಲ್ಪೆ ಶಾಖಾ ವ್ಯವಸ್ಥಾಪಕರಾದ ನವೀನ್ ಕೆ ಸನ್ಮಾನ ಕಾರ್ಯಕ್ರಮ ನಿರೂಪಿಸಿದರು. ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್ ವಂದಿಸಿದರು.

More like this
Related

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ...

ಬಳ್ಳಾರಿ ಚಲೋ ನಡೆಸಿದ್ದ ಬಿಜೆಪಿ ನಾಯಕರಿಗೆ ಶಾಕ್; ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ FIR

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಭ್ರಷ್ಟಾಚಾರವನ್ನು ಖಂಡಿಸಿ...

ಕುಂದಾಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಸ್ಕರ್ ಫೆರ್ನಾಂಡಿಸ್ ಪುಣ್ಯಸ್ಮರಣೆ

ಕುಂದಾಪುರ: ಮಾಜಿ ಕೇಂದ್ರ ಸಚಿವರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ...

ಉಡುಪಿ ಜಿಲ್ಲೆಯಲ್ಲಿ 492 ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ; ಬಿಗಿ ಪೊಲೀಸ್ ಬಂದೋಬಸ್ತ್

ಉಡುಪಿ: ಗಣೇಶ ಚತುರ್ಥಿ–2026ರ ಅಂಗವಾಗಿ ಜಿಲ್ಲೆಯಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ...

Copying is disabled on Udupi Digital News.