Tuesday, September 22, 2026

ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ: ಕಾರಿನಲ್ಲಿ ಶವ ಪತ್ತೆ, ಪತ್ನಿ–ಪುತ್ರ ನಾಪತ್ತೆ

ಉಡುಪಿ: ಉಡುಪಿ ಮೂಲದ ವ್ಯಕ್ತಿಯೊಬ್ಬರನ್ನು ಶಾರ್ಜಾದಲ್ಲಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಉಡುಪಿ ಮೂಲದ ಪ್ರಕಾಶ್ ಕುಂದರ್ ಹತ್ಯೆಯಾದ ವ್ಯಕ್ತಿಯಾಗಿದ್ದು, ಕಳೆದ ಜುಲೈ ತಿಂಗಳಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಪ್ರಕಾಶ್ ಅವರು ಪತ್ನಿ ಟೀನಾ ಹಾಗೂ ಅಪ್ರಾಪ್ತ ಪುತ್ರನೊಂದಿಗೆ ಶಾರ್ಜಾದಲ್ಲಿ ವಾಸವಾಗಿದ್ದರು. ಶಾರ್ಜಾ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ಅವರು, ಜುಲೈ 20ರ ಸುಮಾರಿಗೆ ತಮ್ಮ ಸಹೋದರ ಪ್ರಶಾಂತ್ ಕುಂದರ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದರು.

ಸಾಮಾನ್ಯವಾಗಿ ವಾಯ್ಸ್ ಮೆಸೇಜ್ ಮೂಲಕ ಪ್ರತಿಕ್ರಿಯಿಸುತ್ತಿದ್ದ ಪ್ರಕಾಶ್, ಈ ಬಾರಿ ಟೆಕ್ಸ್ಟ್ ಮೆಸೇಜ್ ಮೂಲಕ ಮಾತ್ರ ಪ್ರತಿಕ್ರಿಯಿಸಿದ್ದರು ಎನ್ನಲಾಗಿದೆ. ಬಳಿಕ ಸಹೋದರ ಕರೆ ಮಾಡುವಂತೆ ಒತ್ತಾಯಿಸಿದಾಗ ಸಂಪರ್ಕ ಕಡಿತಗೊಂಡಿದ್ದು, ಇದರಿಂದ ಕುಟುಂಬಸ್ಥರು ಆತಂಕಗೊಂಡಿದ್ದರು.

ಈ ಹಿನ್ನೆಲೆಯಲ್ಲಿ ಸಂಬಂಧಿಕರು ವಿಚಾರಿಸಿದಾಗ, ಪ್ರಕಾಶ್ ಭಾರತಕ್ಕೆ ತೆರಳಿರುವುದಾಗಿ ಅವರು ಕೆಲಸ ಮಾಡುತ್ತಿದ್ದ ಕಂಪನಿಯಿಂದ ಮಾಹಿತಿ ದೊರೆತಿತ್ತು. ಆದರೆ ಪ್ರಕಾಶ್ ಭಾರತಕ್ಕೆ ಬಂದಿರುವ ಕುರಿತು ಕುಟುಂಬಸ್ಥರಿಗೆ ಯಾವುದೇ ಮಾಹಿತಿ ಲಭ್ಯವಾಗದ ಹಿನ್ನೆಲೆಯಲ್ಲಿ ಶಾರ್ಜಾದಲ್ಲಿ ದೂರು ದಾಖಲಿಸಲಾಗಿದ್ದು, ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದರು.

ಪೊಲೀಸರ ಹುಡುಕಾಟದ ವೇಳೆ ಪ್ರಕಾಶ್ ಅವರದೇ ಕಾರಿನಲ್ಲಿ ಶವ ಪತ್ತೆಯಾಗಿದ್ದು, ದೇಹದ ಮೇಲೆ ಇರಿತದ ಗಾಯಗಳು ಕಂಡುಬಂದಿವೆ ಎನ್ನಲಾಗಿದೆ. ಅಲ್ಲದೆ, ಮೃತದೇಹವನ್ನು ಹಲವು ತುಂಡುಗಳಾಗಿ ಮಾಡಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಈ ನಡುವೆ ಪ್ರಕಾಶ್ ಅವರ ಪತ್ನಿ ಟೀನಾ ಹಾಗೂ ಅಪ್ರಾಪ್ತ ಪುತ್ರ ನಾಪತ್ತೆಯಾಗಿರುವುದು ಪ್ರಕರಣಕ್ಕೆ ಮತ್ತಷ್ಟು ಕುತೂಹಲ ಮೂಡಿಸಿದೆ. ಆದರೆ ಘಟನೆಗೆ ನಿಖರ ಕಾರಣವೇನು ಹಾಗೂ ಹತ್ಯೆಯಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಈ ಕುರಿತು ಶಾರ್ಜಾ ಪೊಲೀಸರು ತನಿಖೆ ನಡೆಸುತ್ತಿದ್ದು, ತನಿಖೆಯ ಬಳಿಕವೇ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.

ಪ್ರಕಾಶ್ ಹಾಗೂ ಟೀನಾ ಸುಮಾರು 20 ವರ್ಷಗಳ ಹಿಂದೆ ವಿವಾಹವಾಗಿದ್ದರು ಎನ್ನಲಾಗಿದೆ. ಟೀನಾ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಅವರ ಪುತ್ರ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದಾನೆ ಎಂದು ತಿಳಿದುಬಂದಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಪ್ರಕಾಶ್ ಭಾರತಕ್ಕೆ ಆಗಮಿಸಿದ್ದರು ಎನ್ನಲಾಗಿದೆ.

ಕುಟುಂಬದಲ್ಲಿ ಯಾವುದೇ ರೀತಿಯ ಕಲಹವಿದ್ದ ಬಗ್ಗೆ ಸಂಬಂಧಿಕರಿಗೆ ಮಾಹಿತಿ ಇರಲಿಲ್ಲ ಎಂದು ತಿಳಿದುಬಂದಿದೆ.

ಸದ್ಯ ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಪ್ರಕಾಶ್ ಅವರ ಮೃತದೇಹವನ್ನು ಭಾರತಕ್ಕೆ ತರಲು ಕ್ರಮ ಕೈಗೊಳ್ಳಲಾಗುತ್ತಿದೆ. ಕುಟುಂಬಸ್ಥರು ಮೃತದೇಹವನ್ನು ಸ್ವದೇಶಕ್ಕೆ ತರಲು ಕಾಯುತ್ತಿದ್ದಾರೆ.

More like this
Related

ಕುಂದಾಪುರ ತಾಲೂಕನ್ನು ಬರಪೀಡಿತ ಎಂದು ಘೋಷಿಸಿ : ಕೆ ವಿಕಾಸ್ ಹೆಗ್ಡೆ

ಕುಂದಾಪುರ: ಮಳೆ ಕೈಕೊಟ್ಟ ಕಾರಣ ಬೀಕರ ಬರಗಾಲಕ್ಕೆ ತುತ್ತಾಗಿರುವ ಕುಂದಾಪುರ ತಾಲ್ಲೂಕನ್ನು...

5 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಬಜಪೆ ಠಾಣೆ ಇನ್ಸ್‌ಪೆಕ್ಟರ್ ಬಾಲಕೃಷ್ಣ!

ಮಂಗಳೂರು: ಲಂಚದ ಹಣ ಸ್ವೀಕರಿಸುತ್ತಿದ್ದಾಗ ಮಂಗಳೂರಿನ ಬಜಪೆ ಠಾಣೆ ಇನ್ಸ್‌ಪೆಕ್ಟರ್ ಬಾಲಕೃಷ್ಣ...

ಸೆ. 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ

ಉಚ್ಚಿಲ: ಸುಮಾರು ಒಂದು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಮೊಗವೀರ ಸಮಾಜದ...

ಬಿಹಾರದ ಜಮುಯಿಯಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ವೈರಲ್ ವಿಡಿಯೋ ಬಳಿಕ ಇಬ್ಬರ ಬಂಧನ

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ ಕೋಚಿಂಗ್ ತರಗತಿ ಮುಗಿಸಿಕೊಂಡು ಸ್ಕೂಟರ್‌ನಲ್ಲಿ ತೆರಳುತ್ತಿದ್ದ...

Copying is disabled on Udupi Digital News.