Wednesday, April 15, 2026

ಓವರ್ ಟೇಕ್ ಭರದಲ್ಲಿ ಬಸ್ ಗೆ ಬೈಕ್ ಢಿಕ್ಕಿ: ಸವಾರ ದಾರುಣ ಸಾವು

ಯುಡಿ ನ್ಯೂಸ್ ಡಾಟ್ ಕಾಮ್

ಕುಂದಾಪುರ: ಓವರ್ ಟೇಕ್ ಮಾಡುವ ಭರದಲ್ಲಿ ಖಾಸಗಿ ಬಸ್ ಗೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶನಿವಾರ ಶೆಟ್ರಕಟ್ಟೆ ತಿರುವಿನಲ್ಲಿ ನಡೆದಿದೆ.

ಸೌಕೂರು ನಿವಾಸಿ ವಿಜಯ್ ದೇವಾಡಿಗ (26) ಮೃತ ಯುವಕ.

ತ್ರಾಸಿಯಲ್ಲಿ ಫಾಸ್ಟ್ ಫುಡ್ ಅಂಗಡಿ ಹೊಂದಿದ್ದ ವಿಜಯ್ ಶನಿವಾರ ಬೆಳಿಗ್ಗೆ ಬೈಕಿನಲ್ಲಿ ತ್ರಾಸಿಯಿಂದ ಸೌಕೂರು ಕಡೆಗೆ ತೆರಳುತ್ತಿದ್ದಾಗ ಶೆಟ್ರಕಟ್ಟೆ ತಿರುವಿನಲ್ಲಿ ಖಾಸಗಿ ಬಸ್ ಅನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಇನ್ನೊಂದು ಖಾಸಗಿ ಬಸ್ ಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ವಿಜಯ್ ಗಂಭೀರ ಗಾಯಗಳೊಂದಿಗೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇತ್ತೀಚೆಗಷ್ಟೇ ಟಿಪ್ಪರ್ ಹಾಗೂ ಸರ್ಕಾರಿ ಬಸ್ ನಡುವೆ ಶೆಟ್ರಕಟ್ಟೆಯಲ್ಲಿ ನಡೆದ ಭೀಕರ ಅಪಘಾತ ನೆನಪು ಮಾಸುವ ಮುನ್ನವೇ ಅದೇ ಸ್ಥಳದ ಅನತಿ ದೂರದಲ್ಲೇ ಮತ್ತೊಂದು ಅಪಘಾತ ಸಂಭವಿಸಿರುವುದು ಸ್ಥಳೀಯರನ್ನು ಇನ್ನಷ್ಟು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.

More like this
Related

ಕೆಕೆಆರ್ ಸೋಲಿನ ಜೊತೆ ನಾಯಕ ಅಜಿಂಕ್ಯ ರಹಾನೆಗೆ ಮತ್ತೊಂದು ಶಾಕ್: 12 ಲಕ್ಷ ರೂ. ದಂಡ

ಯುಡಿ ನ್ಯೂಸ್ ಡಾಟ್ ಕಾಮ್ಚೆನ್ನೈ: 2026ರ ಐಪಿಎಲ್ ಆವೃತ್ತಿಯಲ್ಲಿ ಇನ್ನೂ ಖಾತೆ ತೆರೆಯದ...

ಏಪ್ರಿಲ್ 20ರಂದು ಉಡುಪಿಯ ನೂತನ ಧರ್ಮಾಧ್ಯಕ್ಷರ ಪೀಠಾರೋಹಣ ಹಾಗೂ ಅಭಿಷೇಕ ಸಮಾರಂಭ

ಉಡುಪಿ: ಉಡುಪಿ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ ಗೌರವಾನ್ವಿತ ಡಾ. ಲೆಸ್ಲಿ...

ಮಂಡ್ಯದಲ್ಲಿ ನರೇಂದ್ರ ಮೋದಿ: ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ

ಯುಡಿ ನ್ಯೂಸ್ ಡಾಟ್ ಕಾಮ್ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ...

ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ: 350 ಅಶ್ಲೀಲ ವೀಡಿಯೋ ಇಟ್ಟುಕೊಂಡಿದ್ದ ಆರೋಪಿ ಅಂದರ್

ಯುಡಿ ನ್ಯೂಸ್ ಡಾಟ್ ಕಾಮ್ಮುಂಬೈ: ಹುಡುಗಿಯರನ್ನು ಪ್ರೀತಿಯ ಬಲೆಗೆ ಬೀಳಿಸಿ 180 ಅಪ್ರಾಪ್ತ...

Copying is disabled on Udupi Digital News.