ಯುಡಿ ನ್ಯೂಸ್ ಡಾಟ್ ಕಾಮ್
ಮಂಗಳೂರು: ವೇಗವಾಗಿ ಬಂದ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮ ಕಂಬವೇ ತುಂಡಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕಿನ್ಯಾ ಸಂಕೇಶದಲ್ಲಿ ನಡೆದಿದೆ.
ಸೋಮವಾರ ಸಂಜೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಅಪಘಾತದಲ್ಲಿ ವಿಜಯಪುರ ಮೂಲದ ಇಬ್ಬರು ವಿದ್ಯಾರ್ಥಿಗಳು ಪವಾಡಸದೃಶ ಎಂಬಂತೆ ಪಾರಾಗಿದ್ದಾರೆ.
ಕಂಬ ತುಂಡಾಗುತ್ತಲೇ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಘಟನೆಯ ಭೀಕರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.




