Tuesday, June 23, 2026

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ   ಬಾಂಬ್ ಬೆದರಿಕೆ ಸಂದೇಶ

ಉಡುಪಿ: ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ ಆತಂಕದ ವಾತಾವರಣ ನಿರ್ಮಾಣವಾಯಿತು.

ಬೆದರಿಕೆ ಸಂದೇಶದ ಮಾಹಿತಿ ದೊರಕುತ್ತಿದ್ದಂತೆ ಉಡುಪಿ ನಗರ ಪೊಲೀಸರು, ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ನ್ಯಾಯಾಲಯ ಸಂಕೀರ್ಣಕ್ಕೆ ಆಗಮಿಸಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದರು. ನ್ಯಾಯಾಲಯದ ಆವರಣ ಹಾಗೂ ಕಟ್ಟಡದ ವಿವಿಧ ಭಾಗಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.

ಭದ್ರತಾ ದೃಷ್ಟಿಯಿಂದ ನ್ಯಾಯಾಲಯ ಸಂಕೀರ್ಣದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಬೆದರಿಕೆ ಸಂದೇಶದ ಮೂಲ ಪತ್ತೆ ಹಚ್ಚುವ ನಿಟ್ಟಿನಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

More like this
Related

ಉದ್ಯಾವರ ಪಾಪನಾಶಿನಿ ಸೇತುವೆಯಿಂದ ಜಿಗಿದು ಯುವಕ ಆತ್ಮಹತ್ಯೆ

ಉಡುಪಿ: ಉದ್ಯಾವರ ಪಾಪನಾಶಿನಿ ಸೇತುವೆಯ ಮೇಲೆ ತನ್ನ ದ್ವಿಚಕ್ರ ವಾಹನವನ್ನು ಇಟ್ಟು...

ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿ ಹೊಸ ಅಧ್ಯಕ್ಷರನ್ನು ಘೋಷಿಸಿದ ಟಿಎಂಸಿ ಬಂಡಾಯ ಬಣ

ಕೊಲ್ಕಾತಾ: ತೃಣಮೂಲ ಕಾಂಗ್ರೆಸ್ ಪಕ್ಷದ ಬಂಡಾಯ ಬಣವು ಮಮತಾ ಬ್ಯಾನರ್ಜಿ ಅವರನ್ನು...

ಸಚಿವ ಸಂಪುಟ ವಿಸ್ತರಣೆ ಮಾಡುವುದು ಹೈಕಮಾಂಡ್: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ವಿಧಾನಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ...

Copying is disabled on Udupi Digital News.