Saturday, June 13, 2026

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು

ಬ್ರಹ್ಮಾವರ: ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ ಸಮೀಪ ಹೆರಂಜೆಯಲ್ಲಿ ಸಂಭವಿಸಿದೆ.

ಮೃತ ಬಾಲಕನನ್ನು ದಕ್ಷ್ ಪೂಜಾರಿ (1.5) ಎಂದು ಗುರುತಿಸಲಾಗಿದೆ. ಈತ ಹೆರಂಜೆಯ ಪ್ರಶಾಂತ್ ಪೂಜಾರಿ ಹಾಗೂ ಸುಚಿತ್ರ ಪೂಜಾರಿ ದಂಪತಿಯ ಪುತ್ರನಾಗಿದ್ದಾನೆ. ದಕ್ಷ್‌ಗೆ ದಿಯಾ (6) ಎಂಬ ಅಕ್ಕ ಇದ್ದು, ಆಕೆ ಬ್ರಹ್ಮಾವರದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಥಮ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ.

ಪ್ರಶಾಂತ್ ಪೂಜಾರಿ ಅವರು ಕಳೆದ ಸುಮಾರು 13 ವರ್ಷಗಳಿಂದ ಬ್ರಹ್ಮಾವರ ಗಾಂಧಿ ಮೈದಾನದ ಸಮೀಪ ಸಣ್ಣ ಗಾಡಿಯಲ್ಲಿ ಫಾಸ್ಟ್ ಫುಡ್ ವ್ಯಾಪಾರ ನಡೆಸುತ್ತಿದ್ದು, ಕುಟುಂಬ ಜೀವನ ಸಾಗಿಸುತ್ತಿದ್ದರು.

ಮಾಹಿತಿಗಳ ಪ್ರಕಾರ ಮಂಗಳವಾರ ಬೆಳಿಗ್ಗೆ ಸುಮಾರು 8.15 ಗಂಟೆಯ ವೇಳೆ ಈ ದುರ್ಘಟನೆ ಸಂಭವಿಸಿದೆ. ಮಗಳು ದಿಯಾಳನ್ನು ಶಾಲಾ ಬಸ್ಸಿಗೆ ಕಳುಹಿಸಲು ಸುಚಿತ್ರ ಪೂಜಾರಿ ಅವರು ಮಗ ದಕ್ಷ್‌ನನ್ನು ಕೈಯಲ್ಲಿ ಎತ್ತಿಕೊಂಡು ಮನೆಯಿಂದ ಹೊರಟಿದ್ದರು. ಈ ವೇಳೆ ರಸ್ತೆಯ ಬದಿಯಲ್ಲಿದ್ದ ಸುಮಾರು 40 ಅಡಿ ಎತ್ತರದ ತೆಂಗಿನ ಮರದಿಂದ ತೆಂಗಿನಕಾಯಿ ಕೆಳಗೆ ಬಿದ್ದು ದಕ್ಷ್‌ನ ತಲೆಗೆ ಬಡಿದಿದೆ.

ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ತಕ್ಷಣ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ವೈದ್ಯರು ಶಸ್ತ್ರಚಿಕಿತ್ಸೆಯನ್ನೂ ನಡೆಸಿದ್ದರೂ, ತಲೆಯ ಮೆದುಳಿಗೆ ತೀವ್ರ ಪೆಟ್ಟಾಗಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

More like this
Related

ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ಉಡುಪಿ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಶುಕ್ರವಾರ ಕೊಲ್ಲೂರು ಶ್ರೀ ಮೂಕಾಂಬಿಕಾ...

ಭಾರತದಲ್ಲಿ ಭೀತಿ ಸೃಷ್ಟಿಸಲು ದಾವೂದ್ ಗ್ಯಾಂಗ್‌ನಿಂದ ಟಾರ್ಗೆಟ್ ಹತ್ಯೆಗಳ ಸಂಚು; ಗುಪ್ತಚರ ಸಂಸ್ಥೆಗಳ ಎಚ್ಚರಿಕೆ

ನವದೆಹಲಿ: ದಾವೂದ್ ಇಬ್ರಾಹಿಂ ಸಿಂಡಿಕೇಟ್ ಭಾರತದಲ್ಲಿ ಭೀತಿ ಮತ್ತು ಆತಂಕದ ವಾತಾವರಣ...

ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ; ಭದ್ರತೆ ಕಟ್ಟು ನಿಟ್ಟಿನದು

ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಶುಕ್ರವಾರ ಕರ್ನಾಟಕದ ಉಡುಪಿ...

ಅಹಮದಾಬಾದ್ ವಿಮಾನ ದುರಂತ: 72 ಗಂಟೆಗಳ ತುರ್ತು ಕಾರ್ಯಾಚರಣೆ, ವಾರಗಳ ಕಾಲ ನಡೆದ ಡಿಎನ್‌ಎ ಗುರುತಿನ ಪ್ರಕ್ರಿಯೆ

ಅಹಮದಾಬಾದ್: ಏರ್ ಇಂಡಿಯಾ ವಿಮಾನ ದುರಂತದ ಮೊದಲ ವರ್ಷದ ಹಿನ್ನೆಲೆಯಲ್ಲಿ, ಅಹಮದಾಬಾದ್...

Copying is disabled on Udupi Digital News.