Monday, September 14, 2026

ಬ್ರಹ್ಮಾವರ: ತಂದೆ ತಾಯಿಯನ್ನೇ ಸುತ್ತಿಗೆಯಿಂದ ಹೊಡೆದ ಹತ್ಯೆಗೈದ ಮಗ

ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ ಆಘಾತಕಾರಿ ಘಟನೆ ಬ್ರಹ್ಮಾವರದ ಗಾಂಧಿನಗರದಲ್ಲಿ ರವಿವಾರ (ಆ.23) ರಾತ್ರಿ ನಡೆದಿದೆ.

ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಅಲಿ ಮತ್ತು ಅವರ ಪತ್ನಿ ಶಂಶಾದ್ ಬೇಗಂ ಮೃತಪಟ್ಟ ದಂಪತಿ. ಅವರ ಪುತ್ರ ಶಾಹಿದ್ ಅಲಿ ಹತ್ಯೆ ಆರೋಪಿಯಾಗಿದ್ದು, ಬ್ರಹ್ಮಾವರ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮೆಹಬೂಬ್ ಅಲಿ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಶಾಹಿದ್ ಅಲಿ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ರವಿವಾರ ರಾತ್ರಿ ತಂದೆ-ತಾಯಿಯೊಂದಿಗೆ ಯಾವುದೋ ವಿಚಾರಕ್ಕೆ ಜಗಳವಾಗಿದ್ದು, ಈ ವೇಳೆ ಸಿಟ್ಟಿಗೆದ್ದ ಶಾಹಿದ್ ಅಲಿ ಸುತ್ತಿಗೆಯಿಂದ ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ದಂಪತಿ ಮೃತಪಟ್ಟಿದ್ದಾರೆ. ಘಟನೆ ಬಳಿಕ ಆರೋಪಿಯೇ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎನ್ನಲಾಗಿದ್ದು, ಮಾಹಿತಿ ಆಧರಿಸಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಶಾಹಿದ್ ಅಲಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಕುಟುಂಬ ಕಲಹ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದು, ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.

More like this
Related

ಉಡುಪಿ ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ...

ಕಡಿಯಾಳಿಯಲ್ಲಿ ವಜ್ರಮಹೋತ್ಸವದ ಸಂಭ್ರಮ: ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಕಡಿಯಾಳಿ ವತಿಯಿಂದ ಆಯೋಜಿಸಲಾಗಿರುವ 60ನೇ...

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ...

ಬಳ್ಳಾರಿ ಚಲೋ ನಡೆಸಿದ್ದ ಬಿಜೆಪಿ ನಾಯಕರಿಗೆ ಶಾಕ್; ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ FIR

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಭ್ರಷ್ಟಾಚಾರವನ್ನು ಖಂಡಿಸಿ...

Copying is disabled on Udupi Digital News.