Wednesday, April 29, 2026

ಉಡುಪಿ: ಬಸ್ ನಿರ್ವಾಹಕನ ಮಗ ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್!

ಯುಡಿ ನ್ಯೂಸ್ ಡಾಟ್ ಕಾಮ್

ಕುಂದಾಪುರ: ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಉಡುಪಿ ಜಿಲ್ಲೆಯ ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಪ್ರೌಢಶಾಲೆಯ ವಿದ್ಯಾರ್ಥಿ ಪ್ರೀತಮ್ ಜಿ. ಪೂಜಾರಿ 625 ಅಂಕ ಪಡೆಯುವ ಮೂಲಕ ರಾಜ್ಯದಲ್ಲಿ ಮೊದಲ ರ್ಯಾಂಕ್ ಗಳಿಸಿದ್ದಾರೆ. ಪ್ರೀತಮ್ ಪೂಜಾರಿ ಸೇರಿ ಒಟ್ಟು ಏಳು ಮಂದಿ ಗರಿಷ್ಠ 625 ಅಂಕ ಗಳಿಸುವ ಮೂಲಕ ರಾಜ್ಯದಲ್ಲಿ ಅಗ್ರಸ್ಥಾನವನ್ನು ಹಂಚಿಕೊಂಡಿದ್ದಾರೆ.

ಪ್ರೀತಮ್ ಪೂಜಾರಿ ಬಿದ್ಕಲ್ಕಟ್ಟೆ ನಿವಾಸಿ ಗಣಪತಿ ಪೂಜಾರಿ-ನಾಗರತ್ನ ದಂಪತಿಯ ಇಬ್ಬರ ಮಕ್ಕಳ ಪೈಕಿ ಹಿರಿಯ ಪುತ್ರ. ತಂದೆ ಗಣಪತಿಯವರು ಶ್ರೀ ಲಕ್ಷ್ಮೀ ಎಕ್ಸ್ಪ್ರೆಸ್ ಖಾಸಗಿ ಬಸ್ಸಿನಲ್ಲಿ ಕಂಡಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ತಾಯಿ ನಾಗರತ್ನ ಗೃಹಿಣಿ. ಎಲ್.ಕೆ.ಜಿ.ಯಿಂದಲೂ ಪ್ರೀತಮ್ ಮದರ್ ಥೆರೆಸಾ ವಿದ್ಯಾ ಸಂಸ್ಥೆಯಲ್ಲಿ ಕಲಿತಿದ್ದಾನೆ.

ಅಂದಿನ ಪಾಠವನ್ನು ಅಂದೇ ಕಣ್ಣುಹಾಯಿಸುತ್ತಿದ್ದೆ. ಪಠ್ಯವನ್ನು ಓದಿ ಮುಗಿಸಲು ತಿಂಗಳ ಗುರಿಯನ್ನು ಇಟ್ಟುಕೊಂಡಿದ್ದೆ. ಪೋಷಕರು ಹಾಗೂ ವಿದ್ಯಾಸಂಸ್ಥೆಯವರ ಪ್ರೋತ್ಸಾಹ, ಮಾರ್ಗದರ್ಶನ ಸಾಧನೆಗೆ ಪ್ರೇರಣೆ. ಮುಂದೆ ವಿಜ್ಞಾನ ವಿಭಾಗದಲ್ಲಿ ಪಿಸಿಎಂಸಿಎಸ್ ಓದಿ ಜೆಇಇ ಪರೀಕ್ಷೆ ಬರೆಯುವ ಇಂಗಿತ ವ್ಯಕ್ತಪಡಿಸಿದ್ದಾರೆ ಸಾಧಕ ವಿದ್ಯಾರ್ಥಿ ಪ್ರೀತಮ್.

More like this
Related

ವರಾಹಿ ಒಡಲು ಬರಿದಾಗಿಸಬೇಡಿ – ಕೆ ವಿಕಾಸ್ ಹೆಗ್ಡೆ

ಉಡುಪಿ: ವರಾಹಿ ನದಿ ನೀರನ್ನು ನಂಬಿದ್ದ ಕುಂದಾಪುರ ಪುರಸಭೆ ಹಾಗೂ ಕುಂದಾಪುರ...

ಎಸ್‌ಸಿ ಒಳ ಮೀಸಲಾತಿ ಅಧಿಕೃತ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ಯುಡಿ ನ್ಯೂಸ್ ಡಾಟ್ ಕಾಮ್ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಸಮುದಾಯಗಳಿಗೆ ಒಳ...

ಪಂದ್ಯದ ವೇಳೆ ಇ-ಸಿಗರೇಟ್ ಸೇದಿದ ರಾಜಸ್ಥಾನ್‌ ನಾಯಕ: ಜೈಲು ಶಿಕ್ಷೆಯ ಭೀತಿ!

ಯುಡಿ ನ್ಯೂಸ್ ಡಾಟ್ ಕಾಮ್ಚಂಡೀಗಢ: ಇಂಡಿಯನ್ ಪ್ರೀಮಿಯರ್ ನಲ್ಲಿ ಪಂಜಾಬ್ ಕಿಂಗ್ಸ್...

ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಯುಡಿ ನ್ಯೂಸ್ ಡಾಟ್ ಕಾಮ್ ಕುಂದಾಪುರ: ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ...

Copying is disabled on Udupi Digital News.