Friday, October 30, 2026

ಅಭಿಮತ ಸಂಭ್ರಮ ಕಾರ್ಯಕ್ರಮದಲ್ಲಿ ಅವಧಿ ಮೀರಿ ಧ್ವನಿವರ್ಧಕ ಬಳಕೆ: ಪ್ರಕರಣ ದಾಖಲು

ಬ್ರಹ್ಮಾವರ: ಹಂದಾಡಿ ಗ್ರಾಮದ ಗಾಂಧಿ ಮೈದಾನದಲ್ಲಿ ಜನಸೇವಾ ಟ್ರಸ್ಟ್ ವತಿಯಿಂದ ಫೆ.14ರಂದು ನಡೆದ ಅಭಿಮತ ಸಂಭ್ರಮ ಕಾರ್ಯಕ್ರಮದಲ್ಲಿ ಅವಧಿ ಮೀರಿ ಧ್ವನಿವರ್ಧಕವನ್ನು ಬಳಸಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಕಾರ್ಯಕ್ರಮದಲ್ಲಿ ಸಂಜೆ 6ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕವನ್ನು ಬಳಸುವಂತೆ ಷರತ್ತನ್ನು ವಿಧಿಸಲಾಗಿತ್ತು. ಆದರೂ ಕೂಡ ಕಾರ್ಯಕ್ರಮದಲ್ಲಿ ಅವಧಿ ಮೀರಿ ಧ್ವನಿವರ್ಧಕವನ್ನು ಬಳಸಿ ಪರವಾನಗಿ ಯಲ್ಲಿ ವಿಧಿಸಿದ ಷರತ್ತನ್ನು ಉಲ್ಲಂಘನೆ ಮಾಡಲಾಗಿದೆ ಎಂದು ದೂರಲಾಗಿದೆ.

ಈ ಮೂಲಕ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆಗೆ ವ್ಯತಿರಿಕ್ತವಾಗಿ ನಡೆದುಕೊಂಡು, ಕಾನೂನು ಉಲ್ಲಂಘಿಸಿರುವ ಸಂಸ್ಥೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ನೀಡಿದ ವರದಿಯಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

More like this
Related

ಒಮಾನ್ ಕರಾವಳಿಯ ಹಾರ್ಮುಝ್ ಜಲಸಂಧಿಯಲ್ಲಿ ಹಡಗಿಗೆ ಬೆಂಕಿ

ಟೆಹರಾನ್: ಒಮಾನ್ ಕರಾವಳಿಯ ಹಾರ್ಮುಝ್ ಜಲಸಂಧಿಯಲ್ಲಿ ಸಂಚರಿಸುತ್ತಿದ್ದ ಹಡಗೊಂದರಲ್ಲಿ ಬೆಂಕಿ ಕಾಣಿಸಿಕೊಂಡಿರುವ...

ಅ.31ರಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಸ್ನೇಹ ಸಮಾವೇಶ- ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಸ್ನೇಹ ಸಮಾವೇಶ ಮತ್ತು...

ಹಾಲಿನ ದರ ಲೀಟರ್‌ಗೆ 8 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ರಾಜ್ಯದಲ್ಲಿ ಹಾಲಿನ ದರವನ್ನು ಲೀಟರ್‌ಗೆ 8 ರೂ. ಹೆಚ್ಚಳ ಮಾಡಲು...

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಉಡುಪಿ: ಕಾಂಗ್ರೆಸ್ ಪಕ್ಷದ ಸಂಘಟನೆಗೆ ನಿರಂತರವಾಗಿ ಶ್ರಮಿಸುತ್ತಿರುವ ಉಡುಪಿ ಬ್ಲಾಕ್ ಕಾಂಗ್ರೆಸ್...

Copying is disabled on Udupi Digital News.