Monday, September 14, 2026

ಉಡುಪಿ ಜಿಲ್ಲೆಯಲ್ಲಿ ಕ್ರೈಸ್ತ ಬಾಂಧವರಿಂದ ಪ್ರಾರ್ಥನೆ ಹಾಗೂ ಧನ್ಯವಾದ ಸಮರ್ಪಣೆಯೊಂದಿಗೆ ಹೊಸ ವರ್ಷಕ್ಕೆ ಸ್ವಾಗತ


ಉಡುಪಿ: 2026 ನೇ ವರ್ಷವನ್ನು ಜಿಲ್ಲೆಯ ಕ್ರೈಸ್ತ ಬಾಂಧವರು ಪ್ರಾರ್ಥನೆ ಹಾಗೂ ಧನ್ಯವಾದ ಸಮರ್ಪಣೆಯೊಂದಿಗೆ ಸ್ವಾಗತಿಸಿದರು.
ಬುಧವಾರ ಸಂಜೆ ಚರ್ಚ್ಗಳಿಗೆ ತೆರಳಿದ ಕ್ರೈಸ್ತರು ದೇವರಿಗೆ ಕೃತಜ್ಞತೆ ಸಲ್ಲಿಸುವುದೊರಂದಿಗೆ ನೂತನ ವರ್ಷ ಪ್ರತಿಯೊಬ್ಬರ ಜೀವನದಲ್ಲಿ ಸುಖ, ಶಾಂತಿ, ನೆಮ್ಮದಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದರು.

ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೆರಾಲ್ಡ್ ಐಸಾಕ್ ಲೋಬೊ ಅವರು ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ನಲ್ಲಿ ಬುಧವಾರ ರಾತ್ರಿ ಪವಿತ್ರ ಬಲಿಪೂಜೆಯನ್ನು ಅರ್ಪಿಸಿದರು.

ನೂತನ ವರ್ಷದಲ್ಲಿ ದೇವರು ತೋರಿದ ಹಾದಿಯಲ್ಲಿ ನಡೆದು ವಿಶ್ವ ಶಾಂತಿಗಾಗಿ ಪ್ರತಿಯೊಬ್ಬರು ಪ್ರಾರ್ಥನೆ ಸಲ್ಲಿಸುವಂತೆ ಸಲಹೆ ನೀಡುವುದರೊಂದಿಗೆ ವಿಶ್ವಶಾಂತಿಗಾಗಿ ನಮ್ಮಿಂದಾಗುವ ಪ್ರಯತ್ನವನ್ನು ಮಾಡುವಂತೆ ಕ್ರೈಸ್ತ ಸಮುದಾಯಕ್ಕೆ ಕರೆ ನೀಡಿದರು.

ಮಿಲಾಗ್ರಿಸ್ ಕ್ಯಾಥೆಡ್ರಲ್ನ ಪ್ರಧಾನ ಧರ್ಮಗುರು ಮೊನ್ಷಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಸಹಾಯಕ ಧರ್ಮಗುರುಗಳಾದ ಪ್ರದೀಪ್ ಕಾರ್ಡೋಜಾ ಹಾಗೂ ಅತಿಥಿ ಧರ್ಮಗುರುಗಳು ಉಪಸ್ಥಿತರಿದ್ದರು.

ಉಡುಪಿ ಶೋಕಮಾತಾ ಇಗರ್ಜಿಯಲ್ಲಿ ಧರ್ಮಗುರು ಚಾರ್ಲ್ಸ್ ಮಿನೇಜಸ್, ಶಿರ್ವ ಆರೋಗ್ಯ ಮಾತಾ ಚರ್ಚಿನಲ್ಲಿ ವಂ|ಲೆಸ್ಲಿ ಡಿಸೋಜಾ, ತೊಟ್ಟಂ ಸಂತ ಅನ್ನಮ್ಮ ಚರ್ಚ್ನಲ್ಲಿ ಡೆನಿಸ್ ಡೆಸಾ ಅವರ ನೇತೃತ್ವದಲ್ಲಿ ಹಾಗೂ ಜಿಲ್ಲೆಯ ಎಲ್ಲಾ ಚರ್ಚುಗಳಲ್ಲಿ ಹೊಸ ವರ್ಷ ಆಚರಣೆಯ ಪ್ರಯುಕ್ತ ಬಲಿಪೂಜೆಗಳು ನಡೆದವು.

ಹೊಸ ವರ್ಷಾಚರಣೆ ಸ್ವಾಗತಿಸುವ ಅಂಗವಾಗಿ ಚರ್ಚ್ಗಳಲ್ಲಿ ಯುವ ಸಂಘಟನೆಯ ಸದಸ್ಯರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ, ಕೇಕ್ ವಿತರಣೆ ಕೂಡ ನಡೆಯಿತು. ಬಲಿಪೂಜೆಯ ಬಳಿಕ ಪರಸ್ಪರ ಹೊಸ ವರ್ಷದ ಶುಭಾಶಯ ವಿನಿಮಯ ಮಾಡಿಕೊಳ್ಳಲಾಯಿತು.

More like this
Related

ಉಡುಪಿ ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ...

ಕಡಿಯಾಳಿಯಲ್ಲಿ ವಜ್ರಮಹೋತ್ಸವದ ಸಂಭ್ರಮ: ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಕಡಿಯಾಳಿ ವತಿಯಿಂದ ಆಯೋಜಿಸಲಾಗಿರುವ 60ನೇ...

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ...

ಬಳ್ಳಾರಿ ಚಲೋ ನಡೆಸಿದ್ದ ಬಿಜೆಪಿ ನಾಯಕರಿಗೆ ಶಾಕ್; ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ FIR

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಭ್ರಷ್ಟಾಚಾರವನ್ನು ಖಂಡಿಸಿ...

Copying is disabled on Udupi Digital News.