Thursday, September 17, 2026

ಕುಂದಾಪುರ ಸುಳಿಗುಂಡಿ ಹಿರೇಹೊಳೆಯಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿ ಮೃತ್ಯು

ಕುಂದಾಪುರ: ತೆಕ್ಕಟ್ಟೆ ಸಮೀಪದ ಆರ್ಬೆಟ್ಟು ಸುಳಿಗುಂಡಿ ಹಿರೇಹೊಳೆಗೆ ಈಜಲು ತೆರಳಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದ ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿಯ ಮೃತದೇಹ ರವಿವಾರ ಬೆಳಗ್ಗೆ ಪತ್ತೆಯಾಗಿದೆ.

ಸಾೖಬ್ರಕಟ್ಟೆ ಗರಿಕೆಮಠ ಮೂಲದ ಸಾಮರಾಜ್ (21) ಮೃತಪಟ್ಟ ವಿದ್ಯಾರ್ಥಿ ಎಂದು ಪೊಲೀಸರು ತಿಳಿಸಿದ್ದಾರೆ.

​ಘಟನೆಯ ವಿವರ:-
ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದ ಸಾಮರಾಜ್, ಜೂನ್ 13ರ ಸಂಜೆ ಸುಮಾರು 4.30ರ ವೇಳೆಗೆ ಆರ್ಬೆಟ್ಟು ಸುಳಿಗುಂಡಿ ಹಿರೇಹೊಳೆಗೆ ಈಜಲು ತೆರಳಿದ್ದಾಗ ನೀರಿನ ತೀವ್ರ ಸೆಳೆತಕ್ಕೆ ಸಿಲುಕಿ ಮುಳುಗಿ ನಾಪತ್ತೆಯಾಗಿದ್ದರು.

​ವಿದ್ಯಾರ್ಥಿ ನಾಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ಅವರ ತಂಡ ಶೋಧ ಕಾರ್ಯಾಚರಣೆ ನಡೆಸಿದ್ದು, ಇಂದು ಬೆಳಗ್ಗಿನಿಂದಲೇ ಭಾರೀ ಮಳೆ ಸುರಿಯುತ್ತಿದ್ದರೂ ಲೆಕ್ಕಿಸದ ತಂಡ, ಆಕ್ಸಿಜನ್ ಸಿಲಿಂಡ‌ರ್ ಬಳಸಿ ಹೊಳೆಯ ಆಳಕ್ಕೆ ಇಳಿದು ತೀವ್ರ ಹುಡುಕಾಟ ಮುಂದುವರಿಸಿದ್ದರು. ತಂಡದ ನಿರಂತರ ಕಾರ್ಯಾಚರಣೆಯಿಂದ ಹೊಳೆಯ ಮಧ್ಯಭಾಗದಲ್ಲಿ ಸಾಮರಾಜ್‌ ಅವರ ಮೃತದೇಹ ಪತ್ತೆಯಾಗಿದೆ.

More like this
Related

ತಾನು ತೆಗೆದುಕೊಳ್ಳುವ ಪ್ರತಿಯೊಂದು ನಿರ್ಣಯ ಅಧ್ಯಕ್ಷನದ್ದಾಗಿರದೆ ಸಾಮಾನ್ಯ ಕಾರ್ಯಕರ್ತನದ್ದಾಗಿರುತ್ತದೆ : ಕಿಶನ್ ಹೆಗ್ಡೆ ಕೊಳ್ಕೆಬೈಲು

ಉಡುಪಿ: ತಾನು ತೆಗೆದುಕೊಳ್ಳುವ ಪ್ರತಿಯೊಂದು ನಿರ್ಣಯವೂ ಕಾಂಗ್ರೆಸ್ ಅಧ್ಯಕ್ಷನ ನಿರ್ಣಯವಲ್ಲ, ಒಬ್ಬ...

ಏಷ್ಯನ್ ಗೇಮ್ಸ್: ಫಾತಿಮಾ ಸನಾ ಅವರ ಆಲ್‌ರೌಂಡ್ ಪ್ರದರ್ಶನದಿಂದ ಪಾಕಿಸ್ತಾನ ಸೆಮಿಫೈನಲ್‌ಗೆ

ನಿಶಿನ್: ಥಾಯ್ಲೆಂಡ್ ವಿರುದ್ಧದ ಕೊನೆಯ ಹಂತದ ಆತಂಕವನ್ನು ಮೆಟ್ಟಿನಿಂತ ಪಾಕಿಸ್ತಾನ, 2026ರ...

ಉಡುಪಿ ಬ್ಯಾಡ್ಮಿಂಟನ್ ಲೀಗ್‌ ನಲ್ಲಿ ಮೈಟಿ ಇಯಾನ್ ರಾಯಲ್ಸ್ ತಂಡ ಚಾಂಪಿಯನ್

ಉಡುಪಿ: ಡಾ. ನವೀನ್ ಅಮಣ್ಣ ಹಾಗೂ ಡಾ. ಅಡಾಲ್ಫ್ ಶೆರ್ವಿನ್ ಅವರ...

ರಾಜಸ್ಥಾನಿ ಮಹಿಳೆ ಅಪಹರಣ ಪ್ರಕರಣ: ಮೂವರು ಬಂಧನ, ಓರ್ವ ಮಹಿಳೆ ಗಂಭೀರ

ಬೆಂಗಳೂರು: ಬೆಂಗಳೂರಿನ ಅಗ್ರಹಾರ ದಾಸರಹಳ್ಳಿಯಲ್ಲಿ 21 ವರ್ಷದ ವಿವಾಹಿತ ಮಹಿಳೆಯನ್ನು ಆಕೆಯ...

Copying is disabled on Udupi Digital News.