Monday, June 15, 2026

ಜನಸ್ನೇಹಿ ಪಿಎಸ್ಐ ನಾಸಿರ್ ಹುಸೇನ್ ಕುಸಿದು ಬಿದ್ದು ಸಾವು!

ಯುಡಿ ನ್ಯೂಸ್ ಡಾಟ್ ಕಾಮ್

ಉಡುಪಿ: ಡ್ರಗ್ಸ್ ನಿರ್ಮೂಲನೆಗಾಗಿ ಮಾದಕ ವಸ್ತು ಸೇವನೆಯ ವಿರುದ್ದ ಸಾರ್ವಜನಿಕ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಆಯೋಜಿಸಿದ್ದ ಮ್ಯಾರಥಾನ್ ನಲ್ಲಿ ಪಿಎಸ್ಐ ನಾಸಿರ್ ಹುಸೇನ್ (59) ಕುಸಿದು ಬಿದ್ದು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಉಡುಪಿಯಲ್ಲಿ ಭಾನುವಾರ ನಡೆದಿದೆ.

ಮೂಲತಃ ಚಿಕ್ಕಮಗಳೂರಿನ ಮೂಡುಗೆರೆಯ ನಿವಾಸಿಯಾಗಿರುವ ನಾಸೀರ್ ಕುಂದಾಪುರ ಪೊಲೀಸ್ ಉಪವಿಭಾಗ ವ್ಯಾಪ್ತಿಯ ಅಮಾಸೆಬೈಲು, ಕುಂದಾಪುರ, ಬೈಂದೂರು, ಕೊಲ್ಲೂರು, ಶಂಕರನಾರಾಯಣದಲ್ಲಿ ಠಾಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಪ್ರಸ್ತುತ ಗ್ರಾಮಾಂತರ (ಕಂಡ್ಲೂರು) ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಭಾರತೀಯ ಸೇನೆಯಿಂದ ಪೊಲೀಸ್ ವೃತ್ತಿಗೆ ಸೇರ್ಪಡೆಗೊಂಡಿದ್ದ ನಾಸಿರ್ ಹುಸೇನ್ ಜನಸ್ನೇಹಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಠಾಣೆಗಳಲ್ಲೆಲ್ಲಾ ಜನ ಮೆಚ್ಚುಗೆ ಗಳಿಸಿದ್ದರು. ಇದೀಗ ನಾಸಿರ್ ಹುಸೆನ್ ಹಠಾತ್ತ್ ಸಾವು ಅವರ ಅಪಾರ ಸ್ನೇಹ ವಲಯವನ್ನು ಕಂಗೆಡಿಸಿದೆ.

ಮೃತದೇಹ ಸದ್ಯ ಮಣಿಪಾಲ ಆಸ್ಪತ್ರೆಯಲ್ಲಿದ್ದು, ಪೊಲೀಸ್ ಅಧೀಕಾರಿ ಹಾಗೂ ಸಿಬ್ಬಂದಿಗಳು ಆಸ್ಪತ್ರೆಯತ್ತ ದೌಡಾಯಿಸುತ್ತಿದ್ದಾರೆ.

More like this
Related

ಮಣಿಪಾಲ| ತಪ್ಪಿದ ದುರಂತ: ಶಾಲಾ ಬಸ್ ಚಾಲಕನಿಗೆ ಹೃದಯಾಘಾತ

ಮಣಿಪಾಲ: ಚಲಿಸುತ್ತಿದ್ದ ಶಾಲಾ ಬಸ್ಸಿನ ಚಾಲಕನಿಗೆ ಏಕಾಏಕಿ ಹೃದಯಾಘಾತ ಸಂಭವಿಸಿದರೂ, ಅವರ...

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ

ಮಲ್ಪೆ: ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ತಾತ್ಕಾಲಿಕ...

ಜೂನ್ 17: ಕುಂದಾಪುರ ತಾಲೂಕು ಕಾರ್ಯನಿರತ‌ ಪತ್ರಕರ್ತರ ಸಂಘದಿಂದ‌ ‘ವಿಶ್ವ ಪರಿಸರ ದಿನಾಚರಣೆ’

ಕುಂದಾಪುರ: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅರಣ್ಯ ಇಲಾಖೆ...

ಮೋಸದಾಟಗಳಿಂದ ಚುನಾವಣೆ ಸೋಲು: ಕೆ. ಜಯಪ್ರಕಾಶ್ ಹೆಗ್ಡೆ

ವಂಡ್ಸೆಯಲ್ಲಿ ಕಾಂಗ್ರೆಸ್‌ನಿಂದ ಎಸ್‌ಐಆರ್ ಮತದಾರ ಪರಿಷ್ಕರಣೆ ತರಬೇತಿ ಕಾರ್ಯಕ್ರಮ ಕುಂದಾಪುರ: ದೇಶದ ವಿವಿಧ...

Copying is disabled on Udupi Digital News.