Thursday, July 30, 2026

ಯಶ್ಪಾಲ್ ಸುವರ್ಣ ವಿರುದ್ಧ ಕುಂದಾಪುರ ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು

ಕುಂದಾಪುರ: ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ನೀಡಿರುವ ದ್ವೇಷಪೂರಿತ, ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ಖಂಡಿಸಿ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯು ಇಂದು ಕುಂದಾಪುರ ಪೊಲೀಸ್ ಠಾಣೆಗೆ ಅಧಿಕೃತ ದೂರು ಸಲ್ಲಿಸಿತು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆದೂರು ಸದಾನಂದ ಶೆಟ್ಟಿ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಪೊಲೀಸ್ ಠಾಣೆಗೆ ತೆರಳಿ, ಯಶ್ಪಾಲ್ ಸುವರ್ಣ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು.

ದೂರು ಸಲ್ಲಿಸುವ ಸಂದರ್ಭದಲ್ಲಿ ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ಟೋ, ಮಾಜಿ ಪುರಸಭಾ ಅಧ್ಯಕ್ಷೆ ದೇವಕಿ ಸಣ್ಣಯ್ಯ, ಕೆಡಿಪಿ ಸದಸ್ಯ ವಕ್ವಾಡಿ ರಮೇಶ್ ಶೆಟ್ಟಿ, ಪುರಸಭಾ ಮಾಜಿ ಸದಸ್ಯ ಕೇಶವ ಭಟ್, ಎನ್‌ಎಸ್‌ಯುಐ ಅಧ್ಯಕ್ಷ ಸುಜನ್ ಹಾಗೂ ಕಾಂಗ್ರೆಸ್ ಮುಖಂಡರಾದ ಗಣೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ದ್ವೇಷಪೂರಿತ ಹಾಗೂ ಪ್ರಚೋದನಕಾರಿ ಹೇಳಿಕೆಗಳ ವಿರುದ್ಧ ಕಾಂಗ್ರೆಸ್ ಪಕ್ಷ ಕಾನೂನಿನ ಚೌಕಟ್ಟಿನಲ್ಲಿಯೇ ಹೋರಾಟ ಮುಂದುವರಿಸಲಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಮುಖಂಡರು ಆಗ್ರಹಿಸಿದರು.

More like this
Related

ಕನಿಷ್ಠ ಕೂಲಿ ಜಾರಿಯಾಗುವವರೆಗೆ ಹೋರಾಟ ತೀವ್ರ: ವಿ. ಚಂದ್ರಶೇಖರ ಎಚ್ಚರಿಕೆ

ಕನಿಷ್ಠ ಕೂಲಿ ಜಾರಿಗೆ ಆಗ್ರಹಿಸಿ ಸಿಐಟಿಯು ಪ್ರತಿಭಟನೆ ಅಧಿಸೂಚಿತ ಕನಿಷ್ಠ ಕೂಲಿ ತಕ್ಷಣ...

ಕೋಟ್ಯಾಂತರ ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಅವರ ಧ್ವನಿ ಪ್ರತಿಧ್ವನಿಯಾಯಿತು: ಸಚಿನ್ ಸುವರ್ಣ ಪಿತ್ರೋಡಿ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ...

ಹಣಕ್ಕಾಗಿ ಬೇಡಿಕೆ ಆರೋಪ: ಕಾರ್ಕಳ ಡಿವೈಎಸ್ಪಿ, ಸಿಪಿಐ ಸೇರಿದಂತೆ ಮೂವರು ಪೊಲೀಸರ ಅಮಾನತು

ಕಾರ್ಕಳ: ಪೊಲೀಸ್ ಇಲಾಖೆ ಕಚೇರಿಯಲ್ಲಿ ಹಣದ ಬೇಡಿಕೆ ಆರೋಪಕ್ಕೆ ಸಂಬಂಧಿಸಿದ ವಿಡಿಯೋ...

ಧ್ವೇಷ ಭಾಷಣ ಪ್ರಕರಣ: ಶಾಸಕ ಯಶ್‌ಪಾಲ್‌ ಸುವರ್ಣಗೆ ಪೊಲೀಸರಿಂದ ನೋಟಿಸ್

ಉಡುಪಿ: ದ್ವೇಷ ಭಾಷಣ ಆರೋಪದಡಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ...

Copying is disabled on Udupi Digital News.