ಕುಂದಾಪುರ: ಕರಾವಳಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಒತ್ತು ಕೊಡುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ರವರ ನಿರ್ಧಾರವನ್ನು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಸ್ವಾಗತಿಸಿದ್ದಾರೆ.
ಗೋವಾ ಹಾಗೂ ಕೇರಳ ಕರಾವಳಿಗಿಂತ ಕರ್ನಾಟಕದ ಕರಾವಳಿ ಪ್ರವಾಸೋದ್ಯಮಕ್ಕೆ ಅತ್ಯಂತ ಹೆಚ್ಚು ಅವಕಾಶಗಳನ್ನು ಹೊಂದಿದೆ. ಕರ್ನಾಟಕದ ಕರಾವಳಿಯ ಸಮುದ್ರ ಕಿನಾರೆಗಳು ಮಾತ್ರವಲ್ಲದೆ ನದಿಗಳ ಹಿನ್ನಿರು ಕೂಡ ಪ್ರವಾಸೋದ್ಯಮ ಅಭಿವೃದ್ಧಿಗೆ ಉಪಯುಕ್ತವಾಗಿವೆ. ಇವತ್ತು ಹಿನ್ನಿರು ಪ್ರವಾಸೋದ್ಯಮದಲ್ಲಿ ದೇಶದಲ್ಲೇ ಹೆಸರುವಾಸಿಯಾಗಿರುವ ಪ್ರದೇಶ ಕೇರಳದ ಕುಮಾರಗಂ. ಆದರೆ ಕರ್ನಾಟಕದ ಕರಾವಳಿಯಲ್ಲಿ ಕುಮಾರಗಂಕ್ಕಿಂತ ಹೆಚ್ಚು ಹಿನ್ನಿರು ಪ್ರವಾಸೋದ್ಯಮಕ್ಕೆ ಉಪಯುಕ್ತವಾದ ನದಿಗಳು ಇವೆ. ಇವುಗಳನ್ನು ಪ್ರವಾಸೋದ್ಯಮ ಕೇಂದ್ರಗಳಾಗಿ ಮಾರ್ಪಾಡು ಮಾಡುವ ಮಾನ್ಯ ಮುಖ್ಯಮಂತ್ರಿಗಳ ನಿರ್ಧಾರ ಕೇವಲ ಪ್ರವಾಸೋದ್ಯಮ ಅಭಿವೃದ್ಧಿ ಮಾತ್ರವಲ್ಲದೆ ಕರಾವಳಿಯ ಆರ್ಥಿಕ ಅಭಿವೃದ್ಧಿ ಕೂಡ ಸಹಾಯವಾಗುತ್ತದೆ. ಅದರ ಜೊತೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಉದ್ಯೋಗ ಸೃಷ್ಟಿಯಾಗುವುದರಿಂದ ಲಕ್ಷಾಂತರ ದುಡಿಯುವ ಕೈಗಳಿಗೆ ಶಕ್ತಿ ಸಿಗುತ್ತದೆ.
ಮುಖ್ಯಮಂತ್ರಿಗಳು ಕರಾವಳಿ ಪ್ರವಾಸೋದ್ಯಮದ ರೂಪುರೆಷೆಗಳನ್ನು ರಚಿಸುವಾಗ ಕರಾವಳಿಯ ಸಂಸ್ಕಾರ ಮತ್ತು ಸಂಸ್ಕೃತಿ ರಕ್ಷಣೆಗೂ ಒತ್ತು ಕೊಡಬೇಕೆಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.




