Sunday, September 13, 2026

ಮಿಜಾರ್ ನಲ್ಲಿ ಸಿಲಿಂಡರ್ ಸ್ಪೋಟ : ಮೂವರಿಗೆ ಗಾಯ

ಮೂಡುಬಿದಿರೆ: ಮಿಜಾರ್ ನಲ್ಲಿ ಬಾಡಿಗೆ ಮನೆಯೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ ಮೂವರು ಸುಟ್ಟ ಗಾಯಗೊಂಡ ಘಟನೆ ಮಂಗಳವಾರ (ಅ.11) ಬೆಳಗ್ಗೆ ನಡೆದಿದೆ.

ಮಿಜಾರ್ ನಲ್ಲಿ ಬೆಳಗ್ಗೆ ಸುಮಾರು 6.30ರ ವೇಳೆಗೆ ಈ ಘಟನೆ ಸಂಭವಿಸಿದ್ದು, ಮನೆಯಲ್ಲಿದ್ದ ಮೂಡುಬಿದಿರೆ ಖಾಸಗಿ ಕಾಲೇಜಿನ ವಾಚ್ಮನ್ ಶಿವರಾಮ (31), ಅವರ ಪತ್ನಿ ಗಂಗಾ (25) ಹಾಗೂ ಪುತ್ರ ಆದರ್ಶ್ (6) ಗಾಯಗೊಂಡಿದ್ದಾರೆ. ಶಿವರಾಮ ಅವರಿಗೆ ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯೊಳಗೆ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಿಂದ ಮನೆಯಲ್ಲಿದ್ದವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More like this
Related

ಠಾಣೆಗೆ ನುಗ್ಗಿದರೆ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆ ಉಚಿತ : ಪ್ರತಾಪ್ ಸಿಂಹ ಹೆಸರು ಹೇಳದೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬೆಂಗಳೂರು: ಮೈಸೂರಿನ ಕಡೆಯ ‘ಪೇಟೆ ರೌಡಿ’ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ. ಕಾನೂನು...

ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವಕ್ಕೆ ವಜ್ರ ಮಹೋತ್ಸವದ ಸಂಭ್ರಮ

ವಜ್ರ ಮಹೋತ್ಸವದ ಅಂಗವಾಗಿ ‘ರಾಜ ದರ್ಬಾರ್’ ವೇದಿಕೆ ನಿರ್ಮಾಣ ಉಡುಪಿ: ಕಡಿಯಾಳಿ ಸಾರ್ವಜನಿಕ...

ಕರಾವಳಿ ಸಚಿವ ಸಂಪುಟ ಸಭೆ: ₹5,000 ಕೋಟಿ ವಿಶೇಷ ಪ್ಯಾಕೇಜ್ ಸೇರಿ ಪ್ರಮುಖ ಬೇಡಿಕೆಗಳಿಗೆ ಶಾಸಕ ಮಂಜುನಾಥ್ ಭಂಡಾರಿ ಮನವಿ

ಮಂಗಳೂರು: ಕರಾವಳಿ ಭಾಗದ ಸುದೀರ್ಘ ಬೇಡಿಕೆಗಳು ಹಾಗೂ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ...

ಉಡುಪಿ ಕಥೊಲಿಕ್ ಶಿಕ್ಷಣ ಸೊಸೈಟಿ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ

ಶಿಕ್ಷಕರು ವಿದ್ಯಾರ್ಥಿಗಳನ್ನು ಮಾನವರನ್ನಾಗಿ ರೂಪಿಸುವ ಸಮಾಜದ ಶಿಲ್ಪಿಗಳು : ವಂ. ಫ್ರಾನ್ಸಿಸ್...

Copying is disabled on Udupi Digital News.