Tuesday, July 28, 2026

ದೇಶದಲ್ಲಿ ಚಳುವಳಿ ಹೆಸರಿನಲ್ಲಿ ಅರಾಜಕತೆ ಸೃಷ್ಟಿಸುವವರ ವಿರುದ್ದ ಜಿಲ್ಲಾ ಬಿಜೆಪಿ ಪ್ರತಿಭಟನೆ

ಉಡುಪಿ: ಚಳುವಳಿಯ ಹೆಸರಿನಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕೆಲವರು ಪ್ರಯತ್ನಿಸುತ್ತಿದ್ದು, ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ ಎಂದು ಮಾಜಿ ಸಚಿವ ಹಾಗೂ ಕಾರ್ಕಳ ಶಾಸಕ ಸುನಿಲ್ ಕುಮಾರ್ ಆರೋಪಿಸಿದರು.

ಕಾಕ್ರೋಚ್ ಹಾಗೂ ಕಾಂಗ್ರೆಸ್ ಬೆಂಬಲಿತರು ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದು, ಗೂಂಡಾ ಸಂಸ್ಕೃತಿ ಮತ್ತು ದೇಶವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಜಟ್ಕಾ ಸ್ಟ್ಯಾಂಡ್ ನಲ್ಲಿ ಆಯೋಜಿಸಿದ್ದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು

ಚಳವಳಿಯ ಹೆಸರಿನಲ್ಲಿ ಸೈನಿಕರ ಮೇಲೆ ಕಲ್ಲು ತೂರಾಟ ಹಾಗೂ ಪೊಲೀಸರ ಮೇಲೆ ದಾಳಿ ನಡೆಸುವುದನ್ನು ಭಾರತೀಯ ಸಮಾಜ ಒಪ್ಪುವುದಿಲ್ಲ. ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಧಾನಿ ಮೋದಿ ಹಾಗೂ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಭಾಷೆ ಬಳಸಲಾಗಿದೆ ಎಂದು ಆರೋಪಿಸಿದ ಅವರು, ಇಂತಹ ಪ್ರತಿಭಟನೆಗಳ ಉದ್ದೇಶವೇ ದೇಶದಲ್ಲಿ ಅಶಾಂತಿ ಸೃಷ್ಟಿಸುವುದಾಗಿದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಹಿಂದೂ ಧರ್ಮದ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸುವ ಮೂಲಕ ದೇಶವನ್ನು ಅವಮಾನಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ದೂರಿದರು.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಯಾವುದೇ ಸರ್ಕಾರ ಸಮರ್ಥಿಸಿಲ್ಲ. ಪ್ರಕರಣ ಬೆಳಕಿಗೆ ಬಂದ ತಕ್ಷಣ ಮರುಪರೀಕ್ಷೆ ನಡೆಸಲಾಗಿತ್ತು. ಆದರೆ, ಇಂತಹ ಘಟನೆಗಳನ್ನು ನೆಪವಾಗಿಸಿಕೊಂಡು ದೇಶದ ವಿರುದ್ಧ ವಾತಾವರಣ ನಿರ್ಮಿಸುವ ಪ್ರಯತ್ನ ನಡೆಯುತ್ತಿದೆ ಎಂದು ಕಿಡಿಕಾರಿದರು.

ಪ್ರಧಾನಿ ಮೋದಿ ಅಧಿಕಾರ ಅವಧಿಯಲ್ಲಿ ಭಾರತ ದೇಶದ ಪ್ರತಿಷ್ಠೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಾಗಿದೆ. ಆದರೆ, ದೇಶವನ್ನು ದುರ್ಬಲಗೊಳಿಸುವ ಉದ್ದೇಶದಿಂದ ಕೆಲವು ಶಕ್ತಿಗಳು ಕಾರ್ಯನಿರ್ವಹಿಸುತ್ತಿವೆ. ಕಾಂಗ್ರೆಸ್ಗೆ ಚುನಾವಣಾ ವ್ಯವಸ್ಥೆ, ಸಂಸತ್ತು ಹಾಗೂ ಕಾನೂನಿನ ಮೇಲೆ ನಂಬಿಕೆ ಇಲ್ಲ ಎಂದು ಟೀಕಿಸಿದರು.

ಸಮಾಜವಿರೋಧಿ ಹಾಗೂ ವಿದೇಶಿ ಶಕ್ತಿಗಳೊಂದಿಗೆ ಕೈಜೋಡಿಸುವ ದೇಶವಿರೋಧಿ ಚಟುವಟಿಕೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು. ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಯಾದಾಗ ಮುಸ್ಲಿಮರನ್ನು ಎತ್ತಿಕಟ್ಟುವ ಪ್ರಯತ್ನ ನಡೆದಿತ್ತು. ಸರ್ಜಿಕಲ್ ಸೈಕ್ ಮತ್ತು ‘ಆಪರೇಷನ್ ಸಿಂಧೂರ್’ ಸಂದರ್ಭದಲ್ಲಿಯೂ ಭಾರತೀಯ ಸೇನೆಯ ಕಾರ್ಯಾಚರಣೆಯನ್ನು ಪ್ರಶ್ನಿಸಲಾಗಿತ್ತು. ಇದೇ ರೀತಿಯ ಮನೋಭಾವದವರು ಈಗ ‘ಕಾಕ್ರೋಚ್’ ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಚಳವಳಿಯ ಹೆಸರಿನಲ್ಲಿ ಸೈನಿಕರ ಮೇಲೆ ಕಲ್ಲು ತೂರಾಟ ಹಾಗೂ ಪೊಲೀಸರ ಮೇಲೆ ದಾಳಿ ನಡೆಸುವುದನ್ನು ಭಾರತೀಯ ಸಮಾಜ ಒಪ್ಪುವುದಿಲ್ಲ. ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಧಾನಿ ಮೋದಿ ಹಾಗೂ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಭಾಷೆ ಬಳಸಲಾಗಿದೆ ಎಂದು ಆರೋಪಿಸಿದ ಅವರು, ಇಂತಹ ಪ್ರತಿಭಟನೆಗಳ ಉದ್ದೇಶವೇ ದೇಶದಲ್ಲಿ ಅಶಾಂತಿ ಸೃಷ್ಟಿಸುವುದಾಗಿದೆ ಎಂದು ಹೇಳಿದರು.

ಉಡುಪಿ ಶಾಸಕ ಯಶಪಾಲ್ ಸುವರ್ಣ ಮಾತನಾಡಿ ಯಾವಾಗಲೂ ನಶೆಯಲ್ವೇ ಇರುವ ರಾಹುಲ್ ಗಾಂಧಿ ಅವರಿಗೆ ಯಾವುದೇ ಸ್ಪಷ್ಟ ರಾಜಕೀಯ ನಿಲುವಿಲ್ಲ ಎಂದು ಆರೋಪಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಿಧ ಶಕ್ತಿಗಳನ್ನು ಬಳಸಿಕೊಂಡು ರಾಜಕೀಯ ನಡೆಸಲಾಗುತ್ತಿದೆ ಎಂದು ಟೀಕಿಸಿದರು. ತಮಿಳುನಾಡಿನಲ್ಲಿ ರಾಜೀವ್ ಗಾಂಧಿಯನ್ನು ಹತ್ಯೆಗೈದ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಪಕ್ಷದೊಂದಿಗೆ ಕಾಂಗ್ರೆಸ್ ಕೈಜೋಡಿಸಿದೆ ಎಂದು ಅವರು ಆರೋಪಿಸಿದರು.

ನೀಟ್ ವಿಚಾರವಾಗಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರಲ್ಲಿ ಬಹುತೇಕರು ವಿದ್ಯಾರ್ಥಿಗಳಲ್ಲ ಎಂದು ಹೇಳಿದರು. ಪ್ರತಿಭಟನಾಕಾರರ ಹಿನ್ನೆಲೆ ಪರಿಶೀಲಿಸಿದರೆ ಸತ್ಯ ಹೊರಬೀಳಲಿದೆ ಎಂದು ಅವರು ಅಭಿಪ್ರಾಯಪಟ್ಟರು. ಕಳೆದ ಕೆಲ ದಿನಗಳಲ್ಲಿ ಯಾರು ದೇಶಪ್ರೇಮಿಗಳು ಹಾಗೂ ಯಾರು ದೇಶದ್ರೋಹಿಗಳು ಎಂಬುದು ಸ್ಪಷ್ಟವಾಗಿದೆ ಎಂದು ಹೇಳಿದ ಅವರು, ರಾಹುಲ್ ಗಾಂಧಿ ಕುರಿತು ವೈಯಕ್ತಿಕ ಟೀಕೆಗಳನ್ನೂ. ಮಾಡಿದರು. ಇದೇ ರೀತಿಯ ರಾಜಕೀಯ ಮುಂದುವರಿದರೆ ಬಿಜೆಪಿ ಕಾರ್ಯಕರ್ತರು ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಎಚ್ಚರಿಸಿದರು.

ಮಣಿಪಾಲದ ಶಿಕ್ಷಣ ಸಂಸ್ಥೆಗಳ ಕುರಿತು ಮಾತನಾಡಿದ ಯಶ್ಪಾಲ್ ಸುವರ್ಣ, ಸಂಸ್ಥೆಗಳ ಬಗ್ಗೆ ಗೌರವವಿದ್ದರೂ ವಿದ್ಯಾರ್ಥಿಗಳಲ್ಲಿ ತಪ್ಪು ವಿಚಾರಧಾರೆ ಬಿತ್ತಲಾಗುತ್ತಿದೆ ಎಂದು ಆರೋಪಿಸಿದರು. ಅಲ್ಲಿನ ಕೆಲ ಸಿಬ್ಬಂದಿ ಡ್ರಗ್ಸ್ ಪೂರೈಕೆಯಲ್ಲಿ ತೊಡಗಿದ್ದಾರೆ ಎಂಬ ಮಾಹಿತಿಯೂ ಇದೆ ಎಂದು ಅವರು ಹೇಳಿದರು. ಈ ಆರೋಪಗಳಿಗೆ ಯಾವುದೇ ಪುರಾವೆಗಳನ್ನು ಅವರು ಸಾರ್ವಜನಿಕವಾಗಿ ಮಂಡಿಸಲಿಲ್ಲ. ಮಣಿಪಾಲದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿತ್ತು, ಆದರೆ ಅದು ಆಗಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳ ಹೋರಾಟದ ಹಿಂದೆ ಕೆಲವು ಪ್ರಮುಖ ವ್ಯಕ್ತಿಗಳ ಬೆಂಬಲವೂ ಇದೆ ಎಂಬ ಮಾಹಿತಿ ಇದೆ ಎಂದು ಆರೋಪಿಸಿದರು.

ಇದು ಕೇವಲ ಪ್ರತಿಭಟನೆ ಅಲ್ಲ, ಕೊನೆಯ ಎಚ್ಚರಿಕೆ ಎಂದು ಹೇಳಿದ ಶಾಸಕ, ಕಲಾವಿದರ ಬಗ್ಗೆ ಮಾತನಾಡುತ್ತಾ ನಟ ಪ್ರಕಾಶ್ ರೈ ಕರಾವಳಿಗೆ ಬಂದು ಪ್ರಚೋದನಕಾರಿ ಹೇಳಿಕೆ ನೀಡಿದರೆ ತೀವ್ರ ಪ್ರತಿಕ್ರಿಯೆ ಎದುರಿಸಬೇಕಾಗುತ್ತದೆ. ಕಲಾವಿದರನ್ನು ಒಟ್ಟುಗೂಡಿಸಿ ವಿಷ ಬೀಜ ಬಿತ್ತಲು ಯತ್ನಿಸುತ್ತಿರುವ ಪ್ರಕಾಶ್ ರಾಜ್ ಕರಾವಳಿಯಲ್ಲಿ ಬಂದು ಅಧಿಕ ಪ್ರಸಂಗ ಮಾಡಿದರೆ ಅರಬ್ಬಿ ಸಮುದ್ರದಲ್ಲಿ ಎದ್ದೇಳಬೇಕಾಗುತ್ತದೆ. ಅಥವಾ ಮೀನಿಗೆ ಆಹಾರವಾಗಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬೈಂದೂರು ಶಾಸಕ ಗುರುರಾಜ ಗಂಟಿ ಹೊಳೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಬಿಜೆಪಿ ಮುಖಂಡರಾದ ಕಿದಿಯೂರು ಉದಯ್ ಕುಮಾರ್ ಶೆಟ್ಟಿ, ಕುಯಿಲಾಡಿ ಸುರೇಶ್ ನಾಯಕ್, ದಿನೇಶ್ ಅಮೀನ್, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಮಟ್ಟಾರು ರತ್ನಾಕರ ಹೆಗ್ಡೆ, ವೀಣಾ ಶೆಟ್ಟಿ, ಗೀತಾಂಜಲಿ ಸುವರ್ಣ, ನಯನಾ ಗಣೇಶ್ ಹಾಗೂ ಇತರರು ಉಪಸ್ಥಿತರಿದ್ದರು.

More like this
Related

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ತಪ್ಪಲ್ಲವೇ? ಬಿಜೆಪಿಗರು ಉತ್ತರಿಸಲಿ: ಕೋಳ್ಕೆರೆ ವಿಕಾಸ್ ಹೆಗ್ಡೆ

ಉಡುಪಿ: ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದ ದೇಶದ ಲಕ್ಷಾಂತರ...

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರತಿಭಟನೆ: ವಿದ್ಯಾರ್ಥಿಗಳ ವಿರುದ್ಧ ಬಲವಂತದ ಕ್ರಮ ಬೇಡ – ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ: ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ದೇಶಾದ್ಯಂತ ನಡೆದ...

ರಾಜ್ಯದ ಬಾಕಿ ಯೋಜನೆಗಳ ನಿರ್ವಹಣೆಗೆ ದಿಲ್ಲಿಯ ಕರ್ನಾಟಕ ಭವನದಲ್ಲಿ ಹೊಸ ವ್ಯವಸ್ಥೆ ಜಾರಿ : ಸಿಎಂ ಡಿ.ಕೆ.ಶಿವಕುಮಾರ್

ಹೊಸದಿಲ್ಲಿ : ರಾಜ್ಯದ ಮೇಕೆದಾಟು ಅಣೆಕಟ್ಟು ಸೇರಿದಂತೆ ಬಾಕಿ ಯೋಜನೆಗಳ ನಿರ್ವಹಣೆಗೆ...

ಡಿಸೆಂಬರ್ ಗೆ ಎಂಸಿಸಿ ಬ್ಯಾಂಕ್ ಯುಪಿಐ ಸೇವೆ : ಅನಿಲ್ ಲೋಬೊ

ಎಂಸಿಸಿ ಬ್ಯಾಂಕಿನ ಮಾರ್ಗನ್ಸ್ ಗೇಟ್ ಶಾಖೆ ಸ್ಥಳಾಂತರ ಮಂಗಳೂರು: ಗ್ರಾಹಕರಅನುಕೂಲತೆಗಾಗಿ ಎಂಸಿಸಿ ಬ್ಯಾಂಕಿನ...

Copying is disabled on Udupi Digital News.