Wednesday, October 7, 2026

ಉಡುಪಿ ಪತ್ರಿಕಾಭವನದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಉದ್ಘಾಟನೆ

ಉಡುಪಿ: ಉಡುಪಿ ಜನರಲ್ ಕ್ಯಾಪ್ಟರ್ ಪ್ರೈವೆಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಉಡುಪಿ ಪತ್ರಿಕಾ ಭವನದಲ್ಲಿ ಸ್ಥಾಪಿಸಲಾಗಿರುವ ಕುಡಿಯುವ ನೀರಿನ ವ್ಯವಸ್ಥೆಯನ್ನು ಸೋಮವಾರ ಜನರಲ್ ಕ್ಯಾಪ್ಟರ್‌ನ ಮಾಲಕ ಗಣೇಶ್ ರಾವ್ ಉದ್ಘಾಟಿಸಿದರು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಒದಗಿಸಿದ ಗಣೇಶ್ ರಾವ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ದಲ್ಲಿ ವಾರ್ತಾಧಿಕಾರಿ ಮಂಜುನಾಥ್, ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಂಕಿತ್ ಶೆಟ್ಟಿ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಮಾಜಿ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಸಮಿತಿಯ ನಿಕಟಪೂರ್ವ ಸಂಚಾಲಕ ಅಜಿತ್ ಆರಾಡಿ ಉಪಸ್ಥಿತರಿದ್ದರು.

ಪತ್ರಿಕಾ ಭವನ ಸಮಿತಿ ಸಹಸಂಚಾಲಕ ಗಣೇಶ್ ಕಲ್ಯಾಣಪುರ ವಂದಿಸಿದರು. ಸದಸ್ಯ ಮೈಕಲ್ ರೋಡಿಗ್ರಸ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

More like this
Related

ಉಡುಪಿ: ಎಸ್ಐಆರ್ ಪ್ರಕ್ರಿಯೆಯಲ್ಲಿ ಫಾರಂ -7 ದುರ್ಬಳಕೆ ತಡೆಯುವಂತೆ ಮುಸ್ಲಿಮ್ ಒಕ್ಕೂಟ ಮನವಿ

ಉಡುಪಿ: ಕರ್ನಾಟಕ ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ...

ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸಿಎಂ, ಡಿಸಿಎಂ ಸನ್ಮಾನ: ಕ್ರೀಡಾಪಟುಗಳಿಗೆ ಉದ್ಯೋಗ ಭದ್ರತೆ, ₹1 ಕೋಟಿ ನಗದು ಬಹುಮಾನ

ಬೆಂಗಳೂರು: 2026ರ ಏಷ್ಯನ್ ಗೇಮ್ಸ್‌ನಲ್ಲಿ ದೇಶ ಹಾಗೂ ಕರ್ನಾಟಕಕ್ಕೆ ಕೀರ್ತಿ ತಂದ...

ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಕರ್ನಾಟಕದ ಭರ್ಜರಿ ಬಹುಮಾನ: ಚಿನ್ನಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ

ಬೆಂಗಳೂರು: 2026ರ ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ...

Copying is disabled on Udupi Digital News.