Sunday, September 13, 2026

ಶಿರೂರು ಪರ್ಯಾಯ ಮಹೋತ್ಸವಕ್ಕೆ ವ್ಯಾಪಕ ಪೊಲೀಸ್ ಭದ್ರತೆ – ಎಸ್ಪಿ ಹರಿರಾಮ್ ಶಂಕರ್


ಉಡುಪಿ: ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಶಾಂತಿಯುತವಾಗಿ ಎಲ್ಲಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವಂತೆ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.


ಭದ್ರತೆಗಾಗಿ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಒಟ್ಟು 1 ಎಸ್ಪಿ, 1 ಹೆಚ್ಚುವರಿ ಎಸ್ಪಿ, 8 ಡಿವೈಎಸ್ಪಿ, 21 ಪೊಲೀಸ್ ಇನ್ಸ್ಪೆಕ್ಟರ್ಗಳು, 61 ಪೊಲೀಸ್ ಉಪನಿರೀಕ್ಷಕರು, 110 ಸಹಾಯಕ ಉಪನಿರೀಕ್ಷಕರು, 812 ಪೊಲೀಸ್ ಸಿಬ್ಬಂದಿ ಹಾಗೂ 200 ಗೃಹರಕ್ಷಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಲ್ಲದೆ 4 ಕೆಎಸ್ಆರ್ಪಿ, 14 ಡಿಎಆರ್ ಪಡೆಗಳು ಹಾಗೂ 5 ವಿಧ್ವಂಸಕ ಕೃತ್ಯ ಪತ್ತೆ ತಂಡಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.


ಶ್ರೀ ಕೃಷ್ಣಮಠದ ಸುತ್ತಮುತ್ತ 70 ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಮಠದ ವಠಾರದಲ್ಲಿ ಹೊರಠಾಣೆಗಳನ್ನೂ ತೆರೆಯಲಾಗಿದೆ. ಜೊತೆಗೆ ಒಂದು ಕ್ಯೂಆರ್ಟಿ ತಂಡ, 6 ಆಂಬ್ಯುಲೆನ್ಸ್, 6 ಅಗ್ನಿಶಾಮಕ ವಾಹನಗಳು, 5 ಅಗ್ನಿ ಬುಲೆಟ್ಗಳು, 24 ಪಬ್ಲಿಕ್ ಅಡ್ರೆಸ್ ಸಿಸ್ಟಂ, 6 ಪೊಲೀಸ್ ಸಹಾಯವಾಣಿ ಕೇಂದ್ರಗಳು, 12 ಬೈನಾಕುಲರ್ಗಳು, 3 ಡ್ರೋನ್ ಕ್ಯಾಮೆರಾ ಹಾಗೂ 300 ಬ್ಯಾರಿಕೇಡ್ಗಳನ್ನು ಬಳಸಲಾಗುತ್ತಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More like this
Related

ಠಾಣೆಗೆ ನುಗ್ಗಿದರೆ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆ ಉಚಿತ : ಪ್ರತಾಪ್ ಸಿಂಹ ಹೆಸರು ಹೇಳದೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬೆಂಗಳೂರು: ಮೈಸೂರಿನ ಕಡೆಯ ‘ಪೇಟೆ ರೌಡಿ’ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ. ಕಾನೂನು...

ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವಕ್ಕೆ ವಜ್ರ ಮಹೋತ್ಸವದ ಸಂಭ್ರಮ

ವಜ್ರ ಮಹೋತ್ಸವದ ಅಂಗವಾಗಿ ‘ರಾಜ ದರ್ಬಾರ್’ ವೇದಿಕೆ ನಿರ್ಮಾಣ ಉಡುಪಿ: ಕಡಿಯಾಳಿ ಸಾರ್ವಜನಿಕ...

ಕರಾವಳಿ ಸಚಿವ ಸಂಪುಟ ಸಭೆ: ₹5,000 ಕೋಟಿ ವಿಶೇಷ ಪ್ಯಾಕೇಜ್ ಸೇರಿ ಪ್ರಮುಖ ಬೇಡಿಕೆಗಳಿಗೆ ಶಾಸಕ ಮಂಜುನಾಥ್ ಭಂಡಾರಿ ಮನವಿ

ಮಂಗಳೂರು: ಕರಾವಳಿ ಭಾಗದ ಸುದೀರ್ಘ ಬೇಡಿಕೆಗಳು ಹಾಗೂ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ...

ಉಡುಪಿ ಕಥೊಲಿಕ್ ಶಿಕ್ಷಣ ಸೊಸೈಟಿ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ

ಶಿಕ್ಷಕರು ವಿದ್ಯಾರ್ಥಿಗಳನ್ನು ಮಾನವರನ್ನಾಗಿ ರೂಪಿಸುವ ಸಮಾಜದ ಶಿಲ್ಪಿಗಳು : ವಂ. ಫ್ರಾನ್ಸಿಸ್...

Copying is disabled on Udupi Digital News.