Tuesday, September 15, 2026

ಗಾಯಗೊಂಡಿದ್ದಕ್ಕೆ ಭಯ: ನಾಪತ್ತೆಯಾಗಿದ್ದ ಶಾಲಾ ಬಾಲಕನ ಪತ್ತೆ ಹಚ್ಚಿದ ಖಾಕಿ!

ಶಾಲಾ ಬಾಲಕ ನಾತ್ತೆಯಾಗಿ ಆತಂಕ. ತಡರಾತ್ರಿ ಕಾರ್ಯಾಚರಣೆಯಲ್ಲಿ ಪತ್ತೆ ಹಚ್ಚಿದ ಪಿಎಸ್ಐ ಪವನ್ ನಾಯ್ಕ್

ಉಡುಪಿ ಡಿಜಿಟಲ್ ನ್ಯೂಸ್ ಡಾಟ್ ಕಾಮ್
ಕುಂದಾಪುರ:
ಮನೆಯ ಬಳಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ಶಾಲಾ ಬಾಲಕನೋರ್ವ ಇದ್ದಕ್ಕಿದ್ದಂತೆ ಸಂಜೆ ಬಳಿಕ ನಾಪತ್ತೆಯಾಗಿ ಕೆಲ ಕಾಲ ಮನೆಯವರಿಗೆ ಆತಂಕ ಸೃಷ್ಟಿಸಿದ್ದು, ಗಂಗೊಳ್ಳಿಯ ಪೊಲೀಸರು ಹಾಗೂ ಸಾರ್ವಜನಿಕರ ಸತತ ಕಾರ್ಯಾಚರಣೆಯ ಬಳಿಕ ಬಾಲಕ ಪತ್ತೆಯಾದ ಘಟನೆ ಗಂಗೊಳ್ಳಿಯ ಗುಜ್ಜಾಡಿ ಬೆಣ್ಣೆರೆ ಎಂಬಲ್ಲಿ ಬುಧವಾರ ನಡೆದಿದೆ.

ಮನೆ ಸಮೀಪದ ಸರ್ಕಾರಿ ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದ ಬಾಲಕ ಶಾಲೆ ಬಿಟ್ಟು ಮನೆಗೆ ಬಂದ ಬಳಿಕ ಸಮೀಪದ ಮನೆಯ ಮಕ್ಕಳೊಂದಿಗೆ ಆಟವಾಡಿಕೊಂಡಿದ್ದನು. ಸಂಜೆಯಾದರೂ ಮನೆಗೆ ವಾಪಾಸಾಗದನ್ನು ಗಮನಿಸಿದ ಮನೆಯಯವರು ಹುಡುಕಾಟ ಆರಂಭಿಸಿದ್ದರು. ರಾತ್ರಿಯಾದರೂ ಪತ್ತೆಯಾಗದ ಕಾರಣ ಗಾಬರಿಗೊಂಡ ಮನೆಯವರು ಗಂಗೊಳ್ಳಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ದೂರು ದಾಖಲಿಸಿಕೊಂಡ ಪೊಲೀಸರು ಬಾಲಕನ ಪತ್ತೆಗಾಗಿ ಸ್ಥಳಿಯರೊಂದಿಗೆ ಕಾರ್ಯಾಚರಣೆ ಆರಂಭಿಸಿದ್ದರು. ತಡರಾತ್ರಿ 12:40ರ ಸುಮಾರಿಗೆ ಮನೆ ಪಕ್ಕದ ಎತ್ತರದ ಕಲ್ಲು ಬಂಡೆಯ ಕೆಳಭಾಗದಲ್ಲಿ ಕುಳಿತುಕೊಂಡಿದ್ದ ಬಾಲಕನನ್ನು ಗಂಗೊಳ್ಳಿ ಠಾಣೆಯ ಪಿಎಸ್ಐ ಪವನ್ ನಾಯ್ಕ್ ಪತ್ತೆ ಹಚ್ಚಿ ಬಾಲಕನನ್ನು ಮನೆಯವರಿಗೆ ಒಪ್ಪಿಸಿದ್ದಾರೆ.  

ಆಟವಾಡುತ್ತಿದ್ದ ವೇಳೆ ಬಿದ್ದು ಗಾಯ ಮಾಡಿಕೊಂಡಿದ್ದ ಬಾಲಕ ಮನೆಗೆ ಹೋದರೆ ಮನೆಯವರು ಬಯ್ಯುತ್ತಾರೆ ಎಂದು ಹೆದರಿ ಮನೆಗೆ ತೆರಳದೆ ಮನೆಯ ಮೇಲಿನ ಬಂಡೆಕಲ್ಲಿನ ಕೆಳಗೆ ಅಡಗಿ ಕುಳಿಕೊಂಡಿದ್ದನು ಎನ್ನುವ ಮಾಹಿತಿ ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಗಂಗೊಳ್ಳಿ ಪೊಲೀಸರ ತಡರಾತ್ರಿ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗಿದೆ.

More like this
Related

ಕಂಡ್ಲೂರು ಹಳೆ ಸೇತುವೆ ನೆಲಸಮದ ಹುನ್ನಾರದ ಹಿಂದೆ ಭ್ರಷ್ಟಾಚಾರದ ಅನುಮಾನ : ಕೆ. ವಿಕಾಸ್ ಹೆಗ್ಡೆ

ಕುಂದಾಪುರ ತೀರ್ಥಹಳ್ಳಿ ಸಂಪರ್ಕ ಮಾಡುವ ರಾಜ್ಯ ಹೆದ್ದಾರಿ ಹಾದು ಹೋಗುವ ವರಾಹಿ...

 ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರ ಪಾಣಿಯಾಗಿ ಜನಾರ್ದನ್ ಕೊಡವೂರು ನೇಮಕ

ಉಡುಪಿ: ಇತಿಹಾಸ ಪ್ರಸಿದ್ಧ ಮಹತೊಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ...

ಇತರರಿಗೆ ಸಹಾಯ ಮಾಡುವ ಪ್ರತಿಯೊಬ್ಬರಲ್ಲಿ ದೇವರನ್ನು ಕಾಣಬಹುದು : ಬಿಷಪ್ ಲೆಸ್ಲಿ ಸಿ ಡಿಸೋಜಾ

ಉಡುಪಿ: ನಾವು ಕಣ್ಣಿನಿಂದ ದೇವರನ್ನು ನೋಡದೇ ಇದ್ದರೂ, ಕಷ್ಟಕಾಲದಲ್ಲಿ ನಮಗೆ ಸಹಾಯ...

ಬಿಜೆಪಿ ಅಭ್ಯರ್ಥಿಗೆ ಕೇವಲ 1 ಮತ, ಆಘಾತಕಾರಿ ಫಲಿತಾಂಶ: ಹೆಂಡತಿ, ಅಪ್ಪ, ಅಮ್ಮನ ವೋಟ್ ಯಾರಿಗೆ?

ಜೈಪುರ: ರಾಜಸ್ಥಾನ ನಾಗರಿಕ ಚುನಾವಣೆಯ ಫಲಿತಾಂಶದ ನಡುವೆ ಆಘಾತಕಾರಿ ಮತ್ತು ಆಸಕ್ತಿದಾಯಕ...

Copying is disabled on Udupi Digital News.