Tuesday, September 15, 2026

ಉಡುಪಿಯಲ್ಲಿ ಟೈಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ; ಚಾಲಕ ಪ್ರಾಣಾಪಾಯದಿಂದ ಪಾರು

ಉಡುಪಿ: ಟೈಯರ್ ಸ್ಫೋಟಗೊಂಡ ಪರಿಣಾಮ ಮೀನು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಮಂಗಳವಾರ ಬೆಳಿಗ್ಗೆ ನಗರದ ಅಂಬಾಗಿಲು ಜಂಕ್ಷನ್ ಸಮೀಪ ನಡೆದಿದೆ.

ಕುಂದಾಪುರದತ್ತ ಸಾಗುತ್ತಿದ್ದ ಲಾರಿ ಅಂಬಾಗಿಲು ಜಂಕ್ಷನ್ ಬಳಿ ತಲುಪುತ್ತಿದ್ದಂತೆ ಹಿಂಬದಿಯ ಟೈಯರ್ ಏಕಾಏಕಿ ಸ್ಫೋಟಗೊಂಡಿದೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಗೆ ಪಲ್ಟಿಯಾಗಿದೆ.

ಅಪಘಾತದ ತೀವ್ರತೆಗೆ ಲಾರಿಯಲ್ಲಿದ್ದ ಮೀನುಗಳು ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಲಾರಿಗೆ ಹಾನಿಯಾಗಿದ್ದು, ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಉಡುಪಿ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಾಹನ ಸಂಚಾರಕ್ಕೆ ಅಡಚಣೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಂಡು ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.

ಅಪಘಾತದಿಂದ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾದರೂ, ಬಳಿಕ ಪರಿಸ್ಥಿತಿ ಸಹಜಗೊಂಡಿತು.

More like this
Related

ಕಂಡ್ಲೂರು ಹಳೆ ಸೇತುವೆ ನೆಲಸಮದ ಹುನ್ನಾರದ ಹಿಂದೆ ಭ್ರಷ್ಟಾಚಾರದ ಅನುಮಾನ : ಕೆ. ವಿಕಾಸ್ ಹೆಗ್ಡೆ

ಕುಂದಾಪುರ ತೀರ್ಥಹಳ್ಳಿ ಸಂಪರ್ಕ ಮಾಡುವ ರಾಜ್ಯ ಹೆದ್ದಾರಿ ಹಾದು ಹೋಗುವ ವರಾಹಿ...

 ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರ ಪಾಣಿಯಾಗಿ ಜನಾರ್ದನ್ ಕೊಡವೂರು ನೇಮಕ

ಉಡುಪಿ: ಇತಿಹಾಸ ಪ್ರಸಿದ್ಧ ಮಹತೊಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ...

ಇತರರಿಗೆ ಸಹಾಯ ಮಾಡುವ ಪ್ರತಿಯೊಬ್ಬರಲ್ಲಿ ದೇವರನ್ನು ಕಾಣಬಹುದು : ಬಿಷಪ್ ಲೆಸ್ಲಿ ಸಿ ಡಿಸೋಜಾ

ಉಡುಪಿ: ನಾವು ಕಣ್ಣಿನಿಂದ ದೇವರನ್ನು ನೋಡದೇ ಇದ್ದರೂ, ಕಷ್ಟಕಾಲದಲ್ಲಿ ನಮಗೆ ಸಹಾಯ...

ಬಿಜೆಪಿ ಅಭ್ಯರ್ಥಿಗೆ ಕೇವಲ 1 ಮತ, ಆಘಾತಕಾರಿ ಫಲಿತಾಂಶ: ಹೆಂಡತಿ, ಅಪ್ಪ, ಅಮ್ಮನ ವೋಟ್ ಯಾರಿಗೆ?

ಜೈಪುರ: ರಾಜಸ್ಥಾನ ನಾಗರಿಕ ಚುನಾವಣೆಯ ಫಲಿತಾಂಶದ ನಡುವೆ ಆಘಾತಕಾರಿ ಮತ್ತು ಆಸಕ್ತಿದಾಯಕ...

Copying is disabled on Udupi Digital News.