Sunday, April 26, 2026

ಸ್ಕೂಟಿ ಹಿಂಬದಿಗೆ ಬಸ್ ಢಿಕ್ಕಿ: ಬಾಲಕಿ ಸಾವು

ಕಾಪು ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ತಡೆರಹಿತ ಬಷ್ಟೊಂದು ಕಾಪು ಸಾಯಿ ಸರ್ವಿಸ್ ಸ್ಟೇಶನ್ ಬಳಿ ಸ್ಕೂಟಿಯೊಂದಕ್ಕೆ ಹಿಂಬದಿಯಿಂದ ಢಿಕ್ಕಿಯಾದ ಪರಿಣಾಮ ತಂದೆಯೊಂದಿಗೆ ಸಹ ಸವಾರೆಯಾಗಿ ಬಂದಿದ್ದ ಬಾಲಕಿ ಸಾತ್ವಿ ಶೆಟ್ಟಿ (8) ತೀವ್ರಗಾಯಗಳೊಂದಿಗೆ ಸಾವನ್ನಪ್ಪಿದ್ದಾಳೆ. ಮೃತ ಸಾತ್ವಿ ತನ್ನ ತಂದೆ ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾಳೆ.

ದುಬಾಯಿಯಲ್ಲಿ ವಾಸವಿದ್ದ ಈ ಕುಟುಂಬವು ಮುಂದೆ ಊರಿನಲ್ಲಿಯೇ ನೆಲೆಸುವ ಸಿದ್ಧತೆಯಲ್ಲಿತ್ತು. ಸಾತ್ವಿಗಾಗಿ ‘ಇಂದು ಆಕೆಯ ಹೆತ್ತವರು ಉಡುಪಿಯ ಖಾಸಗಿ ಶಾಲೆಯಲ್ಲಿ ಪ್ರವೇಶಾತಿಯನ್ನೂ ಮುಗಿಸಿದ್ದರು. ನಾಳೆ ಆಕೆಯ ತಂದೆ ನಿತ್ಯಾನಂದ ಶೆಟ್ಟಿ ಅವರು ಮಾತ್ರ ದುಬಾಯಿಗೆ ತೆರಳುವರಿದ್ದು, ಕಾಪು ಪೇಟೆಗೆ ಏನನ್ನೋ ತರಲು ಹೋಗಿ ವಾಪಾಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ತಾಣಕ್ಕೂ ಅವರ ಪೂವಣಿಗುತ್ತು ಮನೆಗೂ ಕೇವಲ ಅರ್ಧ ಕಿ.ಮೀ.


ದೂರವಷ್ಟೇ ಬಾಕಿ ಇತ್ತು. ಸ್ಕೂಟಿ ಸವಾರ ನಿತ್ಯಾನಂದ ಶೆಟ್ಟಿ ಅವರಿಗೂ ಗಾಯಗಳಾಗಿವೆ. ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ

More like this
Related

ಮರಳು ಓವರ್ಲೋಡಿಂಗ್ ವಿರುದ್ಧ ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ; 13 ವಾಹನ ವಶ

ಉಡುಪಿ: ಜಿಲ್ಲೆಯಲ್ಲಿ ಮರಳು ಸಾಗಾಣಿಕೆಯಲ್ಲಿ ಹೆಚ್ಚುವರಿ ಬಾರ (ಓವರ್ಲೋಡಿಂಗ್) ಮಾಡಿ ಅಕ್ರಮವಾಗಿ...

ಪಡುಬಿದ್ರಿ: ಬೈಕ್ ಕಳವು ಪ್ರಕರಣ ಭೇದಿಸಿದ ಪೊಲೀಸರು; ಆರೋಪಿಯ ಬಂಧನ

ಉಡುಪಿ: ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳವು ಪ್ರಕರಣವನ್ನು...

ಕಾರ್ಕಳ: 24 ಗಂಟೆಯೊಳಗೆ ಮನೆ ಕಳವು ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರ ಬಂಧನ

ಕಾರ್ಕಳ: ಮನೆ ಕಳವು ಪ್ರಕರಣವನ್ನು ಕಾರ್ಕಳ ನಗರ ಪೊಲೀಸರು 24 ಗಂಟೆಯೊಳಗೆ...

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕರ ಮೃತದೇಹ ಬಾವಿಯಲ್ಲಿ ಪತ್ತೆ

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಮೃತದೇಹ ಮನೆಯ ಬಾವಿಯಲ್ಲಿ ಶನಿವಾರ ಪತ್ತೆಯಾಗಿದೆ. ಮೃತರನ್ನು ಉಡುಪಿ...

Copying is disabled on Udupi Digital News.