Wednesday, January 7, 2026

ಶೆಟ್ರಕಟ್ಟೆ ತಿರುವಿನಲ್ಲಿ ಸರ್ಕಾರಿ ಬಸ್ –ಟಿಪ್ಪರ್ ಅಪಘಾತ: ಕಾಲೇಜು ವಿದ್ಯಾರ್ಥಿಗಳು ಗಂಭೀರ

ಕುಂದಾಪುರ: ಸರ್ಕಾರಿ ಬಸ್ ಹಾಗೂ ಟಿಪ್ಪರ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಲ್ಲೂರು-ನೇರಳಕಟ್ಟೆ ಮಾರ್ಗದ ಶೆಟ್ರಕಟ್ಟೆ ತಿರುವಿನಲ್ಲಿ ನಡೆದಿದೆ.

ಕುಂದಾಪುರದಿಂದ ಆಜ್ರಿ-ಸಿದ್ದಾಪುರ ಕಡೆಗೆ ಸಾಗುತ್ತಿದ್ದ ಸರ್ಕಾರಿ ಬಸ್ ಗೆ ನೇರಳಕಟ್ಟೆಯಿಂದ ಮಣ್ಣು ತುಂಬಿಸಿಕೊಂಡು ತಲ್ಲೂರಿನತ್ತ ಸಾಗುತ್ತಿದ್ದ ಟಿಪ್ಪರ್ ಢಿಕ್ಕಿ ಹೊಡೆದಿದೆ. ಬಸ್ ನ ಬಲ ಬದಿಗೆ ಢಿಕ್ಕಿ ಹೊಡೆದಿದ್ದರಿಂದ ಚಾಲಕನ ಬದಿಯ ಒಂದು ಪಾರ್ಶ್ವ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಸೇರಿದಂತೆ ಹಲವರಿಗೆ ಗಂಭೀರ ಗಾಯಗಳಾಗಿವೆ.

ಸಂಜೆ ಸಮಯವಾದ್ದರಿಂದ ಬಸ್ ನಲ್ಲಿ ಬಹುತೇಕ ಕಾಲೇಜು ವಿದ್ಯಾರ್ಥಿಗಳಿದ್ದು, ಕಿಟಿಕಿ ಬದಿಯಲ್ಲಿ ಕೂತವರೆಲ್ಲರಿಗೂ ಗಂಭೀರ ಗಾಯಗಳಾಗಿದೆ. ಸ್ಥಳೀಯ ಯುವಕ ಪ್ರಶಾಂತ್ ಪೂಜಾರಿ ಕರ್ಕಿ ಹಾಗೂ ಸಾರ್ವಜನಿಕರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಸ್ಥಳಕ್ಕೆ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿಯಬೇಕಿದೆ.

More like this
Related

ಪೊಲೀಸರು ವಶಕ್ಕೆ ಪಡೆದಾಗ ಆಕೆ ವಿವಸ್ತ್ರಳಾಗಿರಲಿಲ್ಲ; ವ್ಯಾನ್‌ ಹತ್ತಿದ ಮೇಲೆ ತಾನೇ ಬಟ್ಟೆ ಬಿಚ್ಚಿ ಸೀನ್‌ ಕ್ರಿಯೇಟ್‌ – ಶಶಿಕುಮಾರ್

ಬೆಂಗಳೂರು: ಹುಬ್ಬಳ್ಳಿಯಲ್ಲಿ ಪೊಲೀಸರು ತಮ್ಮ ಕಾರ್ಯಕರ್ತೆಯನ್ನು ಬಂಧಿಸಿ ಆಕೆಯ ಮೇಲೆ ಹಲ್ಲೆ...

ದೆಹಲಿ: ರಾಮಲೀಲಾ ಮೈದಾನದ ಮಸೀದಿ ಬಳಿ ಅತಿಕ್ರಮಣ ತೆರವು ಕಾರ್ಯಾಚರಣೆ ವೇಳೆ ಘರ್ಷಣೆ; ಪೊಲೀಸರ ಮೇಲೆ ಕಲ್ಲು ತೂರಾಟ, ಐವರಿಗೆ ಗಾಯ

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ರಾಮಲೀಲಾ ಮೈದಾನ ಪ್ರದೇಶದ ಮಸೀದಿ ಬಳಿ...

ಸಾಲಿಗ್ರಾಮ ಡಿವೈನ್ ಪಾರ್ಕ್ ಸ್ಥಾಪಕ ಎ.ಚಂದ್ರಶೇಖರ್ ನಿಧನ

ಬ್ರಹ್ಮಾವರ: ಸ್ವಾಮಿ ವಿವೇಕಾನಂದರ ಚಿಂತನೆಗಳ ಪ್ರಸಾರಕ್ಕಾಗಿ ಸಾಲಿಗ್ರಾಮದಲ್ಲಿ ಡಿವೈನ್ ಪಾರ್ಕ್ ಸ್ಥಾಪಿಸಿದ್ದ...

ಟಿಪ್ಪರ್ ಸ್ಕೂಟರ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಕುಂದಾಪುರ: ಮರಳು ತುಂಬಿದ ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ...

Copying is disabled on Udupi Digital News.

Discover more from Udupi Digital News

Subscribe now to keep reading and get access to the full archive.

Continue reading