Sunday, September 13, 2026

ಕುಂದಾಪುರ ರೋಜರಿ ಮಾತಾ ದೇವಾಲಯದಲ್ಲಿ ವಿಜೃಂಭಣೆಯ ಮೊಂತಿ ಹಬ್ಬ

ಕುಂದಾಪುರ: ಕನ್ಯಾ ಮರಿಯಮ್ಮನವರ ಜನ್ಮದಿನದ ಪ್ರಯುಕ್ತ ಕುಂದಾಪುರದ ರೋಜರಿ ಮಾತಾ ದೇವಾಲಯದಲ್ಲಿ ಮಂಗಳವಾರ ಮೊಂತಿ ಹಬ್ಬವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಗುರು ವಂ. ರೋಲ್ವಿನ್ ಫೆರ್ನಾಂಡಿಸ್ ಅವರು ಹೊಸ ತೆನೆಗಳಿಗೆ ಆಶೀರ್ವಾದ ನೆರವೇರಿಸಿದರು. ಬಳಿಕ ಪ್ರಧಾನ ಧರ್ಮಗುರು ವಂ. ಪೌಲ್ ರೇಗೊ ಅವರು ಪವಿತ್ರ ಬಲಿಪೂಜೆಯನ್ನು ಭಕ್ತಿಪೂರ್ವಕವಾಗಿ ನೆರವೇರಿಸಿದರು.

ಬಲಿಪೂಜೆಯ ಸಂದರ್ಭದಲ್ಲಿ ಮಾತನಾಡಿದ ಅವರು, ಹೊಸ ಬೆಳೆಯೊಂದಿಗೆ ಕುಟುಂಬದ ಸದಸ್ಯರೆಲ್ಲರೂ ಪ್ರೀತಿ, ಸಂತೋಷ ಹಾಗೂ ಸೌಹಾರ್ದದಿಂದ ಒಂದಾಗಿ ಮೊಂತಿ ಹಬ್ಬವನ್ನು ಆಚರಿಸುವಂತೆ ಕರೆ ನೀಡಿದರು.

ಬಲಿಪೂಜೆಯ ಬಳಿಕ ವಾಹನಗಳ ಆಶೀರ್ವಾದ ಕಾರ್ಯಕ್ರಮ ನಡೆಯಿತು. ಹಿರಿಯರಿಗೆ ಹೊಸ ತೆನೆಗಳನ್ನು ಹಾಗೂ ಮಕ್ಕಳಿಗೆ ಕಬ್ಬನ್ನು ವಿತರಿಸಲಾಯಿತು.

ದೇವಾಲಯದ ಭಕ್ತರು ಹಾಗೂ ಕುಟುಂಬಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಹಬ್ಬದ ಸಂಭ್ರಮವನ್ನು ಹಂಚಿಕೊಂಡರು.

More like this
Related

ಠಾಣೆಗೆ ನುಗ್ಗಿದರೆ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆ ಉಚಿತ : ಪ್ರತಾಪ್ ಸಿಂಹ ಹೆಸರು ಹೇಳದೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬೆಂಗಳೂರು: ಮೈಸೂರಿನ ಕಡೆಯ ‘ಪೇಟೆ ರೌಡಿ’ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ. ಕಾನೂನು...

ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವಕ್ಕೆ ವಜ್ರ ಮಹೋತ್ಸವದ ಸಂಭ್ರಮ

ವಜ್ರ ಮಹೋತ್ಸವದ ಅಂಗವಾಗಿ ‘ರಾಜ ದರ್ಬಾರ್’ ವೇದಿಕೆ ನಿರ್ಮಾಣ ಉಡುಪಿ: ಕಡಿಯಾಳಿ ಸಾರ್ವಜನಿಕ...

ಕರಾವಳಿ ಸಚಿವ ಸಂಪುಟ ಸಭೆ: ₹5,000 ಕೋಟಿ ವಿಶೇಷ ಪ್ಯಾಕೇಜ್ ಸೇರಿ ಪ್ರಮುಖ ಬೇಡಿಕೆಗಳಿಗೆ ಶಾಸಕ ಮಂಜುನಾಥ್ ಭಂಡಾರಿ ಮನವಿ

ಮಂಗಳೂರು: ಕರಾವಳಿ ಭಾಗದ ಸುದೀರ್ಘ ಬೇಡಿಕೆಗಳು ಹಾಗೂ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ...

ಉಡುಪಿ ಕಥೊಲಿಕ್ ಶಿಕ್ಷಣ ಸೊಸೈಟಿ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ

ಶಿಕ್ಷಕರು ವಿದ್ಯಾರ್ಥಿಗಳನ್ನು ಮಾನವರನ್ನಾಗಿ ರೂಪಿಸುವ ಸಮಾಜದ ಶಿಲ್ಪಿಗಳು : ವಂ. ಫ್ರಾನ್ಸಿಸ್...

Copying is disabled on Udupi Digital News.