Sunday, September 13, 2026

ಟಿಪ್ಪರ್ ಸ್ಕೂಟರ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಕುಂದಾಪುರ: ಮರಳು ತುಂಬಿದ ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಹಂಗಳೂರು ಯುನಿಟಿ ಹಾಲ್ ಬಳಿ ಸಂಭವಿಸಿದೆ.

ಸ್ಕೂಟರ್ ಸವಾರ ಬಾಣಸಿಗ ಕೃಷ್ಣಮೂರ್ತಿ ಅಡಿಗ ಬೀಜಾಡಿ ಮೃತ ದುರ್ದೈವಿ.

ಮರಳು ತುಂಬಿದ ಟಿಪ್ಪರ್ ವಾಹನ ಕೋಟೇಶ್ವರ ಕಡೆ ಹೋಗುತ್ತಿದ್ದು ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟ ಪರಿಣಾಮ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ.

ಸೋಮವಾರ ಶೆಟ್ರಕಟ್ಟೆಯಲ್ಲಿ ಕೆಎಸ್ಆರ್ಟಿಸಿ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 14 ಮಂದಿ ಬಸ್ ಪ್ರಯಾಣಿಕರು ಗಾಯಗೊಂಡಿರುವ ಸುದ್ದಿ ನೆನಪು ಮಾಸುವ ಮುನ್ನವೇ ಇನ್ನೊಂದು ಟಿಪ್ಪರ್ ದುರಂತ ಸಂಭವಿಸಿದ್ದು, ಸಾರ್ವಜನಿಕರು ಭಯಭೀತರಾಗಿದ್ದಾರೆ.

More like this
Related

ಠಾಣೆಗೆ ನುಗ್ಗಿದರೆ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆ ಉಚಿತ : ಪ್ರತಾಪ್ ಸಿಂಹ ಹೆಸರು ಹೇಳದೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬೆಂಗಳೂರು: ಮೈಸೂರಿನ ಕಡೆಯ ‘ಪೇಟೆ ರೌಡಿ’ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ. ಕಾನೂನು...

ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವಕ್ಕೆ ವಜ್ರ ಮಹೋತ್ಸವದ ಸಂಭ್ರಮ

ವಜ್ರ ಮಹೋತ್ಸವದ ಅಂಗವಾಗಿ ‘ರಾಜ ದರ್ಬಾರ್’ ವೇದಿಕೆ ನಿರ್ಮಾಣ ಉಡುಪಿ: ಕಡಿಯಾಳಿ ಸಾರ್ವಜನಿಕ...

ಕರಾವಳಿ ಸಚಿವ ಸಂಪುಟ ಸಭೆ: ₹5,000 ಕೋಟಿ ವಿಶೇಷ ಪ್ಯಾಕೇಜ್ ಸೇರಿ ಪ್ರಮುಖ ಬೇಡಿಕೆಗಳಿಗೆ ಶಾಸಕ ಮಂಜುನಾಥ್ ಭಂಡಾರಿ ಮನವಿ

ಮಂಗಳೂರು: ಕರಾವಳಿ ಭಾಗದ ಸುದೀರ್ಘ ಬೇಡಿಕೆಗಳು ಹಾಗೂ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ...

ಉಡುಪಿ ಕಥೊಲಿಕ್ ಶಿಕ್ಷಣ ಸೊಸೈಟಿ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ

ಶಿಕ್ಷಕರು ವಿದ್ಯಾರ್ಥಿಗಳನ್ನು ಮಾನವರನ್ನಾಗಿ ರೂಪಿಸುವ ಸಮಾಜದ ಶಿಲ್ಪಿಗಳು : ವಂ. ಫ್ರಾನ್ಸಿಸ್...

Copying is disabled on Udupi Digital News.