Wednesday, July 29, 2026

ದ್ವೇಷ ಭಾಷಣ: ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲು

ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿ ದ್ವೇಷ ಭಾಷಣ ಮಾಡಿರುವ ಉಡುಪಿ ಶಾಸಕ ಸುವರ್ಣ ವಿರುದ್ಧ ಕಾಂಗ್ರೆಸ್ ಮುಖಂಡರು ಉಡುಪಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ

ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ಉಡುಪಿ ನಗರದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಯಶ್ ಪಾಲ್ ಸುವರ್ಣ, ಬಾಬರಿ ಮಸೀದಿಯಂತೆ ರಾಹುಲ್ ಗಾಂಧಿ ವಂಶವನ್ನು ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ್ದರು.

ಈ ಸಂಬಂಧ ಮಂಗಳವಾರ ಮಧ್ಯರಾತ್ರಿ ಉಡುಪಿ ನಗರ ಪೊಲೀಸ್ ಠಾಣೆಗೆ ತೆರಳಿದ ಕಾಂಗ್ರೆಸ್ ಮುಖಂಡರು ನಗರ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರಿಗೆ ದೂರು ಸಲ್ಲಿಸಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವರು ನೀಡಿದ ದೂರದಂತೆ ಶಾಸಕ ಯಶ್ ಪಾಲ್ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್ ಹಾಗೂ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ವಕೀಲರಾದ ಹಬೀಬ್ ಅಲಿ, ಹರೀಶ್ ಪಾಂಗಳ ಮೊದಲಾದವರು ಹಾಜರಿದ್ದರು.

ಈ ಕುರಿತು ಸ್ಪಷ್ಟನೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಕಾಂಗ್ರೆಸ್ ಹಾಗೂ ಸಿಜೆಪಿ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ನಡೆದ ಪ್ರತಿಭಟನೆಯ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರು ಪ್ರಚೋದನಕಾರಿ ಹಾಗೂ ದ್ವೇಷ ಭಾಷಣ (ಹೇಟ್ ಸ್ಪೀಚ್) ಎಂದು ಪರಿಗಣಿಸಬಹುದಾದ ಹೇಳಿಕೆಗಳನ್ನು ನೀಡಿರುವ ಆರೋಪದಡಿ ಪ್ರಕರಣ ದಾಖಲಾಗಿದೆ.

ಈ ಸಂಬಂಧ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರು ನೀಡಿದ ದೂರಿನ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 103/2026 ದಾಖಲಿಸಲಾಗಿದೆ.

ಆರೋಪಿಗಳ ವಿರುದ್ಧ **ಭಾರತೀಯ ನ್ಯಾಯ ಸಂಹಿತೆ (BNS) ಯ ಕಲಂ  57, 192, 196(2), 352, 353(2) ಹಾಗೂ 351(2)**ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

More like this
Related

ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ಗೆ ರಾಷ್ಟ್ರಮಟ್ಟದ ‘ಎಜುಕೇಶನ್ ಎಕ್ಸಲೆನ್ಸ್ ಅವಾರ್ಡ್–2026’ ಗೌರವ

ನವದೆಹಲಿಯಲ್ಲಿ ಕೇಂದ್ರ ಶಿಕ್ಷಣ ರಾಜ್ಯ ಸಚಿವ ಡಾ. ಸುಕಾಂತ್ ಮಜುಂದಾರ್ ಅವರಿಂದ...

ಯಶ್ಪಾಲ್ ಸುವರ್ಣ ವಿರುದ್ಧ ಕುಂದಾಪುರ ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು

ಕುಂದಾಪುರ: ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ...

ಯಶ್ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮ: ಮಂಜುನಾಥ ಭಂಡಾರಿ

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ...

ರಾಹುಲ್ ಗಾಂಧಿ ಕುರಿತು ಯಶ್ಪಾಲ್ ಸುವರ್ಣ ಹೇಳಿಕೆ ಖಂಡನೀಯ: ರಮೇಶ್ ಕಾಂಚನ್

ಉಡುಪಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ರಮದ ವಿರುದ್ಧ ದೇಶಾದ್ಯಂತ ನಡೆದ...

Copying is disabled on Udupi Digital News.