Thursday, July 2, 2026

ಬ್ರಹ್ಮಾವರದಲ್ಲಿ ಭೀಕರ ರಸ್ತೆ ಅಪಘಾತ: ಹುಲಿ ವೇಷದ ಕಲಾವಿದ ಸಾವು

ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖ್ಯಾತ ಹುಲಿ ವೇಷದ ಕಲಾವಿದರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬ್ರಹ್ಮಾವರದ ಹೇರೂರು ರೂಡ್‌ಸೆಟ್ ಕ್ರಾಸಿಂಗ್ ಸಮೀಪ ನಡೆದಿದೆ.

ಮೃತರನ್ನು ಉಡುಪಿಯ ಸಂತೆಕಟ್ಟೆ ಲಕ್ಷ್ಮೀನಗರ ನಿವಾಸಿ ಮಂಜುನಾಥ್ (43) ಎಂದು ಗುರುತಿಸಲಾಗಿದೆ.

ಗೋವಾದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಇನ್ನೋವಾ ಕಾರಿನಲ್ಲಿ ಐವರು ಉಡುಪಿಗೆ ಹಿಂದಿರುಗುತ್ತಿದ್ದರು. ಈ ವೇಳೆ ಉಡುಪಿ ಕಡೆಗೆ ಸಂಚರಿಸುತ್ತಿದ್ದ ವೇಗದೂತ ಬಸ್ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ, ಹಿಂಬದಿಯಿಂದ ಬರುತ್ತಿದ್ದ ಇನ್ನೋವಾ ಕಾರು ನಿಯಂತ್ರಣ ತಪ್ಪಿ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಮಂಜುನಾಥ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಉಳಿದ ನಾಲ್ವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಂಜುನಾಥ್ ಕರಾವಳಿಯ ಖ್ಯಾತ ಹುಲಿ ವೇಷದ ಕಲಾವಿದರಾಗಿದ್ದು, ಹಲವು ವರ್ಷಗಳಿಂದ ಹುಲಿ ವೇಷಧಾರಿಗಳಿಗೆ ಆಕರ್ಷಕ ಪೈಂಟಿಂಗ್‌ ಮಾಡುವ ಮೂಲಕ ಗುರುತಿಸಿಕೊಂಡಿದ್ದರು.

ಘಟನೆ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

More like this
Related

ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ

ಉಡುಪಿ: ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ವತಿಯಿಂದ ಸಂಸ್ಕೃತಿ ವಿಶ್ವ ಪ್ರತಿಷ್ಠಾನ...

ಮಾಧ್ಯಮಗಳಿಂದ ಸತ್ಯ ಎತ್ತಿಹಿಡಿಯುವ ಕಾರ್ಯ ಆಗಬೇಕು: ಡಾ.ಶುಭಾ ಎಚ್‌.ಎಸ್‌.

ಪತ್ರಿಕಾ ದಿನಾಚರಣೆ: ಜೇಮ್ಸ್‌ ವಾಝ್‌ಗೆ ಪ್ರತಿಕಾ ದಿನದ ಗೌರವ ಉಡುಪಿ: ಸಮಾಜದ ಸಮಸ್ಯೆಗಳನ್ನು...

ರೆಡ್ ಅಲರ್ಟ್ ಹಿನ್ನೆಲೆ: ನಾಳೆ(ಜುಲೈ 2) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ...

ಮಂಗಳೂರು: ನಾಗುರಿಯಲ್ಲಿ ಮನೆ ಕುಸಿದು ಮೂವರು ಮೃತ್ಯು; ಮೂವರು ಅಪಾಯದಿಂದ ಪಾರು

ಮಂಗಳೂರು: ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ಬುಧವಾರ ಮುಂಜಾನೆ ಸುರಿದ ಭಾರೀ...

Copying is disabled on Udupi Digital News.