Sunday, September 13, 2026

ರಾಹುಲ್ ಗಾಂಧಿ ಪ್ರಧಾನಿ ಆಗಬೇಕಾದರೆ ಎಸ್ ಐಆರ್ ಪ್ರಕ್ರಿಯೆ ಬಗ್ಗೆ ನಾವೆಲ್ಲ ಜಾಗರೂಕರಾಗಿರಬೇಕು: ಪ್ರಸಾದ್ ರಾಜ್ ಕಾಂಚನ್

ಉಡುಪಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದೇಶದ ಪ್ರಧಾನಿಯಾಗಬೇಕಾದರೆ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ನಾವೆಲ್ಲ ತುಂಬ ಜಾಗರೂಕರಾಗಿರಬೇಕು ಎಂದು ಉಡುಪಿ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಹೇಳಿದರು.

ಬ್ರಹ್ಮಾವರದಲ್ಲಿ ರಾಹುಲ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಹಿರಿಯ ಕಾಂಗ್ರೆಸ್ ಕಾರ್ಯಕರ್ತರ ಸನ್ಮಾನ ಹಾಗೂ ಸ್ವಚ್ಛತಾ ಕಾರ್ಮಿಕರಿಗೆ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಿಜೆಪಿ ಉದ್ಯಮಿಗಳು ಮತ್ತು ಶ್ರೀಮಂತರ ಪರ ಇರುವ ಪಕ್ಷವಾಗಿದ್ದು, ಕಾಂಗ್ರೆಸ್ ಪಕ್ಷವು ಸದಾ ಬಡವರು, ರೈತರು ಮತ್ತು ಸಾಮಾನ್ಯ ಜನರ ಪರವಾಗಿ ಕೆಲಸ ಮಾಡುತ್ತಿದೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ ಜನರು ಸಂತೋಷವಾಗಿದ್ದು, ಈ ಯೋಜನೆಗಳ ಯಶಸ್ಸನ್ನು ಕಂಡು ಈಗ ಬಿಜೆಪಿಯವರೂ ಅದೇ ಮಾದರಿಯ ಕಾರ್ಯಕ್ರಮಗಳನ್ನು ಅನುಸರಿಸಲು ಮುಂದಾಗಿದ್ದಾರೆ ಎಂದು ಅವರು ಟೀಕಿಸಿದರು.

ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ದೇಶದಲ್ಲಿ ಪರಿವರ್ತನೆ ಸಾಧ್ಯವಾಗಲಿದ್ದು, ಅದಕ್ಕಾಗಿ ಪಕ್ಷದ ಕಾರ್ಯಕರ್ತರು ಸಂಘಟಿತವಾಗಿ ಕೆಲಸ ಮಾಡಬೇಕೆಂದು ಪ್ರಸಾದ್ ರಾಜ್ ಕಾಂಚನ್ ಕರೆ ನೀಡಿದರು.

ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕರ್ಜೆ ಅಧ್ಯಕ್ಷತೆ ವಹಿಸಿದ್ದರು.

ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್, ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿದರು.

ಮುಖಂಡರಾದ ಕಿಶನ್ ಹೆಗ್ಡೆ ಕೊಳ್ಕೆಬೈಲ್, ನಿತ್ಯಾನಂದ ಶೆಟ್ಟಿ, ಭುಜಂಗ ಶೆಟ್ಟಿ, ವೆರೋನಿಕಾ ಕರ್ನೆಲಿಯೋ, ಪ್ರಖ್ಯಾತ್ ಶೆಟ್ಟಿ, ಜ್ಯೋತಿ ಹೆಬ್ಬಾರ್, ಗೋಪಿಕೃಷ್ಣ ನಾಯ್ಕ್, ರೋಶನ್ ಕುಮಾರ್ ಶೆಟ್ಟಿ ಮೊದಲಾದವರು ಇದ್ದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ಕಾರ್ಯಕರ್ತರನ್ನು ಗೌರವಿಸಲಾಯಿತು. ಸ್ವಚ್ಛತಾ ಕಾರ್ಮಿಕರಿಗೆ ಕಿಟ್ ವಿತರಣೆ ಮಾಡಲಾಯಿತು. ಡಾ. ಸುನೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

More like this
Related

ಠಾಣೆಗೆ ನುಗ್ಗಿದರೆ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆ ಉಚಿತ : ಪ್ರತಾಪ್ ಸಿಂಹ ಹೆಸರು ಹೇಳದೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬೆಂಗಳೂರು: ಮೈಸೂರಿನ ಕಡೆಯ ‘ಪೇಟೆ ರೌಡಿ’ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ. ಕಾನೂನು...

ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವಕ್ಕೆ ವಜ್ರ ಮಹೋತ್ಸವದ ಸಂಭ್ರಮ

ವಜ್ರ ಮಹೋತ್ಸವದ ಅಂಗವಾಗಿ ‘ರಾಜ ದರ್ಬಾರ್’ ವೇದಿಕೆ ನಿರ್ಮಾಣ ಉಡುಪಿ: ಕಡಿಯಾಳಿ ಸಾರ್ವಜನಿಕ...

ಕರಾವಳಿ ಸಚಿವ ಸಂಪುಟ ಸಭೆ: ₹5,000 ಕೋಟಿ ವಿಶೇಷ ಪ್ಯಾಕೇಜ್ ಸೇರಿ ಪ್ರಮುಖ ಬೇಡಿಕೆಗಳಿಗೆ ಶಾಸಕ ಮಂಜುನಾಥ್ ಭಂಡಾರಿ ಮನವಿ

ಮಂಗಳೂರು: ಕರಾವಳಿ ಭಾಗದ ಸುದೀರ್ಘ ಬೇಡಿಕೆಗಳು ಹಾಗೂ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ...

ಉಡುಪಿ ಕಥೊಲಿಕ್ ಶಿಕ್ಷಣ ಸೊಸೈಟಿ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ

ಶಿಕ್ಷಕರು ವಿದ್ಯಾರ್ಥಿಗಳನ್ನು ಮಾನವರನ್ನಾಗಿ ರೂಪಿಸುವ ಸಮಾಜದ ಶಿಲ್ಪಿಗಳು : ವಂ. ಫ್ರಾನ್ಸಿಸ್...

Copying is disabled on Udupi Digital News.