Sunday, September 13, 2026

ಜುಲೈ 29 ರಂದು ಕಿದಿಯೂರು ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಉದ್ಘಾಟನೆ

ಉಡುಪಿ: ನೂತನವಾಗಿ ಆರಂಭವಾಗಿರುವ ಕಿದಿಯೂರು ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ ಉದ್ಘಾಟನೆ ಜುಲೈ 29 ರಂದು ಮಧ್ಯಾಹ್ನ 3.30ಕ್ಕೆ ನಡೆಯಲಿದೆ ಎಂದು ಸೊಸೈಟಿ ಅಧ್ಯಕ್ಷರಾದ ಕಿಡಿಯೂರು ಉದಯ ಕುಮಾರ್ ಶೆಟ್ಟಿ ಹೇಳಿದರು.

ಅವರು ಸೊಸೈಟಿಯ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ನೂತನ ಸೊಸೈಟಿ ಉದ್ಘಾಟನೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ಯಾಮಿಲಿ ಸಮೂಹ ಸಂಸ್ಥೆಯ ನಾಡೋಜಾ ಡಾ|| ಜಿ ಶಂಕರ್, ಎಂ ಆರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ ಡಾ|ಕೆ ಪ್ರಕಾಶ್ ಶೆಟ್ಟಿ, ದಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ|ಎಮ್ ಎನ್ ರಾಜೇಂದ್ರ ಕುಮಾರ್ ಭಾಗವಹಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಯಶಪಾಲ್ ಸುವರ್ಣ, ಸುನೀಲ್ ಕುಮಾರ್ ಸುರೇಶ್ ಶೆಟ್ಟಿ ಗುರ್ಮೆ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿ ಹೊಳೆ, ಹಿರಿಯ ಸಹಕಾರಿ ಧುರೀಣ ಟಿ ಶಂಭು ಶೆಟ್ಟಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಅಸ್ಪೆನ್ ಇನ್ಫ್ರಾಸ್ಟಕ್ಚರ್ ಲಿಮಿಟೆಡ್ ಮುಖ್ಯಸ್ಥರಾದ ಅಶೋಕ್ ಕುಮಾರ್ ಶೆಟ್ಟಿ, ಆದರ್ಶ ಆಸ್ಪತ್ರೆ ಆಡಳಿತ ನಿರ್ದೇಶಕ ಡಾ. ಜಿ ಎಸ್ ಚಂದ್ರಶೇಖರ್, ಉಜ್ವಲ್ ಡೆವಲಪರ್ಸ್ ಮುಖ್ಯಸ್ಥರಾದ ಪುರುಷೋತ್ತಮ ಪಿ ಶೆಟ್ಟಿ, ಕಿದಿಯೂರು ಹೋಟೆಲ್ ಆಡಳಿತ ನಿರ್ದೇಶಕರಾದ ಭುವನೇಂದ್ರ ಕಿದಿಯೂರು, ಉಡುಪಿ ಟೌನ್ ಕೋ-ಅಪರೇಟಿವ್ ಬ್ಯಾಂಕ್ ಅಧ್ಯಕ್ಷರಾದ ಜಯಪ್ರಕಾಶ್ ಕೆದ್ಲಾಯ, ಸಹಕಾರಿ ಸಂಘಗಳ ಉಪನಿಬಂಧಕಿ ಲಾವಣ್ಯ ಕೆ ಆರ್, ಸದ್ಗುರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಅಧ್ಯಕ್ಷರಾದ ಕೃಷ್ಣ ಮೂರ್ತಿ ಆಚಾರ್ಯ, ಶಾಂತಾ ಇಲೆಕ್ಟ್ರಿಕಲ್ಸ್ ಆಡಳಿತ ನಿರ್ದೇಶಕರಾದ ಶ್ರೀಪತಿ ಭಟ್ ಉಚ್ಚಿಲ ಭಾಗವಹಿಸಲಿದ್ದಾರೆ.

ತನ್ನೊಂದಿಗೆ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಸಹಕರಿಸಿದ ವ್ಯಕ್ತಿಗಳನ್ನು ಗುರುತಿಸಿ ನಿರ್ದೇಶಕರಗಳನ್ನಾಗಿ ನೇಮಿಸಿದ್ದು ಪ್ರಣೀತ ಶರದ್ ಶೆಟ್ಟಿ ಉಪಾಧ್ಯಕ್ಷರಾಗಿ, ಹರ್ಷಿತಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದು, ನಿರ್ದೇಶಕರಾಗಿ ಪ್ರಗತಿ ಯು ಶೆಟ್ಟಿ, ರೇಖಾ ಪಿ ಆಚಾರ್ಯ, ಸುಧಾಕರ ಹೆಗ್ಡೆ, ನಿತಿನ್ ಪೂಜಾರಿ ಗುಂಡಿಬೈಲ್, ಜಗದೀಶ್ ಶೆಟ್ಟಿ ಕೀಳಂಜೆ, ಕೆ ರಾಮರಾಜ್, ಸಂಜಯ್, ಸಂಚೀವ, ಕೆ ಉಮೇಶ್ ನಾಯರಿ ಸೇವೆ ಸಲ್ಲಿಸುತ್ತಿದ್ದಾರೆ.

ಸಭಾಕಾರ್ಯಕ್ರಮಕ್ಕೆ ಮುನ್ನ ಚಿನ್ಮಯ ಭಟ್ ಕಲ್ಲಡ್ಕ, ಡಾ. ಪ್ರಖ್ಯಾತ್ ಶೆಟ್ಟಿ, ಭರತ್ ರಾಜ್ ಶೆಟ್ಟಿ, ಗುರುಪ್ರಸಾದ್ ಬೋಳಜಂಡ್ಕ, ಸ್ಕಂದ ಕೊನ್ನಾರ್ ಕಲಾವಿದರಿಂದ ಯಕ್ಷ ಗಾನ ನಾದ ವೈಕುಂಠ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.

ಉದ್ಘಾಟನಾ ಕೊಡುಗೆಯಾಗಿ ಗ್ರಾಹಕರ 1 ವರ್ಷದಿಂದ ಮೇಲ್ಪಟ್ಟು 2 ವರ್ಷದ ಒಳಗಿನ ಠೇವಣಿಗಳಿಗೆ 11% ಬಡ್ಡಿಯನ್ನು ನೀಡಲಿದ್ದೇವೆ ಎಂದರು. ಈ ಕೊಡುಗೆ ಒಂದು ತಿಂಗಳು ಲಭ್ಯವಿದ್ದು ಸಾರ್ವಜನಿಕರು ಇದರ ಉಪಯೋಗ ಪಡೆಯಬಹುದು ಎಂದು ಹೇಳಿದರು.

More like this
Related

ಠಾಣೆಗೆ ನುಗ್ಗಿದರೆ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆ ಉಚಿತ : ಪ್ರತಾಪ್ ಸಿಂಹ ಹೆಸರು ಹೇಳದೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬೆಂಗಳೂರು: ಮೈಸೂರಿನ ಕಡೆಯ ‘ಪೇಟೆ ರೌಡಿ’ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ. ಕಾನೂನು...

ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವಕ್ಕೆ ವಜ್ರ ಮಹೋತ್ಸವದ ಸಂಭ್ರಮ

ವಜ್ರ ಮಹೋತ್ಸವದ ಅಂಗವಾಗಿ ‘ರಾಜ ದರ್ಬಾರ್’ ವೇದಿಕೆ ನಿರ್ಮಾಣ ಉಡುಪಿ: ಕಡಿಯಾಳಿ ಸಾರ್ವಜನಿಕ...

ಕರಾವಳಿ ಸಚಿವ ಸಂಪುಟ ಸಭೆ: ₹5,000 ಕೋಟಿ ವಿಶೇಷ ಪ್ಯಾಕೇಜ್ ಸೇರಿ ಪ್ರಮುಖ ಬೇಡಿಕೆಗಳಿಗೆ ಶಾಸಕ ಮಂಜುನಾಥ್ ಭಂಡಾರಿ ಮನವಿ

ಮಂಗಳೂರು: ಕರಾವಳಿ ಭಾಗದ ಸುದೀರ್ಘ ಬೇಡಿಕೆಗಳು ಹಾಗೂ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ...

ಉಡುಪಿ ಕಥೊಲಿಕ್ ಶಿಕ್ಷಣ ಸೊಸೈಟಿ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ

ಶಿಕ್ಷಕರು ವಿದ್ಯಾರ್ಥಿಗಳನ್ನು ಮಾನವರನ್ನಾಗಿ ರೂಪಿಸುವ ಸಮಾಜದ ಶಿಲ್ಪಿಗಳು : ವಂ. ಫ್ರಾನ್ಸಿಸ್...

Copying is disabled on Udupi Digital News.