Sunday, October 25, 2026

ಕೆಮ್ಮಣ್ಣು ಚರ್ಚಿನ ನವೀಕೃತ ಲಿಟಲ್ ಫ್ಲವರ್ ಸಭಾಭವನ ಉದ್ಘಾಟನೆ

ಉಡುಪಿ: ಸಮುದಾಯ ಭವನಗಳು ಸಮಾಜದಲ್ಲಿ ಸೌಹಾರ್ದತೆ, ಒಗ್ಗಟ್ಟು ಮತ್ತು ಸಾಮರಸ್ಯವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಉಡುಪಿ ಧರ್ಮಪ್ರಾಂತ್ಯದ ಕುಲಪತಿ ವಂ|ಸ್ಟೀಫನ್ ಡಿಸೋಜಾ ಹೇಳಿದರು.

ಅವರು ಭಾನುವಾರ ಕೆಮ್ಮಣ್ಣು ಸಂತ ತೆರೆಸಾ ಚರ್ಚಿನ ಆಡಳಿತಕ್ಕೆ ಒಳಪಟ್ಟ ನವೀಕೃತಗೊಂಡ ಲಿಟ್ಲ್ ಫ್ಲವರ್ ಸಭಾ ಭವನದ ಆಶೀರ್ವಚನ ನೆರವೇರಿಸಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಭಾಭವನದಲ್ಲಿ ನಡೆಯುವ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಒಂದೇ ಸೂರಿನಡಿ ನಡೆಯುವುದರಿಂದ ಜನರು ಪರಸ್ಪರ ಭೇಟಿಯಾಗಲು, ಸಂವಹನ ನಡೆಸಲು ಮತ್ತು ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಲು ಸಹಕಾರಿಯಾಗುತ್ತದೆ. ಇದು ಸಮಾಜದಲ್ಲಿ ಪರಸ್ಪರ ಬಾಂಧವ್ಯವನ್ನು ಗಟ್ಟಿಗೊಳಿಸುತ್ತದೆ. ನವೀಕೃತಗೊಂಡ ಸಭಾಭವನವು ಕೆಮ್ಮಣ್ಣು ಪರಿಸರದ ಒಗ್ಗಟ್ಟು ಹಾಗೂ ಸೌಹಾರ್ದತೆಯನ್ನು ಬೆಳೆಸಲು ನಾಂದಿಯಾಗಲಿ ಎಂದು ಶುಭ ಹಾರೈಸಿದರು.

ಸಭಾಭವನ ನವೀಕರಣಗೊಳಿಸಲು ಆರ್ಥಿಕ ಸಹಕಾರ ನೀಡಿದವರನ್ನು, ನವೀಕರಣದ ವೇಳೆ ತಮ್ಮ ಸೇವೆ ಸಲ್ಲಿಸಿದವರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.

ಆಲ್ ಇಂಡಿಯಾ ಕೆಥೊಲಿಕ್ ಯೂನಿಯನ್ ರಾಷ್ಟ್ರೀಯ ಗೌರವ ಪ್ರಶಸ್ತಿ ಪಡೆದ ಸಮಾಜ ಸೇವಕಿ ವೆರೋನಿಕಾ ಕರ್ನೆಲಿಯೋ ಅವರನ್ನು ಕೂಡ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಚರ್ಚಿನ ಎನ್ ಆರ್ ಐ ಪ್ರತಿನಿಧಿ ಆಲ್ಫ್ರೇಡ್ ಕ್ರಾಸ್ತಾ, ಸ್ಥಳೀಯ ಕಾನ್ವೆಂಟ್ ಮುಖ್ಯಸ್ಥರಾದ ಸಿಸ್ಟರ್ ಆಶಾ ಪ್ರೇಮಾ, ಚರ್ಚಿನ ಪಾಲನ ಸಮಿತಿಯ ಉಪಾಧ್ಯಕ್ಷರಾದ ಥೋಮಸ್ ಡಿಸೋಜಾ ಉಪಸ್ಥಿತರಿದ್ದರು.

ಚರ್ಚಿನ ಪ್ರಧಾನ ಧರ್ಮಗುರು ವಂ|ಫಿಲಿಪ್ ನೆರಿ ಆರಾನ್ಹಾ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಚರ್ಚಿನ ಪಾಲನ ಸಮಿತಿಯ ಕಾರ್ಯದರ್ಶಿ ನತಾಲಿಯಾ ಸುಜಿ ಫೆರ್ನಾಂಡಿಸ್ ಸ್ವಾಗತಿಸಿ, ಆಯೋಗಗಳ ಸಂಯೋಜಕಿ ರೀಟಾ ಡಿಸೋಜಾ ವಂದಿಸಿದರು. ಜೆನಿಶಾ ಜರ್ನಿಸ್ ಕಾರ್ಯಕ್ರಮ ನಿರೂಪಿಸಿದರು.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಚರ್ಚಿನಲ್ಲಿ ಕೃತಜ್ಞಾತಾ ಬಲಿಪೂಜೆಯನ್ನು ವಂ|ಸ್ಟೀಫನ್ ಡಿಸೋಜಾ ನೇತೃತ್ವದಲ್ಲಿ ಅರ್ಪಿಸಲಾಯಿತು. ಈ ವೇಳೆ ಕಥೊಲಿಕ್ ಎಜುಕೇಶನ್ ಸೊಸೈಟಿ ಉಡುಪಿ ಕಾರ್ಯದರ್ಶಿ ವಂ|ವಿನ್ಸೆಂಟ್ ಕ್ರಾಸ್ತಾ, ಅತಿಥಿ ಧರ್ಮಗುರುಗಳಾದ ವಂ|ಡೊಮಿನಿಕ್ ಲೋಬೊ, ವಂ|ಅಮರ್ ಲೋಬೊ, ವಂ|ಶೋನ್ ಅಂದ್ರಾದೆ ಉಪಸ್ಥಿತರಿದ್ದರು.

More like this
Related

ಅರಾಟೆ ಸೇತುವೆ ಬಳಿ ಎರಡು ಖಾಸಗಿ ಬಸ್ಸುಗಳ ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

ಕುಂದಾಪುರ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಅರಾಟೆ ಸೇತುವೆ ಸಮೀಪ ಭಾನುವಾರ...

ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ 114 ಪದಕಗಳ ದಾಖಲೆ: ಭಾರತೀಯ ಕ್ರೀಡಾಪಟುಗಳಿಗೆ ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆದ 2026ರ ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ದಾಖಲೆಯ...

ನ. 7ರವರೆಗೆ ರಿಯಾದ್, ದಮ್ಮಾಮ್‌ಗೆ ಏರ್ ಇಂಡಿಯಾ ವಿಮಾನ ಸೇವೆ ಸ್ಥಗಿತ

ರಿಯಾದ್: ಸೌದಿ ಅರೇಬಿಯಾದ ರಿಯಾದ್ ಮತ್ತು ದಮ್ಮಾಮ್‌ಗೆ ತೆರಳುವ ಹಾಗೂ ಅಲ್ಲಿಂದ...

ಪೋಸ್ಟರ್‌ಗಳ ಬದಲು ಅಭಿವೃದ್ಧಿ ಕಾರ್ಯಗಳನ್ನು ತೋರಿಸುವ ರಾಜಕೀಯ ಸಂಸ್ಕೃತಿ ಬರಲಿ: ಅಣ್ಣಾಮಲೈ

ಉಡುಪಿ: ಪಕ್ಷದ ಕಾರ್ಯಕರ್ತರು ‘ಮುಖ್ಯಮಂತ್ರಿ ಬರುತ್ತಿದ್ದಾರೆ’ ಎಂಬ ಪೋಸ್ಟರ್‌ಗಳನ್ನು ಹಾಕುವುದಕ್ಕಿಂತ, ತಮ್ಮ...

Copying is disabled on Udupi Digital News.