Monday, November 2, 2026

ಆದರ್ಶ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ನವೀಕೃತ ಕಾರ್ಯಾಲಯ ಉದ್ಘಾಟನೆ

ಉಡುಪಿ: ಸಹಕಾರ ವ್ಯವಸ್ಥೆಯು ದೇಶದ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದು, ಸಮಾಜದ ಬಡವರು, ಮಧ್ಯಮ ವರ್ಗದವರು, ರೈತರು ಮತ್ತು ಸಣ್ಣ ವ್ಯಾಪಾರಿಗಳಿಗೆ ಆರ್ಥಿಕವಾಗಿ ಆಸರೆಯಾಗಿ ನಿಂತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹೇಳಿದರು.

ಬ್ರಹ್ಮಗಿರಿಯ ಆದರ್ಶ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ನವೀಕೃತ ಕಾರ್ಯಾಲಯವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.

ಸಹಕಾರ ವ್ಯವಸ್ಥೆ ಇಂದಿನದಲ್ಲ. ದೇಶದ ಸ್ವಾತಂತ್ರ್ಯಾನಂತರದಿಂದಲೇ ಸಹಕಾರ ಕ್ಷೇತ್ರಕ್ಕೆ ಭದ್ರ ಬುನಾದಿ ಹಾಕಲಾಗಿದೆ. ದೇಶದ ಮೊದಲ ಪ್ರಧಾನಿ ಸಹಕಾರ ಚಳವಳಿಗೆ ಅಡಿಪಾಯ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸಹಕಾರ ಸಂಘಗಳು ಇಲ್ಲದಿದ್ದರೆ ಸಮಾಜದ ಬಡವರು ಮತ್ತು ಮಧ್ಯಮ ವರ್ಗದ ಜನರು ಸಾಕಷ್ಟು ಆರ್ಥಿಕ ಸಂಕಷ್ಟ ಎದುರಿಸಬೇಕಾಗುತ್ತಿತ್ತು ಎಂದು ಹೇಳಿದರು.

ಸಹಕಾರ ಸಂಘಗಳು ಕೇವಲ ದಾಖಲೆಗಳನ್ನು ಆಧರಿಸಿ ವ್ಯವಹರಿಸುವುದಿಲ್ಲ. ಬದಲಾಗಿ ವ್ಯಕ್ತಿಯ ಹಿನ್ನೆಲೆ ಹಾಗೂ ಆತನ ಆರ್ಥಿಕ ಪರಿಸ್ಥಿತಿಯನ್ನು ಅರಿತು ನೆರವಿಗೆ ಮುಂದಾಗುತ್ತವೆ. ಸಣ್ಣ ವ್ಯಾಪಾರಿಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಸಹಕಾರಿ ಸಂಘಗಳು ಬೆಂಬಲವಾಗಿ ನಿಲ್ಲುತ್ತವೆ. ಈ ವ್ಯವಸ್ಥೆ ಇಲ್ಲದಿದ್ದರೆ ರೈತರು ಮತ್ತು ವ್ಯಾಪಾರಿಗಳು ಆರ್ಥಿಕ ನೆರವಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು ಎಂದರು.

ಸಹಕಾರ ಸಂಘಗಳಿಗೆ ಇನ್ನಷ್ಟು ಶಕ್ತಿ ತುಂಬುವ ಕೆಲಸ ಆಗಬೇಕಿದೆ. ಆದರ್ಶ ಸಹಕಾರಿ ಸಂಘವು ಕಳೆದ 39 ವರ್ಷಗಳಿಂದ ತನ್ನ ಅಸ್ತಿತ್ವವನ್ನು ಉಳಿಸಿಕೊಂಡು ಜನಸೇವೆಯಲ್ಲಿ ತೊಡಗಿರುವುದು ಶ್ಲಾಘನೀಯ. ಹಿಂದಿನ ಹಿರಿಯರು ಹಾಕಿಕೊಟ್ಟಿರುವ ಭದ್ರ ಬುನಾದಿಯನ್ನು ಮುಂದುವರಿಸಿಕೊಂಡು ಹೋಗಬೇಕು. ಸಂಘವು ಮುಂದಿನ ಪೀಳಿಗೆಗೂ ಆದರ್ಶ ಸಂಸ್ಥೆಯಾಗಿ ಬೆಳೆಯಲಿ ಎಂದು ಆಶಿಸಿದರು.

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಹಾಗೂ ಉದ್ಯಮಿ ಪುರುಷೋತ್ತಮ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿರ್ದೇಶಕರಾದ ಕೃಷ್ಣಮೂರ್ತಿ ಆಚಾರ್ಯ, ಬಿ.ಎಲ್. ನರಸಿಂಹಸ್ವಾಮಿ, ಹರಿದಾಸ ಭಟ್, ಶಾಮ ಶೆಟ್ಟಿ, ಶೇಖರ ಶೆಟ್ಟಿ, ಜಿತೇಶ್ ಕುಮಾರ್, ಮಹಮ್ಮದ್ ರಫಿಕ್ ಖಾನ್ ಸಾಹೇಬ್, ರವಿಪ್ರಕಾಶ್, ಅನಂತ ನಾಯ್ಕ್, ಸುಲೋಚನ ದಾಮೋದರ್, ವಿನಯ ಪ್ರಕಾಶ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕಮಲಶಿಲೆ ಯಕ್ಷಗಾನ ಮೇಳದ ಪ್ರಧಾನ ಭಾಗವತ ಮಧುಕರ ಹೆಗ್ಡೆ ಮಡಾಮಕ್ಕಿ ಅವರನ್ನು ಸನ್ಮಾನಿಸಲಾಯಿತು.

ಸಂಘದ ಉಪಾಧ್ಯಕ್ಷ ಜಯನ್ ಮಲ್ಪೆ ವಂದಿಸಿದರು. ಸ್ಟೀವನ್ ಕುಲಾಸೊ ಕಾರ್ಯಕ್ರಮ ನಿರೂಪಿಸಿದರು.

More like this
Related

ಕುಂದಾಪುರ ಪತ್ರಕರ್ತನ ಮೇಲಿನ ಹಲ್ಲೆ ಪ್ರಕರಣ: ವೈದ್ಯರ ವರ್ಗಾವಣೆಗೆ ಆಗ್ರಹಿಸಿ ಉಸ್ತುವಾರಿ ಸಚಿವರಿಗೆ ಮನವಿ

ಉಡುಪಿ: ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ...

 ಉಡುಪಿ ಜಿಲ್ಲಾ ಆಸ್ಪತ್ರೆ ಶೀಘ್ರ ಕಾರ್ಯಾರಂಭಕ್ಕೆ ಕ್ರಮ: ಯು.ಟಿ. ಖಾದರ್

ಉಡುಪಿ: ನೂತನ ಉಡುಪಿ ಜಿಲ್ಲಾ ಆಸ್ಪತ್ರೆಯ ಕಾರ್ಯಾರಂಭಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದ್ದು,...

ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನ ಚರಿತ್ರೆ ಅನಾವರಣ 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ ಲೋಕಾರ್ಪಣೆ. ನವೆಂಬರ್ 2ರಂದು ಮುಂಬೈನಲ್ಲಿ...

ಎರಡು ದಿನಗಳಲ್ಲಿ ಎಎಪಿ ಮೂವರು ಶಾಸಕರ ರಾಜೀನಾಮೆ: ಪಕ್ಷ ತೊರೆದ ಕುನ್ವರ್ ವಿಜಯ್ ಪ್ರತಾಪ್ ಸಿಂಗ್

ಚಂಡೀಗಢ: ಪಂಜಾಬ್‌ನ ಆಡಳಿತಾರೂಢ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಮತ್ತೊಂದು ರಾಜಕೀಯ...

Copying is disabled on Udupi Digital News.