Friday, October 30, 2026

ನ. 1ರಂದು ಆದರ್ಶ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ನವೀಕೃತ ಕಾರ್ಯಾಲಯ ಉದ್ಘಾಟನೆ

ಉಡುಪಿಯ ಆದರ್ಶ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ಇದರ ನವೀಕೃತ ಕಾರ್ಯಾಲಯದ ಉದ್ಘಾಟನಾ ಸಮಾರಂಭವು ನ. 1ರಂದು ಭಾನುವಾರ ಪೂರ್ವಾಹ್ನ 11.30ಕ್ಕೆ ಉಡುಪಿಯ ಬ್ರಹ್ಮಗಿರಿಯ ಆದರ್ಶ್ ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ರಿಜ್ವಾನ್ ಅರ್ಷದ್ ಉದ್ಘಾಟಿಸಲಿದ್ದಾರೆ.

ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್‌ಪಾಲ್ ಎ. ಸುವರ್ಣ ಅವರು ಸಮಾಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಎಂ. ಎ. ಗಫೂರ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿಸೋಜ ಭಾಗವಹಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಸಹಕಾರ ಸಂಘಗಳ ಉಪ ನಿಬಂಧಕರಾದ ಲಾವಣ್ಯ ಕೆ.ಆರ್. ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಸಂಘದ ಅಧ್ಯಕ್ಷರಾದ ರೆನೋಲ್ಡ್ ಪ್ರವೀಣ್ ಕುಮಾರ್, ಉಪಾಧ್ಯಕ್ಷ ಜಯನ್ ಮಲ್ಪೆ, ನಿರ್ದೇಶಕರುಗಳಾದ ಕೆ. ಕೃಷ್ಣಮೂರ್ತಿ ಆಚಾರ್ಯ, , ಬಿ.ಎಲ್. ನರಸಿಂಹಸ್ವಾಮಿ, ಹರಿದಾಸ ಭಟ್, ಶಾಮ ಶೆಟ್ಟಿ, ಶೇಖರ ಶೆಟ್ಟಿ, ಜಿತೇಶ್ ಕುಮಾರ್, ಮಹಮ್ಮದ್ ರಫೀಕ್ ಖಾನ್, ರವಿಪ್ರಕಾಶ್, ಅನಂತ ನಾಯ್ಕ್, ಸುಲೋಚನ ದಾಮೋದರ್, ವಿನಯ ಪ್ರಕಾಶ್, ಕಾರ್ಯದರ್ಶಿ ಜಲೇಂದ್ರ ಕೋಟ್ಯಾನ್ ಉಪಸ್ಥಿತರಿರುವರು.

More like this
Related

ಒಮಾನ್ ಕರಾವಳಿಯ ಹಾರ್ಮುಝ್ ಜಲಸಂಧಿಯಲ್ಲಿ ಹಡಗಿಗೆ ಬೆಂಕಿ

ಟೆಹರಾನ್: ಒಮಾನ್ ಕರಾವಳಿಯ ಹಾರ್ಮುಝ್ ಜಲಸಂಧಿಯಲ್ಲಿ ಸಂಚರಿಸುತ್ತಿದ್ದ ಹಡಗೊಂದರಲ್ಲಿ ಬೆಂಕಿ ಕಾಣಿಸಿಕೊಂಡಿರುವ...

ಅ.31ರಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಸ್ನೇಹ ಸಮಾವೇಶ- ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಸ್ನೇಹ ಸಮಾವೇಶ ಮತ್ತು...

ಹಾಲಿನ ದರ ಲೀಟರ್‌ಗೆ 8 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ರಾಜ್ಯದಲ್ಲಿ ಹಾಲಿನ ದರವನ್ನು ಲೀಟರ್‌ಗೆ 8 ರೂ. ಹೆಚ್ಚಳ ಮಾಡಲು...

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಉಡುಪಿ: ಕಾಂಗ್ರೆಸ್ ಪಕ್ಷದ ಸಂಘಟನೆಗೆ ನಿರಂತರವಾಗಿ ಶ್ರಮಿಸುತ್ತಿರುವ ಉಡುಪಿ ಬ್ಲಾಕ್ ಕಾಂಗ್ರೆಸ್...

Copying is disabled on Udupi Digital News.