Sunday, September 13, 2026

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ತಪ್ಪಲ್ಲವೇ? ಬಿಜೆಪಿಗರು ಉತ್ತರಿಸಲಿ: ಕೋಳ್ಕೆರೆ ವಿಕಾಸ್ ಹೆಗ್ಡೆ

ಉಡುಪಿ: ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದ ದೇಶದ ಲಕ್ಷಾಂತರ ವೈದ್ಯಕೀಯ ಶಿಕ್ಷಣಾಕಾಂಕ್ಷಿ ವಿದ್ಯಾರ್ಥಿಗಳ ಭವಿಷ್ಯ ನಾಶವಾಗಿದ್ದು, ಖಿನ್ನತೆಗೆ ಒಳಗಾದ ಸುಮಾರು 21 ಎಳೆಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುರಂತಕರವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಹಾಗೂ ಯುವ ನ್ಯಾಯವಾದಿ ಕೋಳ್ಕೆರೆ ವಿಕಾಸ್ ಹೆಗ್ಡೆ ಹೇಳಿದ್ದಾರೆ.

ಈ ಅನ್ಯಾಯದ ವಿರುದ್ಧ ದೆಹಲಿಯಲ್ಲಿ ವಿದ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸಿದಾಗ ಕೇಂದ್ರ ಸರ್ಕಾರ ಪೊಲೀಸ್ ಲಾಠಿಚಾರ್ಜ್ ನಡೆಸಿ ಪ್ರತಿಭಟನೆಯನ್ನು ಹತ್ತಿಕ್ಕಲು ಯತ್ನಿಸಿತು. ಈ ವೇಳೆ ಹಲವರು ಗಾಯಗೊಂಡರೆ, ಕೆಲವರು ಮೂಳೆ ಮುರಿತ ಸೇರಿದಂತೆ ಗಂಭೀರ ಗಾಯಗಳಿಗೆ ಒಳಗಾದರು. ದೇಶವ್ಯಾಪಿ ವಿದ್ಯಾರ್ಥಿಗಳ ಆಕ್ರೋಶದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೊನೆಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಪಡೆಯಬೇಕಾಯಿತು ಎಂದು ಅವರು ಹೇಳಿದ್ದಾರೆ.

ಆದರೆ, ಉಡುಪಿ ಸೇರಿದಂತೆ ವಿವಿಧೆಡೆ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದು ಹಾಗೂ ಅದರಲ್ಲಿ ಜಿಲ್ಲೆಯ ಬಿಜೆಪಿ ಶಾಸಕರುಗಳು ಭಾಗವಹಿಸುತ್ತಿರುವುದು ಆಶ್ಚರ್ಯಕರವಾಗಿದೆ. ಬಿಜೆಪಿಯ ನಡೆ ನೋಡಿದರೆ, ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ಅವರಿಗೆ ಬೆಂಬಲ ನೀಡಿದ ಕಾಂಗ್ರೆಸ್ ತಪ್ಪು ಎಂಬ ಸಂದೇಶ ನೀಡಲು ಪ್ರಯತ್ನಿಸುತ್ತಿರುವಂತಿದೆ ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿಯ ಪ್ರಕಾರ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ತಪ್ಪಲ್ಲವೇ? ಈ ಹಗರಣದಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿರುವುದು ಸುಳ್ಳೇ? ಆತ್ಮಹತ್ಯೆಗೆ ಶರಣಾದ ಎಳೆಮಕ್ಕಳ ಸಾವಿಗೆ ಬಿಜೆಪಿ ನಾಯಕರು ಯಾವ ನೈತಿಕ ಉತ್ತರ ನೀಡುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕನ್ನು ನೀಡಿದೆ. ನಾನೊಬ್ಬ ಕಾನೂನು ವಿದ್ಯಾರ್ಥಿಯಾಗಿ ಕೇಳುತ್ತಿರುವ ಪ್ರಶ್ನೆಯೆಂದರೆ, ನಿಮ್ಮ ಆಡಳಿತದಲ್ಲಿ ಜಾರಿಯಲ್ಲಿರುವುದು ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಭಾರತದ ಸಂವಿಧಾನವೇ, ಅಥವಾ ಬಿಜೆಪಿಯದೇ ಪ್ರತ್ಯೇಕ ಸಂವಿಧಾನವೇ? ಇದನ್ನು ರಾಜ್ಯ ಮತ್ತು ಕೇಂದ್ರ ಬಿಜೆಪಿ ನಾಯಕರು ಸಾರ್ವಜನಿಕವಾಗಿ ಸ್ಪಷ್ಟಪಡಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಹಾಗೂ ಯುವ ನ್ಯಾಯವಾದಿ ಕೋಳ್ಕೆರೆ ವಿಕಾಸ್ ಹೆಗ್ಡೆ ಪ್ರಶ್ನಿಸಿದ್ದಾರೆ.

More like this
Related

ಠಾಣೆಗೆ ನುಗ್ಗಿದರೆ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆ ಉಚಿತ : ಪ್ರತಾಪ್ ಸಿಂಹ ಹೆಸರು ಹೇಳದೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬೆಂಗಳೂರು: ಮೈಸೂರಿನ ಕಡೆಯ ‘ಪೇಟೆ ರೌಡಿ’ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ. ಕಾನೂನು...

ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವಕ್ಕೆ ವಜ್ರ ಮಹೋತ್ಸವದ ಸಂಭ್ರಮ

ವಜ್ರ ಮಹೋತ್ಸವದ ಅಂಗವಾಗಿ ‘ರಾಜ ದರ್ಬಾರ್’ ವೇದಿಕೆ ನಿರ್ಮಾಣ ಉಡುಪಿ: ಕಡಿಯಾಳಿ ಸಾರ್ವಜನಿಕ...

ಕರಾವಳಿ ಸಚಿವ ಸಂಪುಟ ಸಭೆ: ₹5,000 ಕೋಟಿ ವಿಶೇಷ ಪ್ಯಾಕೇಜ್ ಸೇರಿ ಪ್ರಮುಖ ಬೇಡಿಕೆಗಳಿಗೆ ಶಾಸಕ ಮಂಜುನಾಥ್ ಭಂಡಾರಿ ಮನವಿ

ಮಂಗಳೂರು: ಕರಾವಳಿ ಭಾಗದ ಸುದೀರ್ಘ ಬೇಡಿಕೆಗಳು ಹಾಗೂ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ...

ಉಡುಪಿ ಕಥೊಲಿಕ್ ಶಿಕ್ಷಣ ಸೊಸೈಟಿ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ

ಶಿಕ್ಷಕರು ವಿದ್ಯಾರ್ಥಿಗಳನ್ನು ಮಾನವರನ್ನಾಗಿ ರೂಪಿಸುವ ಸಮಾಜದ ಶಿಲ್ಪಿಗಳು : ವಂ. ಫ್ರಾನ್ಸಿಸ್...

Copying is disabled on Udupi Digital News.