ಮಲ್ಪೆ: ಜಮಾಅತೆ ಇಸ್ಲಾಮಿ ಹಿಂದ್ ಮಲ್ಪೆಯ ಅಧ್ಯಕ್ಷ ಸಿರಾಜ್ ಮಲ್ಪೆ ಇಂದು ಹೃದಯಾಘಾತದಿಂದ ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಅವರು ಜಮಾಅತೆ ಇಸ್ಲಾಮಿ ಹಿಂದ್ ಸಂಘಟನೆಯ ಮಲ್ಪೆ ಶಾಖೆಯ ಅಧ್ಯಕ್ಷರಾಗಿದ್ದರು. ಅವರು ಸಕ್ರಿಯ ಸಮಾಜ ಸೇವಕರಾಗಿದ್ದು, ಸಮುದಾಯ ಕಲ್ಯಾಣ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಅವರು ಲೇಖಕರಾಗಿದ್ದರು. ಅನುಗ್ರಹ ಟ್ರಸ್ಟ್ ನ ಸದಸ್ಯರಾಗಿದ್ದರು.
ಅವರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಜಮಾಅತೆ ಇಸ್ಲಾಮಿ ಹಿಂದ್ ಜಿಲ್ಲಾಧ್ಯಕ್ಷರಾದ ಡಾ.ಅಬ್ದುಲ್ ಅಝೀಜ್, ಸಮನ್ವಯ ಸರ್ವಧರ್ಮ ಸಮನ್ವಯ ಸಮಿತಿಯ ಗೌರವಾಧ್ಯಕ್ಷರಾದ ವಂ|ಡೆನಿಸ್ ಡೆಸಾ, ಅಧ್ಯಕ್ಷರಾದ ರಮೇಶ್ ತಿಂಗಳಾಯ, ಹಾಗೂ ಸಮಿತಿ ಸದಸ್ಯರು ಸಿರಾಜ್ ಮಲ್ಪೆಯ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಜನಪರ ನಿಲುವುಗಳನ್ನು ಈ ಸಂದರ್ಭದಲ್ಲಿ ಸ್ಮರಿಸಿದ ಅವರು, ಅವರು ಜಮಾಅತಿನ ಸಕ್ರಿಯ ಸದಸ್ಯರಾಗಿದ್ದು ಒಳ್ಳೆಯ ನಾಯಕತ್ವ ಗುಣಗಳನ್ನು ಹೊಂದಿದ್ದರು. ಅವರ ನಷ್ಟ ನಿಜಕ್ಕೂ ಈ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.
ಅವರ ಪತ್ನಿ,ಮಕ್ಕಳು ಹಾಗೂ ಕುಟುಂಬ ವರ್ಗಕ್ಕೆ ದುಃಖ ಸಹಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.




