Sunday, September 13, 2026

ಕುಂದಾಪುರ: ಪತ್ರಕರ್ತ ನಾಗೇಶ್ ಗಾಣಿಗ ನಿಧನ

ಕುಂದಾಪುರ: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ, ಸಿದ್ದಾಪುರ ಭಾಗದ ವಿಜಯ ಕರ್ನಾಟಕ ವರದಿಗಾರ, ನಾಗೇಶ್ ಗಾಣಿಗ ನೇರಳಕಟ್ಟೆ ಇವರು ಹೃದಯಘಾತದಿಂದ ನಿಧನರಾಗಿದ್ದಾರೆ.

ನಾಗೇಶ್ ಗಾಣಿಗ ಅವರು, ಕಳೆದ ಹಲವಾರು ವರ್ಷಗಳಿಂದ ವಿಜಯಕರ್ನಾಟಕ ವರದಿಗಾರರಾಗಿದ್ದರು. ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ತಮ್ಮ ವರದಿಗಾರಿಕೆಯ ಮೂಲಕ ಬೆಳಕು ಚೆಲ್ಲಿದ್ದಲ್ಲದೇ ಹಲವಾರು ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಯಶಸ್ವಿಯಾಗಿದ್ದರು.

ಕರ್ತವ್ಯದಲ್ಲಿರುವಾಗ ತೀವ್ರ ಹೃದಯಾಘಾತಕ್ಕೊಳಗಾಗಿದ್ದು, ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಾಗಲೇ ಅವರು ಇಹಲೋಕ ತ್ಯಜಿಸಿದ್ದರು ಎಂದು ತಿಳಿದು ಬಂದಿದೆ.

ನಾಗೇಶ್ ಗಾಣಿಗರ ನಿಧನದಿಂದ ಪತ್ರಿಕೋದ್ಯಮಕ್ಕೆ ತುಂಬಲಾರದ ನಷ್ಟವುಂಟಾಗಿದ್ದು, ಗಣ್ಯರು ಹಾಗೂ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಸಂತಾಪ ವ್ಯಕ್ತಪಡಿಸಿದೆ.

ಸದ್ಯ ಮೃತದೇಹವನ್ನು ಕುಂದಾಪುರದ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದೆ. ಗುರುವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

More like this
Related

ಠಾಣೆಗೆ ನುಗ್ಗಿದರೆ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆ ಉಚಿತ : ಪ್ರತಾಪ್ ಸಿಂಹ ಹೆಸರು ಹೇಳದೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬೆಂಗಳೂರು: ಮೈಸೂರಿನ ಕಡೆಯ ‘ಪೇಟೆ ರೌಡಿ’ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ. ಕಾನೂನು...

ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವಕ್ಕೆ ವಜ್ರ ಮಹೋತ್ಸವದ ಸಂಭ್ರಮ

ವಜ್ರ ಮಹೋತ್ಸವದ ಅಂಗವಾಗಿ ‘ರಾಜ ದರ್ಬಾರ್’ ವೇದಿಕೆ ನಿರ್ಮಾಣ ಉಡುಪಿ: ಕಡಿಯಾಳಿ ಸಾರ್ವಜನಿಕ...

ಕರಾವಳಿ ಸಚಿವ ಸಂಪುಟ ಸಭೆ: ₹5,000 ಕೋಟಿ ವಿಶೇಷ ಪ್ಯಾಕೇಜ್ ಸೇರಿ ಪ್ರಮುಖ ಬೇಡಿಕೆಗಳಿಗೆ ಶಾಸಕ ಮಂಜುನಾಥ್ ಭಂಡಾರಿ ಮನವಿ

ಮಂಗಳೂರು: ಕರಾವಳಿ ಭಾಗದ ಸುದೀರ್ಘ ಬೇಡಿಕೆಗಳು ಹಾಗೂ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ...

ಉಡುಪಿ ಕಥೊಲಿಕ್ ಶಿಕ್ಷಣ ಸೊಸೈಟಿ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ

ಶಿಕ್ಷಕರು ವಿದ್ಯಾರ್ಥಿಗಳನ್ನು ಮಾನವರನ್ನಾಗಿ ರೂಪಿಸುವ ಸಮಾಜದ ಶಿಲ್ಪಿಗಳು : ವಂ. ಫ್ರಾನ್ಸಿಸ್...

Copying is disabled on Udupi Digital News.