Tuesday, September 15, 2026

ಕಲ್ಮಾಡಿ ಚರ್ಚಿನ ವಾರ್ಷಿಕ ಪ್ರತಿಷ್ಠಾಪನಾ ಮಹೋತ್ಸವ: ವೆಲಂಕಣಿ ಮಾತೆಯ ಮೂರ್ತಿ ಮೆರವಣಿಗೆ

ಉಡುಪಿ: ಕಲ್ಮಾಡಿಯಲ್ಲಿರುವ ಸ್ಟೆಲ್ಲಾ ಮಾರಿಸ್ ದೇವಾಲಯದ ವೆಲಂಕಣಿ ಆರೋಗ್ಯ ಮಾತೆಯ ಪುಣ್ಯಕ್ಷೇತ್ರ ಪ್ರತಿಷ್ಠಾಪನೆಯ ವಾರ್ಷಿಕ ಮಹೋತ್ಸವದ ಪ್ರಯುಕ್ತ ವೆಲಂಕಣಿ ಮಾತೆಯ ಮೂರ್ತಿಯ ಮೆರವಣಿಗೆಯು ಗುರುವಾರ ಆದಿಉಡುಪಿಯಿಂದ ಕಲ್ಮಾಡಿ ಚರ್ಚಿನವರೆಗೆ ಅದ್ದೂರಿಯಿಂದ ನಡೆಯಿತು.

ಶಿವಮೊಗ್ಗ ಧರ್ಮಪ್ರಾಂತ್ಯದ ಧರ್ಮಗುರುಗಳಾದ ವಂ|ಫ್ರಾಂಕ್ಲಿನ್ ಡಿಸೋಜಾ ವೆಲಂಕಣಿ ಮಾತೆಯ ಮೂರ್ತಿಯನ್ನು ಆಶೀರ್ವದಿಸಿ ಮೆರವಣಿಗೆಗೆ ಚಾಲನೆ ನೀಡಿದರು.

ವಾರ್ಷಿಕ ಹಬ್ಬಗಳ ಸಂದರ್ಭದಲ್ಲಿ ಚರ್ಚುಗಳ ಪಾಲಕರ ಮಂಜೂಶಾ (ಮೂರ್ತಿ)ಗಳನ್ನು ಸಾರ್ವಜನಿಕವಾಗಿ ಮೆರವಣಿಗೆಯಲ್ಲಿ ಕೊಂಡೊಯ್ದು ಗೌರವ ಸೂಚಿಸುವುದು ಕ್ರೈಸ್ತ ಸಂಪ್ರದಾಯದ ಒಂದು ಭಾಗವಾಗಿದೆ. ವೆಲಂಕಣಿ ಮಾತೆ ಪವಾಡದ ಮಾತೆ ಎಂದು ಜನಜನಿತವಾಗಿದ್ದು ಆಕೆಯ ಮೂಲಕ ಯೇಸುಕ್ರಿಸ್ತರ ಕ್ರಪಾವರಗಳು ಪ್ರತಿಯೊಬ್ಬರ ಮೇಲೆ ಹರಿದು ಬರಲಿ ಎಂದು ವಂ|ಫ್ರಾಂಕ್ಲಿನ್ ಡಿಸೋಜಾ ಆಶೀರ್ವಚನ ನೀಡಿದರು.

ಮೆರವಣಿಗೆಯು ಆದಿ ಉಡುಪಿ ಮಾರ್ಗವಾಗಿ ಆರಂಭಗೊಂಡು ಚರ್ಚಿನ ತನಕ ಕಾಲ್ನಡಿಗೆಯ ಮೂಲಕ ನಡೆಯಿತು. ತದ ನಂತರ ನಡೆದ ಬಲಿಪೂಜೆಯನ್ನು ವಂ|ಫ್ರಾಂಕ್ಲಿನ್ ಡಿಸೋಜಾ ನೆರವೇರಿಸಿ ಸಂದೇಶ ನೀಡಿದರು.

ವೆಲಂಕಣಿ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವವು ಆ.15ರಂದು ನಡೆಯಲಿದ್ದು, ಬೆಳಗ್ಗೆ 10.30 ಗಂಟೆಗೆ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತೀ ವಂ.ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಹಬ್ಬದ ಬಲಿಪೂಜೆ ನೆರೆವೇರಿಸಲಿರು ವರು.

ಪುಣ್ಯಕ್ಷೇತ್ರದ ರೆಕ್ಟರ್ ವಂದನೀಯ ಬ್ಯಾಪ್ಟಿಸ್ಟ್ ಮಿನೇಜಸ್, ಚರ್ಚಿನ ಪಾಲನಾ ಮಂಡಳಿ ಉಪಾಧ್ಯಕ್ಷರಾದ ನವೀನ್ ಫೆರ್ನಾಂಡಿಸ್, ಕಾರ್ಯದರ್ಶಿ ಪ್ರೆಸಿಲ್ಲಾ ಆಳ್ವಾ, ಆಯೋಗಗಳ ಸಂಯೋಜಕರಾದ ಡೆನಿಸ್ ಲಸ್ರಾದೊ ಹಾಗೂ ಚರ್ಚಿನ ಮಹೋತ್ಸವ ಆಚರಣಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

More like this
Related

ದ್ವಿಚಕ್ರ ವಾಹನಕ್ಕೆ ಹಾಲು ಸಾಗಾಟದ ಟ್ಯಾಂಕರ್ ಢಿಕ್ಕಿ: ಒಂದೇ ಕುಟುಂಬದ ಮೂವರು ಮೃತ್ಯು

ಸ್ವಗ್ರಾಮದಲ್ಲಿ ಚೌತಿ ಹಬ್ಬ ಮುಗಿಸಿ ಊರಿಗೆ ಮರಳುತ್ತಿದ್ದ ವೇಳೆ ದುರ್ಘಟನೆ ಮಂಡ್ಯ: ದ್ವಿಚಕ್ರ...

ರೈತರನ್ನು ನಿರ್ಲಕ್ಷ ಮಾಡುತ್ತಿರುವ ಮೆಸ್ಕಾಂ: ಕೆ. ವಿಕಾಸ್ ಹೆಗ್ಡೆ

ಕುಂದಾಪುರ: ಕೃಷಿ ಪಂಪುಸೆಟ್ ಗಳಿಗೆ ವಿದ್ಯುತ್ ಸಂಪರ್ಕ ಕೋರಿ ಅರ್ಜಿ ಸಲ್ಲಿಸುತ್ತಿರುವ...

ಕಸ್ತೂರಿ ರಂಗನ್ ವರದಿ ಜಾರಿ: ಪಶ್ಚಿಮಘಟ್ಟ ತಪ್ಪಲು ಪ್ರದೇಶದ ಜನರಲ್ಲಿ ಆತಂಕ : ಮುನಿಯಾಲು ಉದಯ್ ಕುಮಾರ್ ಶೆಟ್ಟಿ

ಸೆ.18ರಂದು ಸಾರ್ವಜನಿಕರ ಅಹವಾಲು ಆಲಿಸಲು ಹೆಬ್ರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್; ಬಾಧಿತ...

ಕಂಡ್ಲೂರು ಹಳೆ ಸೇತುವೆ ನೆಲಸಮದ ಹುನ್ನಾರದ ಹಿಂದೆ ಭ್ರಷ್ಟಾಚಾರದ ಅನುಮಾನ : ಕೆ. ವಿಕಾಸ್ ಹೆಗ್ಡೆ

ಕುಂದಾಪುರ ತೀರ್ಥಹಳ್ಳಿ ಸಂಪರ್ಕ ಮಾಡುವ ರಾಜ್ಯ ಹೆದ್ದಾರಿ ಹಾದು ಹೋಗುವ ವರಾಹಿ...

Copying is disabled on Udupi Digital News.