ಕಾಪು: ಬಸ್ ಟೈಮಿಂಗ್ ವಿಚಾರಕ್ಕೆ ಸಂಬಂಧಿಸಿ ಎರಡು ಖಾಸಗಿ ಬಸ್‌ಗಳ ಚಾಲಕರು ಮತ್ತು ಕಂಡಕ್ಟರ್‌ಗಳು ಸಾರ್ವಜನಿಕ ಸ್ಥಳದಲ್ಲೇ ಪರಸ್ಪರ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಸಾರ್ವಜನಿಕರ ಶಾಂತಿ ಹಾಗೂ ನೆಮ್ಮದಿಗೆ ಭಂಗ ಉಂಟು ಮಾಡಿದ ಘಟನೆ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ಜುಲೈ 27ರಂದು ಬೆಳಿಗ್ಗೆ 9.27ರ ಸುಮಾರಿಗೆ ಕಾಪು ಪಡು ಗ್ರಾಮದ ಕಾಪು ಹೊಸ ಮಾರಿಗುಡಿ ಅಂಡರ್‌ಪಾಸ್ ಸಮೀಪದ ಬಸ್ ನಿಲ್ದಾಣದ ಎದುರು KA-20 AB-5493 ನೋಂದಣಿಯ ಸಂದೇಶ್ ಬಸ್ ಹಾಗೂ KA-19 AE-1095 ನೋಂದಣಿಯ ಆನಂದ್ ಬಸ್ ಸಿಬ್ಬಂದಿ ನಡುವೆ ಟೈಮಿಂಗ್ ವಿಚಾರಕ್ಕೆ ವಾಗ್ವಾದ ಉಂಟಾಗಿ, ಅದು ಕೈ-ಕೈ ಮಿಲಾಯಿಸುವ ಮಟ್ಟಕ್ಕೆ ತಿರುಗಿದೆ. ಇದೇ ವೇಳೆ ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡು ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ನಡೆಸಿರುವುದಾಗಿ ಆರೋಪಿಸಲಾಗಿದೆ.
ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಚಾಲಕರಾದ ರಮೇಶ್ ಮತ್ತು ಅಭಿಷೇಕ್, ಕಂಡಕ್ಟರ್‌ಗಳಾದ ವಿಜಯಕುಮಾರ್ ಹಾಗೂ ಹರೀಶ್ ಬಿ. ಹೆಗ್ಡೆ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಗಲಾಟೆಯಲ್ಲಿ ಭಾಗಿಯಾದ ಎರಡೂ ಬಸ್‌ಗಳನ್ನು ಜಪ್ತಿ ಮಾಡಿ ಮುಂದಿನ ತನಿಖೆ ಕೈಗೊಂಡಿದ್ದಾರೆ.




