Sunday, September 13, 2026

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ನೇಮಕ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ನೇಮಕ ಮಾಡಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಬುಧವಾರ ಆದೇಶ ಹೊರಡಿಸಿದೆ.

ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದು ಈ ಹಿಂದೆ ಕಿಶನ್ ಹೆಗ್ಡೆ ಅವರು ಉಡುಪಿ ಜಿಲ್ಲಾ ಕಾಂಗ್ರೆಸ್ ನ ಕಾರ್ಯಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಿಶನ್ ಹೆಗ್ಡೆ ಅವರನ್ನು ಜಿಲ್ಲಾ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದು ಬಳಿಕ ತಡೆಹಿಡಿಯಲಾಗಿತ್ತು. ಇತ್ತೀಚೆಗೆ ಎಐಸಿಸಿ ವೀಕ್ಷಕರನ್ನು ನೇಮಿಸಿ ಪ್ರತಿ ಜಿಲ್ಲೆಯಲ್ಲಿ ಸಂಘಟನ್ ಅಭಿಯಾನ್ ಕಾರ್ಯಕ್ರಮದ ಅಡಿಯಲ್ಲಿ ನಾಯಕರ ಅಭಿಪ್ರಾಯ ಸಂಗ್ರಹ ಮಾಡಿದ್ದು ವೀಕ್ಷಕರು ವರಿಷ್ಠರಿಗೆ ವರದಿ ಸಲ್ಲಿಸಿದ್ದರು.

More like this
Related

ಠಾಣೆಗೆ ನುಗ್ಗಿದರೆ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆ ಉಚಿತ : ಪ್ರತಾಪ್ ಸಿಂಹ ಹೆಸರು ಹೇಳದೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬೆಂಗಳೂರು: ಮೈಸೂರಿನ ಕಡೆಯ ‘ಪೇಟೆ ರೌಡಿ’ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ. ಕಾನೂನು...

ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವಕ್ಕೆ ವಜ್ರ ಮಹೋತ್ಸವದ ಸಂಭ್ರಮ

ವಜ್ರ ಮಹೋತ್ಸವದ ಅಂಗವಾಗಿ ‘ರಾಜ ದರ್ಬಾರ್’ ವೇದಿಕೆ ನಿರ್ಮಾಣ ಉಡುಪಿ: ಕಡಿಯಾಳಿ ಸಾರ್ವಜನಿಕ...

ಕರಾವಳಿ ಸಚಿವ ಸಂಪುಟ ಸಭೆ: ₹5,000 ಕೋಟಿ ವಿಶೇಷ ಪ್ಯಾಕೇಜ್ ಸೇರಿ ಪ್ರಮುಖ ಬೇಡಿಕೆಗಳಿಗೆ ಶಾಸಕ ಮಂಜುನಾಥ್ ಭಂಡಾರಿ ಮನವಿ

ಮಂಗಳೂರು: ಕರಾವಳಿ ಭಾಗದ ಸುದೀರ್ಘ ಬೇಡಿಕೆಗಳು ಹಾಗೂ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ...

ಉಡುಪಿ ಕಥೊಲಿಕ್ ಶಿಕ್ಷಣ ಸೊಸೈಟಿ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ

ಶಿಕ್ಷಕರು ವಿದ್ಯಾರ್ಥಿಗಳನ್ನು ಮಾನವರನ್ನಾಗಿ ರೂಪಿಸುವ ಸಮಾಜದ ಶಿಲ್ಪಿಗಳು : ವಂ. ಫ್ರಾನ್ಸಿಸ್...

Copying is disabled on Udupi Digital News.