Tuesday, September 15, 2026

ಕುಂದಾಪುರ ಶೂಟೌಟ್ ಪ್ರಕರಣ: ಆರೋಪಿ ಡೆರಿಕ್ ಕ್ರಾಸ್ತಾ ಭಟ್ಕಳದಲ್ಲಿ ಬಂಧನ

ಕುಂದಾಪುರ: ತಾಲೂಕಿನ ಚರ್ಚ್‌ ರಸ್ತೆಯಲ್ಲಿ ಜು.31ರಂದು ನಸುಕಿನ ವೇಳೆ ನಡೆದ ಶೂಟೌಟ್ ಹಾಗೂ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಡುಪಿ ಜಿಲ್ಲಾ ಎಸ್ಪಿ ನೇತೃತ್ವದಲ್ಲಿ ರಚಿಸಲಾಗಿದ್ದ ವಿಶೇಷ ಪೊಲೀಸ್ ತಂಡ ಭಟ್ಕಳದಲ್ಲಿ ಬಂಧಿಸಿದೆ.

ಹೆಮ್ಮಾಡಿ ಸಮೀಪದ ಕನ್ನಡಕುದ್ರು ಮೂಲದ, ಸದ್ಯ ಕುಂದಾಪುರದ ಫ್ಲ್ಯಾಟ್‌ವೊಂದರಲ್ಲಿ ವಾಸವಿರುವ ಡೆರಿಕ್ ಕ್ರಾಸ್ತಾ (55) ಬಂಧಿತ ಆರೋಪಿ.

ಹೆಬ್ರಿ ಮೂಲದ, ಪ್ರಸ್ತುತ ಬಾರ್ಕೂರು ಕಚ್ಚೂರು ಸಮೀಪ ಬಾಡಿಗೆ ಮನೆಯಲ್ಲಿ ವಾಸವಿದ್ದ ಐವನ್ ರಿಚರ್ಡ್ ಮಸ್ಕರೇನಸ್ ಯಾನೆ ಮುನ್ನಾ (45) ಅವರನ್ನು ಗುಂಡಿಕ್ಕಿ ಹತ್ಯೆಗೈದ ಬಳಿಕ ಡೆರಿಕ್ ತಲೆಮರೆಸಿಕೊಂಡಿದ್ದ.

ಆರೋಪಿಯನ್ನು ಶನಿವಾರ ಭಟ್ಕಳದ ಬೆಳಕೆ ಹೇರಬುಡಿಕೆ ಎಂಬಲ್ಲಿ ವಿಶೇಷ ಪೊಲೀಸ್ ತಂಡ ಬಂಧಿಸಿದೆ. ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಜಿಲ್ಲಾ ಎಸ್ಪಿ ತಿಳಿಸಿದ್ದಾರೆ.

More like this
Related

 ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರ ಪಾಣಿಯಾಗಿ ಜನಾರ್ದನ್ ಕೊಡವೂರು ನೇಮಕ

ಉಡುಪಿ: ಇತಿಹಾಸ ಪ್ರಸಿದ್ಧ ಮಹತೊಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ...

ಇತರರಿಗೆ ಸಹಾಯ ಮಾಡುವ ಪ್ರತಿಯೊಬ್ಬರಲ್ಲಿ ದೇವರನ್ನು ಕಾಣಬಹುದು : ಬಿಷಪ್ ಲೆಸ್ಲಿ ಸಿ ಡಿಸೋಜಾ

ಉಡುಪಿ: ನಾವು ಕಣ್ಣಿನಿಂದ ದೇವರನ್ನು ನೋಡದೇ ಇದ್ದರೂ, ಕಷ್ಟಕಾಲದಲ್ಲಿ ನಮಗೆ ಸಹಾಯ...

ಬಿಜೆಪಿ ಅಭ್ಯರ್ಥಿಗೆ ಕೇವಲ 1 ಮತ, ಆಘಾತಕಾರಿ ಫಲಿತಾಂಶ: ಹೆಂಡತಿ, ಅಪ್ಪ, ಅಮ್ಮನ ವೋಟ್ ಯಾರಿಗೆ?

ಜೈಪುರ: ರಾಜಸ್ಥಾನ ನಾಗರಿಕ ಚುನಾವಣೆಯ ಫಲಿತಾಂಶದ ನಡುವೆ ಆಘಾತಕಾರಿ ಮತ್ತು ಆಸಕ್ತಿದಾಯಕ...

Copying is disabled on Udupi Digital News.