Monday, September 14, 2026

ಮದರಂಗಡಿ ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಇಬ್ಬರು ಆರೋಪಿಗಳಿಗೆ 10 ದಿನ ಪೊಲೀಸ್ ಕಸ್ಟಡಿ

ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಗುತ್ತಿಗೆದಾರ ಡೇವಿಡ್ ಡಿಸೋಜ ಶೂಟೌಟ್ ಪ್ರಕರಣದ ಇಬ್ಬರು ಆರೋಪಿಗಳನ್ನು ಉಡುಪಿ ನ್ಯಾಯಾಲಯವು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ.

ನ್ಯಾಯಾಂಗ ಬಂಧನದಲ್ಲಿದ್ದ ಬಂಧಿತ ಆರೋಪಿಗಳಾದ ಉತ್ತರಾಖಂಡದ ಅಜಯ್ ಅಲಿಯಾಸ್ ಅನ್ಮೋಲ್ ರಸ್ತಗಿ ಹಾಗೂ ಬಿಹಾರದ ಜಿಯಾವುಲ್ಲಾ ಅಲಿಯಾಸ್ ದೀಪಕ್ ಎಂಬವರನ್ನು ಪ್ರಕರಣದ ತನಿಖಾಧಿಕಾರಿ ಕಾಪು ಪೊಲೀಸ್ ನಿರೀಕ್ಷಕ ಅಝ್ಮತ್ ಅಲಿ ನೇತೃತ್ವದಲ್ಲಿ ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಪೊಲೀಸರು ಆರೋಪಿಯನ್ನು ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ನ್ಯಾಯಾಧೀಶ ಪುರುಷೋತ್ತಮರಲ್ಲಿ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ನ್ಯಾಯಾಧೀಶರು ಆರೋಪಿಗಳನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದರು.

ಸೂತ್ರಧಾರನ ಪತ್ತೆಗೆ ಉತ್ತರ ಭಾರತದಲ್ಲಿ ಶೋಧ; ಹಲವರ ವಿಚಾರಣೆ
ಡೇವಿಡ್ ಡಿಸೋಜ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣದ ಸೂತ್ರಧಾರನ ಸುಳಿವು ಈಗಾಗಲೇ ಪೊಲೀಸರಿಗೆ ಲಭಿಸಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸ್ ತಂಡ ಉತ್ತರ ಭಾರತಕ್ಕೆ ತೆರಳಿ ಹಲವರನ್ನು ವಿಚಾರಣೆಗೆ ಒಳಪಡಿಸಿದೆ ಎಂದು ತಿಳಿದುಬಂದಿದೆ.

ಅದಾನಿ ಯುಪಿಸಿಎಲ್ ಕಾಮಗಾರಿಗೆ ಸಂಬಂಧಿಸಿದ ಹಣಕಾಸು ವಿಚಾರದಲ್ಲಿ ಡೇವಿಡ್ ಡಿಸೋಜ ಅವರನ್ನು ಸುಪಾರಿ ನೀಡಿ ಹತ್ಯೆ ನಡೆಸಿರುವುದರಿಂದ ಕಾಮಗಾರಿ ಗುತ್ತಿಗೆ ವಹಿಸಿರುವ ಉತ್ತರ ಭಾರತದ ಗುತ್ತಿಗೆದಾರನ ಬಂಧನಕ್ಕೆ ಎರಡು ಪೊಲೀಸ್ ತಂಡ, ಹರಿಯಾಣ, ಪಂಜಾಬ್, ಉತ್ತರ ಪ್ರದೇಶಕ್ಕೆ ತೆರಳಿದೆ.

ಡೇವಿಡ್ ಡಿಸೋಜರ ಹತ್ಯೆಗೆ ಸುಪಾರಿ ನೀಡಿರುವ ಸೂತ್ರಧಾರನ ಬಗ್ಗೆ ಈಗಾಗಲೇ ಪೊಲೀಸರಿಗೆ ಸುಳಿವು ದೊರೆತಿದ್ದು, ಆ ನಿಟ್ಟಿನಲ್ಲಿ ಈಗಾಗಲೇ ಹರಿಯಾಣ ತಲುಪಿರುವ ತಂಡ ಆರೋಪಿಗಳಿಗಾಗಿ ವ್ಯಾಪಾಕ ಶೋಧ ಕಾರ್ಯ ನಡೆಸುತ್ತಿದೆ. ತಂಡ ಹರಿಯಾಣ, ಪಂಬಾಜ್ ರಾಜ್ಯಗಳಲ್ಲಿ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಈವರೆಗೆ ಯಾರನ್ನು ಕೂಡ ಪೊಲೀಸರು ಬಂಧಿಸಿಲ್ಲ ಎಂದು ತಿಳಿದುಬಂದಿದೆ.

More like this
Related

ಉಡುಪಿ ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ...

ಕಡಿಯಾಳಿಯಲ್ಲಿ ವಜ್ರಮಹೋತ್ಸವದ ಸಂಭ್ರಮ: ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಕಡಿಯಾಳಿ ವತಿಯಿಂದ ಆಯೋಜಿಸಲಾಗಿರುವ 60ನೇ...

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ...

Copying is disabled on Udupi Digital News.