Sunday, September 27, 2026

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಎಂಡಿಎಂಎ ಸಹಿತ ಮೂವರು ಆರೋಪಿಗಳ ಸೆರೆ, 24 ಲಕ್ಷ ರೂ. ಮೌಲ್ಯದ ಮಾದಕವಸ್ತು ವಶ

ಮಂಗಳೂರು : ನಗರದಲ್ಲಿ ನಿಷೇಧಿತ ಮಾದಕವಸ್ತು ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು 24 ಲಕ್ಷ ರೂ. ಮೌಲ್ಯದ 240 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಂಡಿರುತ್ತಾರೆ.

ಬಂಧಿತರನ್ನು ಕೈರಂಗಳ ಗ್ರಾಮದ ನವಾಝ್ ಯಾನೆ ನವ್ವಾ ಯಾನೆ ಮುಡಿಪು ನವಾಝ್ (35), ಕೈರಂಗಳ ಗ್ರಾಮದ ನಟ್ಟಿಹಿತ್ತುಲು ಮನೆಯ ಮುಹಮ್ಮದ್ ಆರೀಫ್ ಎನ್. (36), ಕೈರಂಗಳ ಗ್ರಾಮದ ಮತ್ತೆಬಾರೆ ಮನೆಯ ಲಾಯ್ಡ್ ಡಿಸೊಜ (35)ಎಂದು ಗುರುತಿಸಲಾಗಿದೆ.

ಆರೋಪಿಗಳು ಬೆಂಗಳೂರಿನಿಂದಎಂಡಿಎಂಎ ಖರೀದಿಸಿಕೊಂಡು ಮಂಗಳೂರಿನಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಶನಿವಾರ ಸಂಜೆ ಉಳ್ಳಾಲ ತಾಲುಕಿನ ಮುಡಿಪು ಕಾಯರ್‌ಗೋಳಿ ಕ್ರಾಸ್ ಬಳಿ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ್ದ ನಾಲ್ಕು ಮೊಬೈಲ್ ಫೋನ್, ಟೆಂಪೋ ವಶಪಡಿಸಿಕೊಂಡಿದ್ದಾರೆ. ಇವುಗಳ ಒಟ್ಟು ಮೌಲ್ಯ 29,80,000 ರೂ. ಎಂದು ಅಂದಾಜಿಸಲಾಗಿದೆ.

ಆರೋಪಿ ನವಾಝ್ ವಿರುದ್ಧ ಮಂಗಳೂರು ನಗರದ ಕೊಣಾಜೆ, ಉಳ್ಳಾಲ, ಮುಲ್ಕಿ, ಸುರತ್ಕಲ್, ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲ್ಲೆ, ಬೆದರಿಕೆ, ಕೊಲೆಯತ್ನ, ಅಪಹರಣ, ಅತ್ಯಾಚಾರ, ವಂಚನೆ, ಮೋಸ, ಜಾನುವಾರು ಕಳವು ಹಾಗೂ ಮಾದಕವಸ್ತು ಮಾರಾಟ ಸಹಿತ 16 ಪ್ರಕರಣಗಳು ದಾಖಲಾಗಿವೆ.

ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

More like this
Related

ಕೊಡವೂರು ಬ್ರಹ್ಮಕಲಶೋತ್ಸವ: ಪೂರ್ವಭಾವಿ ಸಭೆ

ಉಡುಪಿ: ಜನವರಿ 20, 2027 ಮಹಾತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನ, ಕೊಡವೂರಿನ...

ಬಾಲ್ಕನಿ ತಡೆಗೋಡೆ ಕುಸಿದು ವಿದ್ಯಾರ್ಥಿ ಮೃತ್ಯು: ಸಂಘಟಕ, ಕಟ್ಟಡ ಮಾಲೀಕನ ವಿರುದ್ಧ ಪ್ರಕರಣ

ಮಂಗಳೂರು: ನಗರದ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಶನ್ ಹಾಲ್‌ನ ಮೊದಲ ಮಹಡಿಯ...

ಮಂಗಳೂರು: ಬಾಲ್ಕನಿ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರು: ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿ ಕುಸಿದು...

ದಕ ಬೆಳೆಗಾರರ ಸಾವಯವ ಸಂಯುಕ್ತ ರೈತ ಉತ್ಪಾದಕ ಕಂಪನಿ ಲಿಮಿಟೆಡ್ ಇದರ ಬ್ರಹ್ಮಾವರ ಶಾಖೆಯ ಉದ್ಘಾಟನೆ

ಬ್ರಹ್ಮಾವರ: ದಕ್ಷಿಣ ಕನ್ನಡ ಬೆಳೆಗಾರರ ಸಾವಯವ ಸಂಯುಕ್ತ ರೈತ ಉತ್ಪಾದಕ ಕಂಪನಿ...

Copying is disabled on Udupi Digital News.