Thursday, July 2, 2026

ಮಂಗಳೂರು: ನಾಗುರಿಯಲ್ಲಿ ಮನೆ ಕುಸಿದು ಮೂವರು ಮೃತ್ಯು; ಮೂವರು ಅಪಾಯದಿಂದ ಪಾರು

ಮಂಗಳೂರು: ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ಬುಧವಾರ ಮುಂಜಾನೆ ಸುರಿದ ಭಾರೀ ಗಾಳಿ-ಮಳೆಗೆ ಮನೆಯೊಂದು ಕುಸಿದ ಪರಿಣಾಮ ಮಹಿಳೆಯೊಬ್ಬರು ಹಾಗೂ ಇಬ್ಬರು ಹೆಣ್ಮಕ್ಕಳು ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ.

ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಅವಘಡದ ವೇಳೆ ಒಟ್ಟು ಆರು ಮಂದಿ ಮನೆಯಲ್ಲಿ ಇದ್ದರು. ಅವರಲ್ಲಿ ಮೂವರು ಮೃತಪಟ್ಟಿದ್ದು, ಉಳಿದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೃತರನ್ನು ಅನಾಮಿಕ ಚೌರಾಸಿಯ (8), ಪರಿ (4) ಮತ್ತು ಶಾಂತ (46) ಎಂದು ಗುರುತಿಸಲಾಗಿದೆ. ಅಲ್ಕಾ (14), ಅನುಷಾ (11) ಮತ್ತು ಬಾಲಕೃಷ್ಣ (48) ರಕ್ಷಣಾ ಕಾರ್ಯದಲ್ಲಿ ಬದುಕಿ ಉಳಿದವರು ಎಂದು ಗುರುತಿಸಲಾಗಿದೆ. ಇವರು ಮೂಲತ ಬಿಹಾರ ರಾಜ್ಯದವರಾಗಿದ್ದು, ಪ್ರಸ್ತುತ  ಕಂಕನಾಡಿ ಗ್ರಾಮದ, ಕಂಕನಾಡಿ ಪೊಲೀಸ್ ಠಾಣಾ ಹಿಂಬಾಗದಲ್ಲಿ  ಕಳೆದ 20 ವರ್ಷಗಳಿಂದ ವಾಸ ಮಾಡಿಕೊಂಡಿರುತ್ತಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ, ಎನ್‌ಡಿಆರ್‌ಎಫ್ ತಂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಮೇಲ್ಚಾವಣಿಯ ಅವಶೇಷಗಳ ಅಡಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಒಬ್ಬ ಪುರುಷ ಹಾಗೂ ಇಬ್ಬರು ಬಾಲಕಿಯರನ್ನು ಪ್ರಾಣಾಪಾಯದಿಂದ ರಕ್ಷಿಸಲಾಗಿದೆ. ಮಂಗಳವಾರ ರಾತ್ರಿಯಿಂದ  ಸುರಿದ ಭಾರಿ ಮಳೆಯಿಂದಾಗಿ ಹಳೆಯದಾಗಿದ್ದ ಮನೆಯ ಗೋಡೆಗಳು ಸಂಪೂರ್ಣವಾಗಿ ತೇವಗೊಂಡು ಈ ದುರಂತ ಸಂಭವಿಸಿದೆ ಎನ್ನಲಾಗಿದೆ.

ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಾಗೂರಿ ದುರಂತ: ಸಚಿವ ಖಾದರ್ ದೆಹಲಿ ಪ್ರವಾಸ ಮೊಟಕು

ನಗರದ ನಾಗೂರಿಯಲ್ಲಿ ಮನೆ ಕುಸಿದು ಮೂವರು ಸಾವನ್ನಪ್ಪಿದ ಘಟನೆಯ ಹಿನ್ನಲೆಯಲ್ಲಿ ದೆಹಲಿ ಪ್ರವಾಸದಲ್ಲಿರುವ ಆರೋಗ್ಯ ಸಚಿವ ಯು ಟಿ ಖಾದರ್ ಅವರು ತಮ್ಮ ಭೇಟಿಯನ್ನು ಮೊಟಕುಗೊಳಿಸಿದ್ದಾರೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿದ ಸಚಿವರು, ತ್ವರಿತ ಪರಿಹಾರ ಕ್ರಮಗಳಿಗೆ ಸೂಚಿಸಿದರು. ಗಾಯಾಳುಗಳಿಗೆ ಸರಕಾರದ ವತಿಯಿಂದಲೇ ಆಸ್ಪತ್ರೆಯಲ್ಲಿ ಚಿಕಿತ್ಸಾ ವೆಚ್ಚ ಭರಿಸಲು ಹಾಗೂ ಮೃತರ ಕುಟುಂಬದವರಿಗೆ ಇಂದೇ ಪರಿಹಾರ ಮೊತ್ತ ನೀಡಲು ಅವರು ನಿರ್ದೇಶಿಸಿದ್ದಾರೆ. ಸಚಿವರು ಇಂದು ಮಧ್ಯಾಹ್ನ ಮಂಗಳೂರು ತಲುಪಲಿದ್ದಾರೆ.

More like this
Related

ಬೆಂಗಳೂರು ಕ್ವಾರಿ ದುರಂತ: ಮೃತ ಕಾರ್ಮಿಕರ ಕುಟುಂಬಗಳಿಗೆ ಸಾಂತ್ವನ ಹೇಳಿದ ಸಿಎಂ ಶಿವಕುಮಾರ್

ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕಿನ ಮಡಪಟ್ಟಣದ ಕಲ್ಲು ಕ್ರಷರ್ ಘಟಕದಲ್ಲಿ ಬಂಡೆ...

ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ

ಉಡುಪಿ: ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ವತಿಯಿಂದ ಸಂಸ್ಕೃತಿ ವಿಶ್ವ ಪ್ರತಿಷ್ಠಾನ...

ಮಾಧ್ಯಮಗಳಿಂದ ಸತ್ಯ ಎತ್ತಿಹಿಡಿಯುವ ಕಾರ್ಯ ಆಗಬೇಕು: ಡಾ.ಶುಭಾ ಎಚ್‌.ಎಸ್‌.

ಪತ್ರಿಕಾ ದಿನಾಚರಣೆ: ಜೇಮ್ಸ್‌ ವಾಝ್‌ಗೆ ಪ್ರತಿಕಾ ದಿನದ ಗೌರವ ಉಡುಪಿ: ಸಮಾಜದ ಸಮಸ್ಯೆಗಳನ್ನು...

ರೆಡ್ ಅಲರ್ಟ್ ಹಿನ್ನೆಲೆ: ನಾಳೆ(ಜುಲೈ 2) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ...

Copying is disabled on Udupi Digital News.