Sunday, September 13, 2026

ಮಣಿಪಾಲ| ನಕಲಿ ಇ-ಮೇಲ್ ಮೂಲಕ ಸಂಶೋಧನಾ ನಿರ್ದೇಶಕರಿಗೆ ಕಳಂಕ ತರುವ ಯತ್ನ : ಪ್ರಕರಣ ದಾಖಲು

ಮಣಿಪಾಲ: ನಕಲಿ ಗುರುತಿನ ಹೆಸರಿನಲ್ಲಿ ಇ-ಮೇಲ್ ಖಾತೆ ಸೃಷ್ಟಿಸಿ ಸಂಶೋಧನಾ ನಿರ್ದೇಶಕರ ಸಂಶೋಧನೆ ಕುರಿತು ಅಂತಾರಾಷ್ಟ್ರೀಯ ಜರ್ನಲ್‌ಗಳ ಸಂಪಾದಕರು ಹಾಗೂ ಪ್ರಕಾಶಕರಿಗೆ ತಪ್ಪು ಮಾಹಿತಿ ರವಾನಿಸಿ, ಅವರ ವೃತ್ತಿಜೀವನಕ್ಕೆ ಧಕ್ಕೆ ತರುವ ಪ್ರಯತ್ನ ನಡೆದಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಿರ್ಯಾದಿದಾರರಾದ ನವೀನ್ ಸಾಲಿನ್ಸ್ (49) ಅವರು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನ ಸಂಶೋಧನಾ ನಿರ್ದೇಶನಾಲಯದಲ್ಲಿ ಸಂಶೋಧನಾ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಕೆಎಂಸಿ ವೈದ್ಯರಾಗಿ ಹಾಗೂ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಪ್ಯಾಲಿಯೇಟಿವ್ ಮೆಡಿಸಿನ್ ವಿಭಾಗದ ಪ್ರಾಧ್ಯಾಪಕರಾಗಿದ್ದಾರೆ. ಕ್ಯಾನ್ಸರ್ ಸೇರಿದಂತೆ ಗಂಭೀರ ಹಾಗೂ ಅಂತಿಮ ಹಂತದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಚಿಕಿತ್ಸೆ ನೀಡುವುದರ ಜೊತೆಗೆ, ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ.

ದಿನಾಂಕ 01-09-2026ರಂದು ಅಪರಿಚಿತ ವ್ಯಕ್ತಿಯೊಬ್ಬರು ‘Phytophthora X’ ಎಂಬ ನಕಲಿ ಗುರುತನ್ನು ಬಳಸಿಕೊಂಡು Jay.Pereira@protonmail.com ಇ-ಮೇಲ್ ಖಾತೆಯಿಂದ ಅಂತಾರಾಷ್ಟ್ರೀಯ ಜರ್ನಲ್‌ಗಳ ಸಂಪಾದಕರು ಹಾಗೂ ಪ್ರಕಾಶಕರಿಗೆ ಇ-ಮೇಲ್ ಕಳುಹಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಇ-ಮೇಲ್‌ಗಳಲ್ಲಿ ಪಿರ್ಯಾದಿದಾರರ ಸಂಶೋಧನೆ ಕುರಿತು ತಪ್ಪು ಮಾಹಿತಿಯನ್ನು ನೀಡಿ, ಸಂಶೋಧನೆಯ ವಿಶ್ವಾಸಾರ್ಹತೆಗೆ ಧಕ್ಕೆ ತರುವ ಹಾಗೂ ಅವರ ಹೆಸರಿಗೆ ಕಳಂಕ ತರುವ ಪ್ರಯತ್ನ ಮಾಡಲಾಗಿದೆ ಎನ್ನಲಾಗಿದೆ. ಅಲ್ಲದೆ, ಪಿರ್ಯಾದಿದಾರರಿಂದ ಪ್ರಕಟಿಸಲಾದ ಸಂಶೋಧನಾ ಲೇಖನಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ, ಅವರ ವೃತ್ತಿಜೀವನದ ಪ್ರಗತಿಗೆ ಅಡ್ಡಿಪಡಿಸುವ ಹಾಗೂ ಪ್ರಸ್ತುತ ಉದ್ಯೋಗಕ್ಕೂ ಅಪಾಯ ಉಂಟು ಮಾಡುವ ಸಾಧ್ಯತೆಯಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

More like this
Related

ಠಾಣೆಗೆ ನುಗ್ಗಿದರೆ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆ ಉಚಿತ : ಪ್ರತಾಪ್ ಸಿಂಹ ಹೆಸರು ಹೇಳದೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬೆಂಗಳೂರು: ಮೈಸೂರಿನ ಕಡೆಯ ‘ಪೇಟೆ ರೌಡಿ’ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ. ಕಾನೂನು...

ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವಕ್ಕೆ ವಜ್ರ ಮಹೋತ್ಸವದ ಸಂಭ್ರಮ

ವಜ್ರ ಮಹೋತ್ಸವದ ಅಂಗವಾಗಿ ‘ರಾಜ ದರ್ಬಾರ್’ ವೇದಿಕೆ ನಿರ್ಮಾಣ ಉಡುಪಿ: ಕಡಿಯಾಳಿ ಸಾರ್ವಜನಿಕ...

ಕರಾವಳಿ ಸಚಿವ ಸಂಪುಟ ಸಭೆ: ₹5,000 ಕೋಟಿ ವಿಶೇಷ ಪ್ಯಾಕೇಜ್ ಸೇರಿ ಪ್ರಮುಖ ಬೇಡಿಕೆಗಳಿಗೆ ಶಾಸಕ ಮಂಜುನಾಥ್ ಭಂಡಾರಿ ಮನವಿ

ಮಂಗಳೂರು: ಕರಾವಳಿ ಭಾಗದ ಸುದೀರ್ಘ ಬೇಡಿಕೆಗಳು ಹಾಗೂ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ...

ಉಡುಪಿ ಕಥೊಲಿಕ್ ಶಿಕ್ಷಣ ಸೊಸೈಟಿ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ

ಶಿಕ್ಷಕರು ವಿದ್ಯಾರ್ಥಿಗಳನ್ನು ಮಾನವರನ್ನಾಗಿ ರೂಪಿಸುವ ಸಮಾಜದ ಶಿಲ್ಪಿಗಳು : ವಂ. ಫ್ರಾನ್ಸಿಸ್...

Copying is disabled on Udupi Digital News.